ಬೆಂಗಳೂರು : ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಸಚಿವ ಮಧು ಬಂಗಾರಪ್ಪ ಸಿಹಿಸುದ್ದಿ ನೀಡಿದ್ದು, ಒಳ ಮೀಸಲಾತಿ ನಿಗದಿ ನಂತರ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ನೇಮಕಾತಿಗೆ ನಿರ್ಧರಿಸಲಾಗಿದೆ ಎಂದು ತಿಳಿಸಿದರು.
ಬಿಜೆಪಿಯ ಕೆ.ವಿವೇಕಾನಂದ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಒಳಮೀಸಲಾತಿ ನಿಗದಿಯಾಗದ ಕಾರಣ ಯಾವುದೇ ಇಲಾಖೆಗಳಲ್ಲೂ ನೇಮಕಾತಿ ಮಾಡುತ್ತಿಲ್ಲ, ಶಿಕ್ಷಣ ಇಲಾಖೆ ಯಲ್ಲಿ ಹೆಚ್ಚಿನ ಹುದ್ದೆಗಳನ್ನು ಭರ್ತಿ ಮಾಡಬೇಕಾಗಿದೆ. ಸರ್ಕಾರ ಅನುಮತಿ ನೀಡಿದ ನಂತರ ಭರ್ತಿ ಮಾಡಲಾಗುವುದು ಎಂದು ಹೇಳಿದ್ದಾರೆ.
ಶಾಲಾ ದಾಖ ಲಾತಿ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಲಾಗಿದೆ. ಶೈಕ್ಷಣಿಕ ಹಿಂದು ಳಿದ ತಾಲೂಕುಗಳಲ್ಲಿ 6-10ನೇ ತರಗತಿವರೆಗೆ ಇಂಗ್ಲಿಷ್ ಮಾಧ್ಯಮದಲ್ಲಿ ಕೇಂದ್ರೀಯ ವಿದ್ಯಾಲಯ ಮಾದರಿ ಯಲ್ಲಿ ಆದರ್ಶ ಶಾಲೆ ಆರಂಭಿಸಲಾಗಿದೆ. 1ನೇ ತರಗತಿಯಿಂದ ಪ್ರಸ್ತುತ ಇರುವ ಕನ್ನಡ/ಇತರೆ ಮಾಧ್ಯ ಮದ ಜೊತೆ 8,538 ಆಂಗ್ಲ ಮಾಧ್ಯಮದ ತರಗತಿ ಆರಂಭಿಸಲು ಅನುಮತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.