ಬೆಂಗಳೂರು: ರಾಜ್ಯದ ಶಾಲಾ ಶಿಕ್ಷಕರಿಗೆ ಗುಡ್ ನ್ಯೂಸ್ ಎನ್ನುವಂತೆ ಹೊಸ ಪಿಂಚಣಿ ಯೋಜನೆ ರದ್ದುಗೊಳಿಸಿ, ಹಳೆಯ ಪಿಂಚಣಿ ಯೋಜನೆ ಜಾರಿಗೊಳಿಸಲು ಈ ವರ್ಷದಲ್ಲಿ ನೇಮಕಗೊಂಡ ಶಿಕ್ಷಕರು ಅರ್ಹರು ಎಂಬುದಾಗಿ ಹೇಳಿದೆ.
ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯ ಪ್ರಾಥಮಿಕ ಶಿಕ್ಷಣದ ನಿರ್ದೇಶಕರು ದಿನಾಂಕ: 01-04-2006 ರ ಪೂರ್ವದಲ್ಲಿ ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆ ಹೊಂದಿ ಆ ದಿನಾಂಕದಿಂದ ಅಥವಾ ನಂತರದಲ್ಲಿ ಸೇವೆಗೆ ಸೇರಿದ ಶಿಕ್ಷಕರುಗಳನ್ನು ಹಳೆಯ ಡಿಫ್ರೆಂಡ್ ಪಿಂಚಣಿ ಸೌಲಭ್ಯಕ್ಕೆ ಒಳಪಡಿಸುವ ಸಂಬಂಧ, ನಮೂನೆ-01 ಮತ್ತು ನಮೂನೆ-02 ರಲ್ಲಿ ಮಾಹಿತಿಯನ್ನು ಸಿದ್ಧಪಡಿಸಿ ಈ ಕಛೇರಿಗೆ ಸಲ್ಲಿಸಿರುತ್ತಾರೆ. ಸದರಿ ಮಾಹಿತಿಯನ್ನು ಈಗಾಗಲೇ ಸರ್ಕಾರಕ್ಕೆ ಸಲ್ಲಿಸಲಾಗಿದೆ ಎಂದಿದ್ದಾರೆ.
ಈ ಸಂಬಂಧ ದೃಡೀಕರಣ ಪತ್ರವನ್ನು ಸಲ್ಲಿಸಲು ಸೂಚಿಸಲಾಗಿದ್ದು, ಅದರಂತೆ ಬೆಂಗಳೂರು ಮತ್ತು ಮೈಸೂರು ವಿಭಾಗದ ಪ್ರಾಥಮಿಕ ಶಾಲಾ ಶಿಕ್ಷಕರನ್ನು ಹಿಂದಿನ ಡಿಫೈನ್ ಪಿಂಚಣಿ ಯೋಜನೆಗೆ ಒಳಪಡಿಸುವ ಕುರಿತು ದೃಢೀಕರಿಸಿ ಎಂದು ಹೇಳಿದ್ದಾರೆ.
ಇನ್ನೂ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರ ಆದೇಶದಲ್ಲಿ ದಿನಾಂಕ: 01-04-2006 ಪೂರ್ವದಲ್ಲಿ ಹೊರಡಿಸಲಾಗಿರುವ ನೇಮಕಾತಿ ಅಧಿಸೂಚನೆ ಮೂಲಕ ಆಯ್ಕೆ ಹೊಂದಿ ದಿನಾಂಕ: 01-04-2006 ರಂದು ಅಥವಾ ತದನಂತರ ನೇಮಕಗೊಂಡ ಬೆಂಗಳೂರು ಮತ್ತು ಮೈಸೂರು ವಿಭಾಗದ ಪ್ರಾಥಮಿಕ ಶಾಲಾ ಶಿಕ್ಷಕರನ್ನು ಹಿಂದಿನ ಡಿಫೈನ್ಸ್ ಪಿಂಚಣಿ ಯೋಜನೆಗೆ ಒಳಪಡಿಸುವ ಕುರಿತು ದಿನಾಂಕ:10-03-2025 ರ ಪತ್ರದೊಂದಿಗೆ ಸಲ್ಲಿಸಿರುವ ಒಟ್ಟು 2302 ಪ್ರಾಥಮಿಕ ಶಾಲಾ ಶಿಕ್ಷಕರ ಮಾಹಿತಿಯನ್ನು ಪರಿಶೀಲಿಸಿದ್ದು, ಸದರಿ ಒಟ್ಟು ಪ್ರಾಥಮಿಕ 2302 ಶಾಲಾ ಶಿಕ್ಷಕರು ಹಿಂದಿನ ಡಿಫೈನ್ಸ್ ಪಿಂಚಣಿ ಯೋಜನೆಗೆ ಒಳಪಡಿಸಲು ಅರ್ಹರಿರುತ್ತಾರೆಂದು ಈ ಮೂಲಕ ದೃಡೀಕರಿಸಿದೆ ಎಂದು ಹೇಳಿದ್ದಾರೆ.

ALERT : ತೊಳೆಯದ `ತಲೆದಿಂಬು’ ಬಳಸುವವರೇ ಎಚ್ಚರ : ಇದರಲ್ಲಿವೆ `ಟಾಯ್ಲೆಟ್ ಸೀಟ್’ ಗಿಂತ ಡೇಂಜರ್ ಬ್ಯಾಕ್ಟೀರಿಯಾ.!








