ಮಂಗಳೂರು : ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿಯೊಂದು ಸಿಕ್ಕಿದ್ದು, ರಾಜ್ಯದಲ್ಲಿ ಶೀಘ್ರವೇ 18,800 ಹೊಸ ಶಿಕ್ಷಕರ ನೇಮಕಾತಿ ಮಾಡಲಾಗುವುದು ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಸರ್ಕಾರಿ ಶಾಲೆಗಳಿಗೆ 13 ಸಾವಿರ ಶಿಕ್ಷಕರು ಹಾಗೂ ಅನುದಾನಿತ ಶಾಲೆಗಳಿಗೆ ಸುಮಾರು 5,800 ಶಿಕ್ಷಕರು ಸೇರಿದಂತೆ ಒಟ್ಟು 18,800ಕ್ಕೂ ಅಧಿಕ ಶಿಕ್ಷಕರ ನೇಮಕ ಪ್ರಕ್ರಿಯೆ ಸಿದ್ದತೆ ನಡೆಯುತ್ತಿದ್ದು, ಶೀಘ್ರವೇ ನೋಟಿಫಿಕೇಶನ್ ಹೊರಡಿಸಲಾಗುವುದು ಎಂದು ಹೇಳಿದ್ದಾರೆ.
ಜಸ್ಟಿಸ್ ನಾಗಮೋಹನ್ ದಾಸ್ ವರದಿ ಹಿನ್ನೆಲೆಯಲ್ಲಿ ನೇಮಕ ಪ್ರಕ್ರಿಯೆಯಲ್ಲಿ ವಿಳಂಬವಾಗಿತ್ತು, ಹೀಗಾಗಿ ಶೀಘ್ರವೇ ರಾಜ್ಯದಲ್ಲಿ 18,800 ಶಿಕ್ಷಕರ ನೇಮಕ ಮಾಡಲಾಗುವುದು ಎಂದು ತಿಳಿಸಿದ್ದಾರೆ.