ಬೆಂಗಳೂರು: ರಾಜ್ಯದ ರೈತರಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಸಿಹಿಸುದ್ದಿ ನೀಡಿದ್ದಾರೆ. ಅದೇ ಕುಸುಮ್ ಬಿ ಯೋಜನೆಯ ಅಡಿಯಲ್ಲಿ ಸೋಲಾರ್ ಕೃಷಿ ಪಂಪ್ ಸೆಟ್ ಗಳಿಗೆ ಶೇ.80ರಷ್ಟು ಸಬ್ಸಿಡಿಯನ್ನು ಸಿಎಂ ಸಿದ್ಧರಾಮಯ್ಯ ಘೋಷಿಸಿದ್ದಾರೆ.
ಇಂದು ಕುಸುಮ್ ಬಿ ಯೋಜನೆ ಸಂಬಂಧ ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಇಂಧನ ಇಲಾಖೆಯ ಅಧಿಕಾರಿಗಳ ಸಭೆ ನಡೆಸಿದರು. ಕುಸುಮ್ ಬಿ ಯೋಜನೆಯಡಿ ಸೋಲಾರ್ ಕೃಷಿ ಪಂಪ್ಸೆಟ್ ಅಳವಡಿಸಲು, ಕೇಂದ್ರ ಸರ್ಕಾರ ಶೇ.30, ರಾಜ್ಯ ಸರ್ಕಾರ ಶೇ.50ರಷ್ಟು ಸಬ್ಸಿಡಿ ಒದಗಿಸುತ್ತಿದ್ದು, ಫಲಾನುಭವಿಗಳು ಶೇ.20ರಷ್ಟು ಭರಿಸಬೇಕಿದೆ ಎಂದರು.
ಈ ಯೋಜನೆಯಡಿ 40 ಸಾವಿರ ಪಂಪ್ ಸೆಟ್ ಗಳಿಗೆ ಅನುಮೋದನೆ ನೀಡಲಾಗಿದ್ದು, ಇದನ್ನು ಅನುಷ್ಠಾನಗೊಳಿಸುವ ಬಗ್ಗೆ ಶೀಘ್ರ ಕ್ರಮ ಕೈಗೊಳ್ಳಬೇಕು. 25 ಸಾವಿರ ರೈತರು ಹೆಚ್ಚುವರಿಯಾಗಿ ಕುಸುಮ್ ಬಿ ಯೋಜನೆಯಡಿ ಅರ್ಜಿ ಸಲ್ಲಿಸಿದ್ದಾರೆ. ಯೋಜನೆಯಡಿ ರಾಜ್ಯ ಸರ್ಕಾರ 752 ಕೋಟಿ ರೂ. ವೆಚ್ಚ ಮಾಡಲಿದೆ. ಯೋಜನೆ ಸಮರ್ಪಕ ಅನುಷ್ಠಾನಗೊಳಿಸಿದ ಬಳಿಕ ಸಬ್ಸಿಡಿ ಮೊತ್ತ ಕಡಿಮೆಯಾಗಲಿದೆ ಎಂದರು.
ರೈತರಿಗೆ ಸ್ವಯಂ ವಿದ್ಯುತ್ ಮೂಲಸೌಕರ್ಯ ಕಲ್ಪಿಸಲು ಅವಕಾಶ ಕಲ್ಪಿಸಲಾಗುತ್ತಿದ್ದು, ಟ್ರಾನ್ಸ್ ಫಾರ್ಮರ್ ಗಳನ್ನು ಇಲಾಖೆ ಒದಗಿಸಲಿದೆ. ನೀರಾವರಿ ಪಂಪ್ ಸೆಟ್ ಗಳಿಗೆ 2024-25ರ ಸಾಲಿನಲ್ಲಿ 12,785 ಕೋಟಿ ರೂಪಾಯಿಗಳ ಅನುದಾನ ಹಂಚಿಕೆ ಆಗಿದ್ದು, ಫೆಬ್ರವರಿ 2025 ವರೆಗೆ ರೂ. 11,720 ಕೋಟಿ ಬಿಡುಗಡೆ ಆಗಿದೆ. 2025-26ರಲ್ಲಿ 16,021 ಕೋಟಿ ರೂಪಾಯಿಗಳ ಆಯವ್ಯಯ ಹಂಚಿಕೆ ಆಗಿದೆ.
ಸಾಗರದಲ್ಲಿ ‘ಖ್ಯಾತ ಉದ್ಯಮಿ ಡಾ.ಪ್ರಕಾಶ್ ಶೆಟ್ಟಿ’ ಜನ್ಮದಿನದ ಪ್ರಯುಕ್ತ ಯಶಸ್ವಿಯಾಗಿ ನಡೆದ ‘ರಕ್ತದಾನ ಶಿಬಿರ’
ರಾಜ್ಯದಲ್ಲಿ ‘ಅನಧಿಕೃತ ಐಪಿ ಸೆಟ್’ ಹೊಂದಿರುವ ರೈತರಿಗೆ ‘ಸಿಎಂ ಸಿದ್ಧರಾಮಯ್ಯ’ ಗುಡ್ ನ್ಯೂಸ್