ನಗರ ಪ್ರದೇಶಗಳಲ್ಲಿ ಪ್ರಸಕ್ತ ಸಾಲಿನ ಪ್ರಧಾನ ಮಂತ್ರಿ ಆವಾಸ್ (ನಗರ) 2.0 ಯೋಜನೆಯಡಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಒಂಟಿ ಮಹಿಳೆಯರು, ಅಂಗವಿಕಲರು, ಹಿರಿಯ ನಾಗರಿಕರು, ತೃತೀಯ ಲಿಂಗಿಗಳು, ಎಸ್.ಸಿ., ಎಸ್.ಟಿ, ಹಿಂದುಳಿದ, ಅಲ್ಪಸಂಖ್ಯಾತ ವರ್ಗದವರು, ಸ್ವಚ್ಛತಾ ಕಾರ್ಮಿಕರು, ಪಿಎಂ.ಅವಾಸ್ ಯೋಜನೆಯಡಿ ಗುರುತಿಸಲ್ಪಟ್ಟ ಬೀದಿ ವ್ಯಾಪಾರಿಗಳು ಮತ್ತು ಪ್ರಧಾನ್ ಮಂತ್ರಿ ವಿಶ್ವಕರ್ಮ ಯೋಜನೆಯಡಿ ಗುರುತಿಸಿದ ಕುಶಲ ಕರ್ಮಿಗಳು, ಅಂಗನವಾಡಿ ಕಾರ್ಯಕರ್ತರು, ಕಟ್ಟಡ ಮತ್ತು ಇತರೆ : ನಿರ್ಮಾಣ ಕಾರ್ಮಿಕರು, ವಲಸೆ ಬಂದ ಕುಟುಂಬದವರು ತಮ್ಮ ಅರ್ಜಿಗಳನ್ನು ವೆಬ್ಸೈಟ್ http://pmayurban.gov.in ನಲ್ಲಿ ಅರ್ಜಿ ಸಲ್ಲಿಸಬಹುದು.
ಅರ್ಜಿಗಳ ಸರ್ವೆ ಕಾರ್ಯವನ್ನು ಮಹಾನಗರ ಪಾಲಿಕೆಯ ಕಂದಾಯ ಶಾಖೆಯ ಅಧಿಕಾರಿ, ಸಿಬ್ಬಂದಿಗಳು ಮನೆ ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸುತ್ತಿದ್ದು, ಸರ್ವೆ ಕಾರ್ಯವು ಸಂಪೂರ್ಣ ಪಾರದರ್ಶಕವಾಗಿ ನಡೆಯುತ್ತಿದೆ. ಪಾಲಿಕೆಯ ಅಧಿಕಾರಿ, ಸಿಬ್ಬಂದಿ ಹಾಗೂ ಯಾವುದೇ ಮಧ್ಯವರ್ತಿಗಳು ಹಣ ನೀಡುವಂತೆ ಬೇಡಿಕೆ ಇಟ್ಟರೆ, ಅಂತಹವರ ವಿರುದ್ದ ತಕ್ಷಣ ಮಹಾನಗರ ಪಾಲಿಕೆ ಕಚೇರಿ, ಪೆÇಲೀಸ್ ಠಾಣೆಯಲ್ಲಿ ದೂರು ದಾಖಲಿಸಲು ಸಲಹೆ ನೀಡಿ ಫಲಾನುಭವಿಗಳು ಅಧಿಕಾರಿ, ಸಿಬ್ಬಂದಿ, ಮಧ್ಯವರ್ತಿಗಳಿಗೆ ಹಣ ನೀಡಿ ಮೋಸ ಹೋದಲ್ಲಿ ಅದಕ್ಕೆ ಪಾಲಿಕೆ ಜವಾಬ್ದಾರಿಯಾಗುವುದಿಲ್ಲ ಎಂದು ಪಾಲಿಕೆ ಆಯುಕ್ತೆ ರೇಣುಕಾ ತಿಳಿಸಿದ್ದಾರೆ.