ಬೆಂಗಳೂರು: ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಅವರ ಸತತ ಪ್ರಯತ್ನ, ಪರಿಶ್ರಮದಿಂದಾಗಿ ತಾಲ್ಲೂಕಿನ ಗಂಗಾಮತಸ್ಥರು, ಮಡಿವಾಳ, ಈಡಿಗ ಸಮುದಾಯದವರಿಗೆ ಗುಡ್ ನ್ಯೂಸ್ ಸಿಕ್ಕಿದೆ. ಅದೇ ಗಂಗಾಮತಸ್ಥರ ಸಮುದಾಯ ಭವನ, ಮಡಿವಾಳ ಸಮುದಾಯ ಭವನ ಹಾಗೂ ಈಡಿಗ ಸಮುದಾಯ ಭವನಕ್ಕೆ ಸರ್ಕಾರದಿಂದ ಅನುದಾನ ಮಂಜೂರಾಗಿದೆ.
ಈ ಸಂಬಂಧ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿವಿಧ ಸಮುದಾಯಗಳ ಅಭಿವೃದ್ಧಿ ಕಾರ್ಯಕ್ರಮದಡಿ ಈ ಕೆಳಕಂಡ ಸಂಘ-ಸಂಸ್ಥೆಗಳ ವತಿಯಿಂದ ಸಮುದಾಯ ಭವನ, ವಿದ್ಯಾರ್ಥಿನಿಲಯದ ಕಟ್ಟಡ ನಿರ್ಮಾಣ ಕಾಮಗಾರಿಗಳಿಗೆ ಅನುದಾನ ಮಂಜೂರು ಮಾಡಿರುವುದಾಗಿ ತಿಳಿಸಿದ್ದಾರೆ.
ಸಾಗರ ತಾಲ್ಲೂಕಿನ ಈ ಸಮುದಾಯ ಭವನಗಳ ನಿರ್ಮಾಣಕ್ಕೆ ಅನುದಾನ ಮಂಜೂರು
- ಸಾಗರ ತಾಲ್ಲೂಕು ಆಚಾಪುರ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಲಕ್ಕವಳ್ಳಿ ಇಲ್ಲಿ ಗಂಗಾಮತಸ್ಥರ ಸಮುದಾಯ ಭವನ ನಿರ್ಮಾಣ ಕಾಮಗಾರಿ ಕೈಗೊಳ್ಳಲು 40 ಲಕ್ಷ ಅನುದಾನ ಮಂಜೂರು.
- ಸಾಗರ ತಾಲ್ಲೂಕು ಬ್ಯಾಕೋಡು ಗ್ರಾಮದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಈಡಿಗ ಸಂಘಕ್ಕೆ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ರೂ.40 ಲಕ್ಷ ಅನುದಾನ ಮಂಜೂರು.
- ಸಾಗರ ತಾಲ್ಲೂಕು ಸಾಗರ ನಗರದಲ್ಲಿ ಮಡಿವಾಳ ಸಮಾಜದ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ರೂ.50 ಲಕ್ಷ ಅನುದಾನ ಮಂಜೂರು.
ಒಟ್ಟಾರೆಯಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಸಾಗರ ತಾಲ್ಲೂಕಿನ ವಿವಿಧ ಸಮುದಾಯಗಳ ಅಭಿವೃದ್ಧಿಗೆ 2025-26ನೇ ಸಾಲಿಗೆ 1 ಕೋಟಿ 40 ಲಕ್ಷ ಅನುದಾನವನ್ನು ಮಂಜೂರು ಮಾಡಿದ್ದಾರೆ. ಈ ಅನುದಾನ ಮಂಜೂರು ಮಾಡಿಸಿಕೊಂಡು ಬರುವಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು ಅಷ್ಟೇ ಯಶಸ್ವಿಯಾಗಿದ್ದಾರೆ.
ರಾಜ್ಯದ ಮೀನುಗಾರರಿಗೆ ಗುಡ್ ನ್ಯೂಸ್: ವಿವಿಧ ಯೋಜನೆಯಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ
ಸಮುದಾಯದ ನಡುವೆ ವಿಶ್ವಾಸ ಮೂಡಿಸಲು ಮನೆ ಮನೆಗೆ ಪೊಲೀಸ್ ಕಾರ್ಯಕ್ರಮ ಸಹಕಾರಿ: ಹಿರಿಯೂರು ಡಿವೈಎಸ್ಪಿ ಶಿವಕುಮಾರ್