Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕಾಮೋತ್ತೇಜಕ, ಲೈಂಗಿಕ ಜೀವನವನ್ನು ಉತ್ತಮಗೊಳಿಸುವ 7 ಅದ್ಭುತ ಆಹಾರಗಳಿವು

03/05/2026 9:21 PM

ಸಂತೋಷದಾಯಕ ಲೈಂಗಿಕ ಜೀವನಕ್ಕೆ ‘ಫೋರ್‌ಪ್ಲೇ’ ಏಕೆ ಮುಖ್ಯ? ಇಲ್ಲಿವೆ ಪ್ರಮುಖ ಕಾರಣಗಳು

03/05/2026 9:18 PM

ಕಾರಿನ ಒಳಗಿನ ಕೆಟ್ಟ ವಾಸನೆಯಿಂದ ಮುಕ್ತಿ ಬೇಕೇ? ಈ 5 ಸುಲಭ ಉಪಾಯಗಳನ್ನು ಅನುಸರಿಸಿ!

03/05/2026 9:09 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ ಶೀಘ್ರವೇ 18,500 ಶಿಕ್ಷಕರ ನೇಮಕಾತಿ.!
KARNATAKA

ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ ಶೀಘ್ರವೇ 18,500 ಶಿಕ್ಷಕರ ನೇಮಕಾತಿ.!

By kannadanewsnow5703/09/2025 3:18 PM
vidhana soudha
vidhana soudha

ಶಿವಮೊಗ್ಗ : ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಸಚಿವ ಮಧು ಬಂಗಾರಪ್ಪ ಸಿಹಿಸುದ್ದಿ ನೀಡಿದ್ದು, ರಾಜ್ಯದಲ್ಲಿ ಶೀಘ್ರವೇ 18, 500 ಶಿಕ್ಷಕರ ನೇಮಕಾತಿಗೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.

ಅವರು ತಮ್ಮ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಮಾಧ್ಯಮ ಪ್ರತಿನಿಧಿಗಳಿಗೆ ವಿವರ ನೀಡಿ ಮಾತನಾಡುತ್ತಿದ್ದರು. ಶಿಕ್ಷಣ ಇಲಾಖೆಯಲ್ಲಿ ಶಿಕ್ಷಣದ ಕೊರತೆಯನ್ನು ಹೋಗಲಾಡಿಸಿ ಶೈಕ್ಷಣಿಕ ಚಟುವಟಿಕೆಗಳಿಗೆ ಯಾವುದೇ ಅಡ್ಡಿಯಾಗದಂತೆ ತಕ್ಷಣದ ಕ್ರಮವಾಗಿ 13000ಶಿಕ್ಷಕರನ್ನು ನಿಯೋಜಿಸಲಾಗಿದೆ. ಅಲ್ಲದೇ ಶೀಘ್ರದಲ್ಲಿ 18500 ಶಿಕ್ಷಕರ ನೇಮಕಾತಿಗೂ ಕ್ರಮ ಕೈಗೊಳ್ಳಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.

ಸರ್ವರಲ್ಲೂ ಸಮಾನತೆ ಕಾಣುವ ಹಿನ್ನೆಲೆಯಲ್ಲಿ ಕೈಗೊಳ್ಳಲಿರುವ ಜಾತಿಗಣತಿಯನ್ನು ಅಕ್ಟೋಬರ್ ಮಾಸಾಂತ್ಯದೊಳಗೆ ಪೂರ್ಣಗೊಳಿಸಲು ಉದ್ದೇಶಿಸಲಾಗಿದೆ. ಮಕ್ಕಳ ಕಲಿಕೆಗೆ ಅಡಚಣೆಯಾಗದಂತೆ ಶಿಕ್ಷಕರ ಸೇವೆಯನ್ನು ಬಳಸಿಕೊಳ್ಳಲಾಗುವುದು ಎಂದರು.

ರಾಜ್ಯದಲ್ಲಿ ನೂತನವಾಗಿ ಆರಂಭಿಸಲು ಉದ್ದೇಶಿಸಲಾಗಿದ್ದ ಕರ್ನಾಟಕ ಪಬ್ಲಿಕ್ ಸ್ಕೂಲ್ಗಳ ಸಂಖ್ಯೆಯನ್ನು 500 ರಿಂದ 800ಕ್ಕೆ ಹೆಚ್ಚಿಸುವ ಉದ್ದೇಶ ಹೊಂದಲಾಗಿದೆ. ವಿಶೇಷವಾಗಿ ಕಲ್ಯಾಣ ಕರ್ನಾಟಕದ ಜಿಲ್ಲೆಗಳಿಗೆ ಹೆಚ್ಚಿನ ಸಂಖ್ಯೆಯ ಶಾಲೆಗಳನ್ನು ತೆರೆಯುವ ಉದ್ದೇಶ ಹೊಂದಲಾಗಿದೆ. ಅದಕ್ಕಾಗಿ ಸರ್ಕಾರ ಈಗಾಗಲೇ 3000 ಕೋ.ರೂ.ಗಳನ್ನು ವೆಚ್ಚ ಮಾಡಲಿದೆ. ಅಲ್ಲದೇ ಅಂತಹ ಆಯ್ದ ಶಾಲೆಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಸರ್ಕಾರೇತರ ಸಂಸ್ಥೆಗಳಿಂದ ಆರ್ಥಿಕ ನೆರವನ್ನು ಪಡೆದುಕೊಳ್ಳಲಾಗುವುದು. ಈಗಾಗಲೇ ಅನೇಕ ಸರ್ಕಾರೇತರ ಸಂಸ್ಥೆಗಳು ಆಸಕ್ತಿ ತೋರಿವೆ ಎಂದವರು ನುಡಿದರು.

ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನ ಮುಂಗಾರು ಅವಧಿಯಲ್ಲಿ ನಿರಂತರವಾಗಿ ಸುರಿದ ಬಾರೀ ಮಳೆಯಿಂದಾಗಿ ಸುಮಾರು 45000 ಹೆಕ್ಟೇರ್ ಪ್ರದೇಶ ಅಡಿಕೆಬೆಳೆ ಕೊಳೆರೋಗಕ್ಕೆ ತುತ್ತಾಗಿದೆ ಅಲ್ಲದೇ ಸಹಸ್ರಾರು ಹೆಕ್ಟೇರ್ ಪ್ರದೇಶದಲ್ಲಿ ಬೆಳೆದ ಮೆಕ್ಕೆಜೋಳ ಬೆಳೆಯು ಹಾನಿಗೊಳಗಾಗಿದ್ದು, ಬೆಳೆನಷ್ಟದ ಪ್ರಮಾಣವನ್ನು ತ್ವರಿತವಾಗಿ ಒದಗಿಸುವಂತೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಈ ಬೆಳೆಹಾನಿಯ ಪ್ರಮಾಣ ಮತ್ತಷ್ಟು ಹೆಚ್ಚುವ ಸಂಭವವಿರುವ ಬಗ್ಗೆಯೂ ಮಾಹಿತಿ ಇದೆ. ಈಗಾಗಲೇ ಆಗಿರುವ ಬೆಳೆನಷ್ಟಕ್ಕೆ ಸಂಬಂಧಿಸಿದಂತೆ ಪರಿಹಾರ ಕ್ರಮ ಕೈಗೊಳ್ಳುವ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್.ಬಂಗಾರಪ್ಪ ಅವರು ಹೇಳಿದರು.

ಅಡಿಕೆ ಕೊಳೆರೋಗ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದ ವಿಜ್ಞಾನಿಗಳೊಂದಿಗೆ ಸಮಾಲೋಚನೆ ನಡೆಸಲಾಗಿದೆ ಅಲ್ಲದೇ ಸಂಭಾವ್ಯ ಬೆಳೆಹಾನಿಯನ್ನು ತಡೆಗಟ್ಟಲು ಇರುವ ಕ್ರಮಗಳ ಬಗ್ಗೆಯೂ ಮಾಹಿತಿ ಒದಗಿಸುವಂತೆ ಸೂಚಿಸಲಾಗಿದೆ ಎಂದರು.

ಬೆಳೆಹಾನಿಗೊಳಗಾಗಿರುವ ರೈತರಿಗೆ ಸಮಾಧಾನ ತರುವ ರೀತಿಯಲ್ಲಿ ಕೇಂದ್ರ ಸರ್ಕಾರವು ಪರಿಹಾರದ ಮೊತ್ತ ಘೋಷಿಸಬೇಕು. ಈಗಾಗಲೇ ಘೋಷಿಸಿರುವ ಮೊತ್ತ ಅತ್ಯಲ್ಪವಾಗಿದೆ. ಪರಿಹಾರಧನ ವಿತರಿಸುವ ವಿಷಯದಲ್ಲಿ ತಾರತಮ್ಯ ಧೋರಣೆ ಸರಿಯಲ್ಲ ಎಂದ ಅವರು, ತೆಂಗು ಅಭಿವೃಧ್ಧಿ ಮಂಡಳಿಯ ಶಾಖೆಯನ್ನು ಜಿಲ್ಲೆಯಲ್ಲಿ ಆರಂಭಿಸುವ ಬಗ್ಗೆಯೂ ಉದ್ದೇಶಿಸಲಾಗಿದೆ ಎಂದರು.

ಜಿಲ್ಲೆಯಲ್ಲಿ ಮಳೆಹಾನಿಗೊಳಗಾಗಿರುವ ನಗರ ಮತ್ತು ಪಟ್ಟಣ ಪ್ರದೇಶಗಳ ರಸ್ತೆಯನ್ನು ದುರಸ್ತಿಗೊಳಿಸಲು ಉದ್ದೇಶಿಸಲಾಗಿದೆ. ಪ್ರಗತಿಪಥ ಯೋಜನೆಯಡಿಯಲ್ಲಿ ಪ್ರತಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕನಿಷ್ಟ 50ಕಿ.ಮೀ. ಮುಖ್ಯರಸ್ತೆಯನ್ನು ಅಭಿವೃದ್ಧಿಪಡಿಸಲು ಸುಮಾರು 50ಕೋಟಿ ರೂ.ಗಳ ಅನುದಾನ ಸರ್ಕಾರವು ಬಿಡುಗಡೆ ಮಾಡಲಿದೆ. ಅಲ್ಲದೇ ಜಿಲ್ಲೆಯ ಮಲೆನಾಡು ಪ್ರದೇಶದ ವ್ಯಾಪ್ತಿಗೊಳಪಡುವುದರಿಂದ ಹೆಚ್ಚು ಪ್ರಮಾಣದ ರಸ್ತೆಗಳು ಹಾಳಾಗಿದ್ದು, ದುರಸ್ತಿಗೆ ಹೆಚ್ಚಿನ ಅನುದಾನ ಬಿಡುಗಡೆಗೊಳಿಸುವಂತೆ ಮಾನ್ಯಮುಖ್ಯಮಂತ್ರಿಗಳಲ್ಲಿ ಕೋರಲಾಗಿದ್ದು, ಮಾನ್ಯ ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿರುವುದಾಗಿ ತಿಳಿಸಿದರು.

ರಸ್ತೆ, ಕಟ್ಟಡ, ನೀರಾವರಿ ಸೇರಿದಂತೆ ಹಲವು ಯೋಜನೆಗಳನ್ನು ಕೈಗೆತ್ತಿಕೊಳ್ಳಲು ಸರ್ಕಾರದ ವತಿಯಿಂದ ಸಹಸ್ರಾರು ಕೋಟಿ ರೂ.ಗಳ ಮಂಜೂರು ಮಾಡಲಾಗಿದ್ದು, ಆ ಎಲ್ಲಾ ಕಾಮಗಾರಿಗಳ ಉದ್ಘಾಟನೆಗೆ ಮಾನ್ಯ ಮುಖ್ಯಮಂತ್ರಿಗಳನ್ನು ಶೀಘ್ರವೇ ಆಹ್ವಾನಿಸಲು ಉದ್ದೇಶಿಸಲಾಗಿದೆ ಎಂದರು.

ಜಿಲ್ಲಾ ಮೆಗ್ಗಾನ್ ಆಸ್ಪತ್ರೆಗೆ ನೆರೆಯ 26 ತಾಲೂಕುಗಳ ವ್ಯಾಪ್ತಿಯ ಜನರು ಚಿಕಿತ್ಸೆಗಾಗಿ ಆಗಮಿಸುತ್ತಿರುವುದನ್ನು ಗಮನಿಸಲಾಗಿದೆ. ಮುಂದಿನ 10-15 ದಿನಗಳಲ್ಲಿ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಿ, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನಾಗಿ ಪರಿವರ್ತಿಸಲಾಗುವುದು. ಅಲ್ಲದೇ ಕೊರತೆ ಇರುವ ಕೊಠಡಿಗಳ ನಿರ್ಮಾಣಕ್ಕೆ ಅಗತ್ಯ ಅನುದಾನ ಬಿಡುಗಡೆಗೊಳಿಸುವಂತೆ ಮಾನ್ಯ ಮುಖ್ಯಮಂತ್ರಿಗಳಿಗೆ ಕೋರಿಕೆ ಸಲ್ಲಿಸಲಾಗುವುದು ಎಂದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯೆ ಶ್ರೀಮತಿ ಬಲ್ಕೀಶ್ ಬಾನು, ಆರ್.ಪ್ರಸನ್ನಕುಮಾರ್, ಶ್ರೀನಿವಾಸ ಕರಿಯಣ್ಣ, ಕಲಗೋಡು ರತ್ನಾಕರ, ಕಲೀಂವುಲ್ಲಾ, ದೇವಿಕುಮಾರ್, ರಮೇಶ್, ಶೇಷಾದ್ರಿ, ರಮೇಶ್ಹೆಗ್ಡೆ, ಶರತ್ ಮರಿಯಪ್ಪ ಮತ್ತಿತರರು ಉಪಸ್ಥಿತರಿದ್ದರು.

Good news for teaching post aspirants: The state government will soon recruit 18500 teachers!
Share. Facebook Twitter LinkedIn WhatsApp Email

Related Posts

ಪದ್ಮಶ್ರೀ ಪುರಸ್ಕೃತ ಅಂಕೇಗೌಡ ದಂಪತಿಗಳ ಸಾಧನೆ ಅಪಾರ: ಸಂಸದ ಜಿ.ಕುಮಾರನಾಯಕ್

03/05/2026 8:36 PM2 Mins Read

ಮದ್ದೂರು ತಾಲೂಕು ಸರ್ಕಾರಿ ನೌಕರರ ಸಂಘದ ನೂತನ ಅಧ್ಯಕ್ಷರಾಗಿ ಬ್ಯಾಡರಹಳ್ಳಿ ಅಂಕೇಗೌಡ ಆಯ್ಕೆ

03/05/2026 8:34 PM1 Min Read

BREAKING: KPSC ಭ್ರಷ್ಟಾಚಾರ ತಡೆಗೆ ಮಹತ್ವದ ಕ್ರಮ: ಆರ್.ವಿ.ದೇಶಪಾಂಡೆ ನೇತೃತ್ವದಲ್ಲಿ ಸದನ ಸಮಿತಿ ರಚನೆ

03/05/2026 7:15 PM1 Min Read
Recent News

ಕಾಮೋತ್ತೇಜಕ, ಲೈಂಗಿಕ ಜೀವನವನ್ನು ಉತ್ತಮಗೊಳಿಸುವ 7 ಅದ್ಭುತ ಆಹಾರಗಳಿವು

03/05/2026 9:21 PM

ಸಂತೋಷದಾಯಕ ಲೈಂಗಿಕ ಜೀವನಕ್ಕೆ ‘ಫೋರ್‌ಪ್ಲೇ’ ಏಕೆ ಮುಖ್ಯ? ಇಲ್ಲಿವೆ ಪ್ರಮುಖ ಕಾರಣಗಳು

03/05/2026 9:18 PM

ಕಾರಿನ ಒಳಗಿನ ಕೆಟ್ಟ ವಾಸನೆಯಿಂದ ಮುಕ್ತಿ ಬೇಕೇ? ಈ 5 ಸುಲಭ ಉಪಾಯಗಳನ್ನು ಅನುಸರಿಸಿ!

03/05/2026 9:09 PM

ಭಾರತದಲ್ಲಿ ಹೆಚ್ಚುತ್ತಿದೆ ‘ಸ್ಲೀಪ್ ಡಿವೋರ್ಸ್’ ಕ್ರೇಜ್: ದಂಪತಿಗಳು ಪ್ರತ್ಯೇಕವಾಗಿ ಮಲಗಲು ಬಯಸುತ್ತಿರುವುದೇಕೆ?

03/05/2026 9:01 PM
State News
KARNATAKA

ಪದ್ಮಶ್ರೀ ಪುರಸ್ಕೃತ ಅಂಕೇಗೌಡ ದಂಪತಿಗಳ ಸಾಧನೆ ಅಪಾರ: ಸಂಸದ ಜಿ.ಕುಮಾರನಾಯಕ್

By kannadanewsnow0903/05/2026 8:36 PM KARNATAKA 2 Mins Read

ಮಂಡ್ಯ : ಜಿಲ್ಲೆಯಲ್ಲಿನ ಪುಸ್ತಕದ ಮನೆಯೊಂದು ಜಿಲ್ಲೆ ಮತ್ತು ರಾಜ್ಯವನ್ನು ದಾಟಿ ರಾಷ್ಟ್ರದ ರಾಜಧಾನಿ ದೆಹಲಿವರೆವಿಗೂ ತಲುಪಿರುವುದು ಶ್ಲಾಘನೀಯ ಕಾರ್ಯವೆಂದು…

ಮದ್ದೂರು ತಾಲೂಕು ಸರ್ಕಾರಿ ನೌಕರರ ಸಂಘದ ನೂತನ ಅಧ್ಯಕ್ಷರಾಗಿ ಬ್ಯಾಡರಹಳ್ಳಿ ಅಂಕೇಗೌಡ ಆಯ್ಕೆ

03/05/2026 8:34 PM

BREAKING: KPSC ಭ್ರಷ್ಟಾಚಾರ ತಡೆಗೆ ಮಹತ್ವದ ಕ್ರಮ: ಆರ್.ವಿ.ದೇಶಪಾಂಡೆ ನೇತೃತ್ವದಲ್ಲಿ ಸದನ ಸಮಿತಿ ರಚನೆ

03/05/2026 7:15 PM

Watch Video: ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಎಳೆನೀರು ತುಂಬಿದ್ದ ಬೊಲೆರೊ ವಾಹನ ಪಲ್ಟಿ: ಭಯಾನಕ ವೀಡಿಯೋ ಇಲ್ಲಿದೆ

03/05/2026 7:10 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.