ಬೆಂಗಳೂರು : ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಲ್ಲಿನ ಅಧಿಕಾರಿ/ನೌಕರರನ್ನು ದಿ: 24.01.2024ರ ಸರ್ಕಾರಿ ಆದೇಶದನ್ವಯ ಎನ್.ಪಿ.ಎಸ್.ನಿಂದ ಒ.ಪಿ.ಎಸ್.ಗೆ ಒಳಪಡಿಸುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.
ರಾಜ್ಯ ಸರ್ಕಾರದ ಆದೇಶದಲ್ಲಿ ಏನಿದೆ?
ದಿನಾಂಕ: 01.04.2006ರ ಪೂರ್ವದಲ್ಲಿ ರಾಜ್ಯ ಸಿವಿಲ್ ಸೇವೆಗಳಲ್ಲಿನ ಖಾಲಿ ಹುದ್ದೆಗಳ ಭರ್ತಿಗಾಗಿ ಹೊರಡಿಸಿದ ನೇಮಕಾತಿ ಅಧಿಸೂಚನೆಗಳ ಮೇರೆಗೆ ಆಯ್ಕೆ ಹೊಂದಿ ದಿನಾಂಕ: 01.04.2006ರಂದು ಅಥವಾ ಆ ದಿನಾಂಕದ ನಂತರ ಸೇವೆಗೆ ಸೇರಿರುವ ಕಾರಣದಿಂದ ನೂತನ ಅಂಶದಾಯಿ ಕೊಡುಗೆ ಯೋಜನೆಯ (ರಾಷ್ಟ್ರೀಯ ಪಿಂಚಣಿ ಯೋಜನೆ) ವ್ಯಾಪ್ತಿಗೊಳಪಟ್ಟು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಈ ಕೆಳಕಂಡ ಅಧಿಕಾರಿ/ನೌಕರರುಗಳು ದಿನಾಂಕ: 01.04.2006ರ ಪೂರ್ವದಲ್ಲಿ ಅಧಿಸೂಚಿಸಲಾದ ಹುದ್ದೆಗಳಿಗೆ ನಡೆದ ನೇಮಕಾತಿ ಪ್ರಕ್ರಿಯೆಯಲ್ಲಿ ನೇರ ನೇಮಕಾತಿ ಹೊಂದಿ ದಿನಾಂಕ:01.04.2006ರ ನಂತರ ನೇಮಕಾತಿ ಆದೇಶವನ್ನು ಪಡೆದು ಕರ್ತವ್ಯಕ್ಕೆ ಹಾಜರಾಗಿರುವುದರಿಂದ ಅವರನ್ನು ಸರ್ಕಾರದ ಆದೇಶ ಸಂಖ್ಯೆ: ಆಇ-ಪಿಇಎನ್/99/2023, ದಿನಾಂಕ: 24.01.2024ರನ್ವಯ ರಾಷ್ಟ್ರೀಯ ಪಿಂಚಣಿ ಯೋಜನೆಯಿಂದ ಡಿಫೈನ್ ಪಿಂಚಣಿ ಯೋಜನೆಗೆ ಒಳಪಡಿಸಲು ಸಹಮತಿ ನೀಡಿದೆ. ಈ ಅಧಿಕಾರಿ/ನೌಕರರಿಗೆ ಕರ್ನಾಟಕ ನಾಗರೀಕ ಸೇವಾ ನಿಯಮಗಳ ನಿಯಮ 2-C ಅನ್ವಯವಾಗುವುದಿಲ್ಲ ಮತ್ತು ಇವರಿಗೆ ಅದೇ ನಿಯಮಾವಳಿಯ ಭಾಗ-IV ಅನ್ವಯವಾಗತಕ್ಕದ್ದು ಎಂದು ತಿಳಿಸಿದೆ.









