ಬೆಂಗಳೂರು: ಕರ್ನಾಟಕ ರಾಜ್ಯ ಕಾಡುಗೊಲ್ಲ ಅಭಿವೃದ್ದಿ ನಿಗಮದ ವತಿಯಿಂದ 2025-26 ನೇ ಸಾಲಿಗೆ ಆಹಾರ ವಾಹಿನಿ ಯೋಜನೆಯಡಿ ಸ್ಥಳಾಂತರಿಸಬಹುದಾದ ತಿಂಡಿ ಮಳಿಗೆಗಳನ್ನು ನಾಲ್ಕು ಚಕ್ರಗಳ ಇವಿ-ಗೂಡ್ಸ್ ವಾಹನಗಳನ್ನು ಅಗತ್ಯಕ್ಕೆ ತಕ್ಕಂತೆ ನವೀಕರಿಸಿ ಫಲಾನುಭವಿಗಳಿಗೆ ವಿತರಿಸುವ ಯೋಜನೆಯಲ್ಲಿ ನಿಗಮದಿಂದ ವಾಹನ ಖರೀದಿಗೆ ರೂ. 3.00 ಲಕ್ಷಗಳ ಸಹಾಯಧನವನ್ನು ಪಡೆಯಲು ಸೇವಾಸಿಂಧು ತಂತ್ರಾಂಶದ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಈ ಯೋಜನೆಯು ವಿಶ್ವಕರ್ಮ, ಉಪ್ಪಾರ, ಅಂಬಿಗ, ಸವಿತಾ, ಮಡಿವಾಳ, ಅಲೆಮಾರಿ ಮತ್ತು ಅರೆಅಲೆಮಾರಿ ಸಮುದಾಯ, ಒಕ್ಕಲಿಗ, ಲಿಂಗಾಯತ, ಹಟ್ಟಿಗೊಲ್ಲ, ಮರಾಠ ಮತ್ತು ಇದರ ಉಪ ಸಮುದಾಯಗಳಿಗೆ ಅನ್ವಯವಾಗುವುದಿಲ್ಲ
ಅರ್ಜಿದಾರರು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆಯನ್ನು ಹೊಂದಿರಬೇಕು. ಆಧಾರ್ ಕಾರ್ಡಿನಲ್ಲಿರುವಂತೆ ಅರ್ಜಿದಾರರ ಹೆಸರು ಇತರೆ ದಾಖಲಾತಿಗಳಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಪುಸ್ತಕದಲ್ಲಿಯೂ ಇರುವಂತೆ ಹೊಂದಾಣಿಕೆಯಾಗಬೇಕು. ಕುಟುಂಬ ವಾರ್ಷಿಕ ವರಮಾನ 3 ಲಕ್ಷ ಒಳಗಿರಬೇಕು ಮತ್ತು ವಯಸ್ಸು 21 ರಿಂದ 45 ವರ್ಷ ಒಳಗಿನವರಾಗಿರಬೇಕು. ಒಂದು ಬಾರಿ ನಿಗಮದ ಯಾವುದಾದರು ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸುವಂತಿಲ್ಲ.
ಆಸಕ್ತ ಕಾಡುಗೊಲ್ಲ ಜನಾಂಗದ ಹಿಂದುಳಿದ ವರ್ಗಗಳ ಅರ್ಜಿದಾರರು ಸೇವಾಸಿಂಧು ಪೋರ್ಟಲ್ https://sevasindhu.karnataka.gov.in ಮೂಲಕ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಮಾ. 06 ರೊಳಗಾಗಿ ಸಲ್ಲಿಸುವಂತೆ ಕ. ಮ. ಸ. ಅ. ನಿ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.
BIG NEWS : ಹಲವು ಷರತ್ತುಗಳೊಂದಿಗೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ‘RCB’ ಪಂದ್ಯಕ್ಕೆ ಅನುಮತಿ ಸಾಧ್ಯತೆ!








