ಬೆಂಗಳೂರು : ರಾಜ್ಯ ಸರ್ಕಾರವು ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಸರ್ಕಾರಿ ಶಾಲೆಗಳಿಗೆ 10 ಸಾವಿರ ಶಿಕ್ಷಕರ ನೇಮಕಕ್ಕೆ ಅನುಮತಿ ನೀಡುವಂತೆ ಕೋರಿ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ.
ರಾಜ್ಯ ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ 10 ಸಾವಿರ ಶಿಕ್ಷಕರ ನೇಮಕಾತಿ ಸಂಬಂಧಿಸಿದಂತೆ ಶಿಕ್ಷಣ ಇಲಾಖೆಯು ಪ್ರಕ್ರಿಯೆಗಳನ್ನು ಮಾಡಿಕೊಳ್ಳುತ್ತಿದ್ದು, ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಿದೆ. ಅನುಮತಿ ನೀಡಿದ ತಕ್ಷಣ ಅಧಿಸೂಚನೆ ಹೊರಡಿಸಿ ಪ್ರಕ್ರಿಯೆಗೆ ಚಾಲನೆ ನೀಡಲಿದೆ ಎನ್ನಲಾಗಿದೆ.
ರಾಜ್ಯದ ಪ್ರಾಥಮಿಕ ಶಾಲೆಗಳಿಗೆ 35 ಸಾವಿರ ಮತ್ತು ಪ್ರೌಢಶಾಲೆಗಳಲ್ಲಿ 10 ಸಾವಿರ ಸೇರಿ 45 ಸಾವಿರ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಶಿಕ್ಷಣ ಇಲಾಖೆಯು ಅನುಮತಿ ನೀಡಿದೆ. ಇನ್ನು ಶಿಕ್ಷಕರ ನೇಮಕಾತಿ ಪರೀಕ್ಷೆ ಬರೆಯಲು 1.25 ಲಕ್ಷ ಮಂದಿ ಟಿಇಟಿ ಉತ್ತೀರ್ಣರಾಗಿ ಅರ್ಹತೆ ಪಡೆದಿದ್ದು, ಇದೀಗ ಮತ್ತೆ ಈಗ ಜೂ.30ರಂದು ಟಿಇಟಿ ನಡೆಸಲಾಗಿದ್ದು, 2.5 ಲಕ್ಷ ಮಂದಿ ಟಿಇಟಿ ಬರೆದಿದ್ದಾರೆ. ಕನಿಷ್ಠ 1.5 ಲಕ್ಷ ಮಂದಿ ಅರ್ಹ ಅಭ್ಯರ್ಥಿಗಳಿದ್ದಾರೆ.