ಬೆಂಗಳೂರು: ಕಲ್ಯಾಣ ಕರ್ನಾಟಕದ ಶಿಕ್ಷಕರ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಶೀಘ್ರವೇ 5,000 ಶಿಕ್ಷಕರನ್ನು ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುತ್ತಿದೆ.
ಕಲ್ಯಾಣ ಕರ್ನಾಟಕ ಭಾಗದಲ್ಲಿ ಶೀಘ್ರದಲ್ಲೇ 5 ಸಾವಿರ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುವುದು. ನಮ್ಮ ಸರ್ಕಾರದಿಂದ ಈ 7 ಜಿಲ್ಲೆಗಳ ಶೇ.80 ರಷ್ಟು ಶಿಕ್ಷಕರ ಹುದ್ದೆ ಭರ್ತಿ ಮಾಡಲಾಗುವುದು. ವಿದ್ಯಾರ್ಥಿಗಳಿಗೆ ತಕ್ಕಂತೆ ಶಿಕ್ಷಕರ ನೇಮಕಾತಿ ನಡೆಸಲಾಗುವುದು ಎಂದು ಶಾಲಾ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ತಿಳಿಸಿದ್ದಾರೆ.
ಅಂದಹಾಗೇ ಈಗಾಗಲೇ ಖಾಲಿ ಹುದ್ದೆಗಳ ಮಾಹಿತಿಯನ್ನು ಇಲಾಖೆ ಪಡೆದುಕೊಂಡಿದೆ. ಅವುಗಳ ನೇಮಕಾತಿಗೂ ಆರ್ಥಿಕ ಇಲಾಖೆಗೆ ಸಲ್ಲಿಸಲಾಗಿದೆ. ಆರ್ಥಿಕ ಇಲಾಖೆಯಿಂದ ಅನುಮತಿಸಿದ ಕೂಡಲೇ ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಾಲಿ ಇರುವಂತ 5,000 ಶಿಕ್ಷಕರ ನೇಮಕಾತಿಗೆ ಅಧಿಸೂಚನೆ ಹೊರ ಬೀಳಲಿದೆ.
ಕಲ್ಯಾಣ ಕರ್ನಾಟಕ ಭಾಗದಲ್ಲಿ ಶೀಘ್ರದಲ್ಲೇ 5 ಸಾವಿರ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುವುದು. ನಮ್ಮ ಸರ್ಕಾರದಿಂದ ಈ 7 ಜಿಲ್ಲೆಗಳ ಶೇ.80 ರಷ್ಟು ಶಿಕ್ಷಕರ ಹುದ್ದೆ ಭರ್ತಿ ಮಾಡಲಾಗುವುದು. ವಿದ್ಯಾರ್ಥಿಗಳಿಗೆ ತಕ್ಕಂತೆ ಶಿಕ್ಷಕರ ನೇಮಕಾತಿ ನಡೆಸಲಾಗುವುದು ಎಂದು ಶಾಲಾ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ತಿಳಿಸಿದ್ದಾರೆ.… pic.twitter.com/WgSKm2A601
— DIPR Karnataka (@KarnatakaVarthe) September 26, 2024
ಎಚ್ಚರ.! ‘ಪೌರಕಾರ್ಮಿಕ’ರನ್ನು ಅಗೌರವದಿಂದ ಕಾಣುವುದು ‘ಶಿಕ್ಷಾರ್ಹ ಅಪರಾಧ’
‘ಪ್ರೌಢ ಶಾಲಾ ವಿದ್ಯಾರ್ಥಿ’ಗಳಿಗೆ ಗುಡ್ ನ್ಯೂಸ್: ರಾಜ್ಯ ಸರ್ಕಾರದಿಂದ ‘ಇಂಟರ್ನೆಟ್’ ನೀಡಲು ನಿರ್ಧಾರ