ಬೆಂಗಳೂರು: ರಾಜ್ಯದ ಆರ್ಯ ವೈಶ್ಯ ಸಮುದಾಯದವರಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಅದೇ 2025-26ನೇ ಸಾಲಿಗೆ ಸಾಲ-ಸೌಲಭ್ಯ ಒದಗಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ ಮಾಹಿತಿ ಹಂಚಿಕೊಂಡಿದ್ದು, 2025-26ನೇ ಸಾಲಿನಲ್ಲಿ ಈ ಕೆಳಕಂಡ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ ಹಾಗೂ ಈ ಯೋಜನೆಗಳಡಿ ಸಾಲ-ಸೌಲಭ್ಯವನ್ನು ಪಡೆಯಲು ಇಚ್ಛಿಸುವವರು ಕಡ್ಡಾಯವಾಗಿ ಆನೈನ್ ವಿಳಾಸ: http//kacdc.karnataka.gov.in ರ ಮೂಲಕ ಅರ್ಜಿ ಸಲ್ಲಿಸಬೇಕಾಗಿರುತ್ತದೆ. ಅರ್ಜಿ ಸಲ್ಲಿಸಲು ಕೊನೆಯ ದಿ: 31.07.2025.
2025-26ನೇ ಸಾಲಿನಲ್ಲಿ ಅನುಷ್ಠಾನಗೊಳಿಸಲಾಗುವ ಯೋಜನೆಗಳು:-
1. ಸ್ವಯಂ-ಉದ್ಯೋಗ ನೇರಸಾಲ ಯೋಜನೆ.
2. ಬ್ಯಾಂಕ್ಗಳ ಸಹಯೋಗದೊಂದಿಗೆ ಆರ್ಯ ವೈಶ್ಯ ಆಹಾರ ವಾಹಿನಿ/ ವಾಹಿನಿ ಯೋಜನೆ. 3. ವಾಸವಿ ಜಲಶಕ್ತಿ ಯೋಜನೆ.
4. ಅರಿವು ಶೈಕ್ಷಣಿಕ ಸಾಲ ಯೋಜನೆ CET ಹಾಗೂ NEET ಕೌನ್ಸಿಲಿಂಗ್ ಮುಗಿದ ನಂತರ ಅರ್ಜಿಗಳನ್ನು ಆಹ್ವಾನಿಸಲಾಗುವುದು.
ಎಲ್ಲಾ ಯೋಜನೆಗಳ ಸಾಮಾನ್ಯ ಮಾರ್ಗ-ಸೂಚಿಗಳು:-
1. ಸಾಮಾನ್ಯ ವರ್ಗದಲ್ಲಿನ ಆರ್ಯ ವೈಶ್ಯ ಸಮುದಾಯಕ್ಕೆ ಸೇರಿದವರಾಗಿರಬೇಕು ಮತ್ತು “ನಮೂನೆ-ಜಿ”ಯಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆದಿರಬೇಕು.
2. ಅರ್ಜಿದಾರರು ಕರ್ನಾಟಕ ರಾಜ್ಯದವರಾಗಿದ್ದು, ಅವರ ಖಾಯಂ ವಿಳಾಸವು ಕರ್ನಾಟಕ ರಾಜ್ಯದಲ್ಲಿರಬೇಕು.
3. ಅರ್ಜಿದಾರರ ಮೊಬೈಲ್ ಸಂಖ್ಯೆಯು ಆಧಾರ್ ಸಂಖ್ಯೆಗೆ ಜೋಡಣೆಯಾಗಿರಬೇಕು ಮತ್ತು ಬ್ಯಾಂಕ್ ಖಾತೆಗೆ ಆಧಾರ್ ಸೀಡಿಂಗ್ ಆಗಿರಬೇಕು.
4. ಅರ್ಹ ಅರ್ಜಿದಾರರುಗಳನ್ನು ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಅಧ್ಯಕ್ಷತೆಯಲ್ಲಿ ರಚಿಸಿರುವ ಜಿಲ್ಲಾ ಮಟ್ಟದ ಆಯ್ಕೆ ಸಮಿತಿಯ ಮೂಲಕ ಆಯ್ಕೆ ಮಾಡಲಾಗುವುದು.
5. 2019-2020ನೇ ಸಾಲಿನಿಂದ 2021-22ನೇ ಸಾಲಿನವರೆಗೆ ಸ್ವಯಂ-ಉದ್ಯೋಗ ನೇರ ಸಾಲ ಯೋಜನೆಯಡಿ ಸಾಲ ಪಡೆದು ಸಕಾಲದಲ್ಲಿ ಸಾಲವನ್ನು ಪೂರ್ಣ ಪ್ರಮಾಣದಲ್ಲಿ ಮರುಪಾವತಿಸಿದ ಫಲಾನುಭವಿಗಳಿಗೆ ಪುನಃ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ವಿಶೇಷ ಸೂಚನೆ:-
ಮೇಲ್ಕಾಣಿಸಿದ ಯೋಜನೆಗಳ ಮಾರ್ಗಸೂಚಿ ಹಾಗೂ ಅರ್ಹತೆಗಳ ಸಂಕ್ಷಿಪ್ತ ವಿವರಗಳನ್ನು ಈ QR ಕೋಡ್ ಅನ್ನು ಸ್ಕ್ಯಾನ್ ಮಾಡಿ ಪಡೆಯಬಹುದಾಗಿದೆ.
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ನಿಗಮದ ಸಹಾಯವಾಣಿ: 94484 51111ಗೆ ಬೆಳಿಗ್ಗೆ : 10.00 ರಿಂದ ಸಂಜೆ : 5.30 ವರೆಗೆ ಸಂಪರ್ಕಿಸಬಹುದಾಗಿದೆ. ಈ ಯೋಜನೆಗಳ ಮಾರ್ಗಸೂಚಿಗಳು, ಸಲ್ಲಿಸಬೇಕಾದ ದಾಖಲೆಗಳು, ಜಿಲ್ಲಾ ವ್ಯವಸ್ಥಾಪಕರ ಕಛೇರಿ ವಿಳಾಸಗಳನ್ನು ಹಾಗೂ ಎಲ್ಲಾ ವಿವರಗಳನ್ನು https://kacdc.karnataka.gov.in ಇಲ್ಲಿ ತಿಳಿಯಬಹುದಾಗಿದೆ.
ಜೂ.22ರಂದು ಬೆಂಗಳೂರಿನ ‘ನಮ್ಮ ಮೆಟ್ರೋ ರೈಲು ನೇರಳೆ ಮಾರ್ಗ’ದಲ್ಲಿ ತಾತ್ಕಾಲಿಕವಾಗಿ ಸಂಚಾರ ಸ್ಥಗಿತ | Namma Metro
BREAKING : ಯುವ ನಟನಿಗೆ ವಂಚನೆ, ಬೆದರಿಕೆ : ಖ್ಯಾತ ನಿರ್ದೇಶಕ ನಂದಕಿಶೋರ್ ವಿರುದ್ಧ ಗಂಭೀರ ಆರೋಪ