Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ರಾಜ್ಯಾದ್ಯಂತ ಎಲ್ಲಾ ಶಾಲೆಗಳಲ್ಲಿ ವಿದ್ಯಾರ್ಥಿಗಳು ಪ್ರತಿನಿತ್ಯ ಭಾರತ ಸಂವಿಧಾನ ಪೀಠಿಕೆ ಓದುವುದು ಕಡ್ಡಾಯ : ಶಿಕ್ಷಣ ಇಲಾಖೆ ಮಹತ್ವದ ಆದೇಶ.!

06/06/2025 5:27 AM

ರಾಜ್ಯ ಸರ್ಕಾರದಿಂದ ಅಲೆಮಾರಿ, ಅರೆ ಅಲೆಮಾರಿ ಸಮುದಾಯಕ್ಕೆ ಗುಡ್ ನ್ಯೂಸ್ : `ಸ್ವಯಂ ಉದ್ಯೋಗ’ ಸಹಾಯಧನ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ.!

06/06/2025 5:02 AM

GOOD NEWS : ರಾಜ್ಯದ ಬಡಜನತೆಗೆ ಮತ್ತೊಂದು ಗುಡ್ ನ್ಯೂಸ್ : ಇಂದಿರಾ ಕ್ಯಾಂಟೀನ್ ಗಳಲ್ಲಿ `ಮೊಟ್ಟೆ’ ವಿತರಣೆ.!

06/06/2025 5:01 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯ ಸರ್ಕಾರದಿಂದ ಅಲೆಮಾರಿ, ಅರೆ ಅಲೆಮಾರಿ ಸಮುದಾಯಕ್ಕೆ ಗುಡ್ ನ್ಯೂಸ್ : `ಸ್ವಯಂ ಉದ್ಯೋಗ’ ಸಹಾಯಧನ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ.!
KARNATAKA

ರಾಜ್ಯ ಸರ್ಕಾರದಿಂದ ಅಲೆಮಾರಿ, ಅರೆ ಅಲೆಮಾರಿ ಸಮುದಾಯಕ್ಕೆ ಗುಡ್ ನ್ಯೂಸ್ : `ಸ್ವಯಂ ಉದ್ಯೋಗ’ ಸಹಾಯಧನ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ.!

By kannadanewsnow5706/06/2025 5:02 AM

ಬೆಂಗಳೂರು : ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ವತಿಯಿಂದ 2025-26ನೇ ಸಾಲಿಗೆ ವಿವಿಧ ಯೋಜನೆಗಳಡಿ ಸಹಾಯಧನ ಮತ್ತು ಸಾಲ-ಸೌಲಭ್ಯಕ್ಕಾಗಿ ಅರ್ಹರಿಂದ ಆನ್ಲೈನ್ ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಯೋಜನೆಗಳು:

ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು-ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ (ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ), ಸ್ವಾತಂತ್ರ ಅಮೃತ ಮಹೋತ್ಸವದ ಮುನ್ನಡೆ ಯೋಜನೆಗಳಡಿ ಸಹಾಯಧನ ಮತ್ತು ಸಾಲ-ಸೌಲಭ್ಯ ನೀಡಲಾಗುವುದು.

ಅರ್ಜಿ ಸಲ್ಲಿಸುವಾಗ ಅರ್ಜಿದಾರರು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು. ಆಧಾರ್ ಕಾರ್ಡ್ ನಲ್ಲಿರುವಂತೆ ಅರ್ಜಿದಾರರ ಹೆಸರು, (ಶ್ರೀ/ಶ್ರೀಮತಿ ಕುಮಾರಿ ಮುಂತಾದ ಮಾಹಿತಿಗಳೆಲ್ಲವು) ಇತರೆ ದಾಖಲಾತಿಗಳಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಪುಸ್ತಕದಲ್ಲಿಯೂ ಇದ್ದು ಹೊಂದಾಣಿಕೆಯಾಗಬೇಕು.

ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ. 2023-24 ಮತ್ತು 2024-25ನೇ ಸಾಲಿನಲ್ಲಿ ಅರ್ಜಿಸಲ್ಲಿಸಿ ಸೌಲಭ್ಯ ಪಡೆಯದೇ ಇರುವ ಫಲಾಪೇಕ್ಷಿಗಳು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ.

ಮೇಲ್ಕಂಡ ಸೌಲಭ್ಯಗಳನ್ನು ಪಡೆಯಲು ಇಚ್ಚಿಸುವ ಹಿಂದುಳಿದ ವರ್ಗಗಳ ಪ್ರವರ್ಗ-1ರ ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗಕ್ಕೆ ಸೇರಿದವರಾಗಿರಬೇಕು.ಅರ್ಜಿಗಳನ್ನು ಸೇವಾಸಿಂಧು ಪೋರ್ಟಲ್ http://sevasindhu.karnataka.gov.in ಮೂಲಕ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಜೂನ್ 30 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ನಗರದ ಅನಂತಪುರ ರಸ್ತೆಯ ನೂತನ ಜಿಲ್ಲಾಡಳಿತ ಭವನ ಕಚೇರಿಯ ಎರಡನೇ ಮಹಡಿಯ ಬಿ ಬ್ಲಾಕ್ ನ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ಕಚೇರಿ ಅಥವಾ ಸಹಾಯವಾಣಿ ಸಂಖ್ಯೆ:08392-267038 ಗೆ ಸಂಪರ್ಕಿಸಬಹುದು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕ ಟಿ.ಹೊನ್ನುರಪ್ಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Good news for the nomadic and semi-nomadic community from the state government: Applications invited for various schemes including `Self-employment' subsidy!
Share. Facebook Twitter LinkedIn WhatsApp Email

Related Posts

BIG NEWS : ರಾಜ್ಯಾದ್ಯಂತ ಎಲ್ಲಾ ಶಾಲೆಗಳಲ್ಲಿ ವಿದ್ಯಾರ್ಥಿಗಳು ಪ್ರತಿನಿತ್ಯ ಭಾರತ ಸಂವಿಧಾನ ಪೀಠಿಕೆ ಓದುವುದು ಕಡ್ಡಾಯ : ಶಿಕ್ಷಣ ಇಲಾಖೆ ಮಹತ್ವದ ಆದೇಶ.!

06/06/2025 5:27 AM1 Min Read

GOOD NEWS : ರಾಜ್ಯದ ಬಡಜನತೆಗೆ ಮತ್ತೊಂದು ಗುಡ್ ನ್ಯೂಸ್ : ಇಂದಿರಾ ಕ್ಯಾಂಟೀನ್ ಗಳಲ್ಲಿ `ಮೊಟ್ಟೆ’ ವಿತರಣೆ.!

06/06/2025 5:01 AM1 Min Read

GOOD NEWS : ರಾಜ್ಯದ ಜನತೆಗೆ ಸರ್ಕಾರದಿಂದ ಗುಡ್ ನ್ಯೂಸ್ : ಕೇವಲ 21 ದಿನದೊಳಗೆ ನಿಮ್ಮ ದೂರು/ಮನವಿ ಅರ್ಜಿ ವಿಲೇವಾರಿ.!

06/06/2025 5:00 AM2 Mins Read
Recent News

BIG NEWS : ರಾಜ್ಯಾದ್ಯಂತ ಎಲ್ಲಾ ಶಾಲೆಗಳಲ್ಲಿ ವಿದ್ಯಾರ್ಥಿಗಳು ಪ್ರತಿನಿತ್ಯ ಭಾರತ ಸಂವಿಧಾನ ಪೀಠಿಕೆ ಓದುವುದು ಕಡ್ಡಾಯ : ಶಿಕ್ಷಣ ಇಲಾಖೆ ಮಹತ್ವದ ಆದೇಶ.!

06/06/2025 5:27 AM

ರಾಜ್ಯ ಸರ್ಕಾರದಿಂದ ಅಲೆಮಾರಿ, ಅರೆ ಅಲೆಮಾರಿ ಸಮುದಾಯಕ್ಕೆ ಗುಡ್ ನ್ಯೂಸ್ : `ಸ್ವಯಂ ಉದ್ಯೋಗ’ ಸಹಾಯಧನ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ.!

06/06/2025 5:02 AM

GOOD NEWS : ರಾಜ್ಯದ ಬಡಜನತೆಗೆ ಮತ್ತೊಂದು ಗುಡ್ ನ್ಯೂಸ್ : ಇಂದಿರಾ ಕ್ಯಾಂಟೀನ್ ಗಳಲ್ಲಿ `ಮೊಟ್ಟೆ’ ವಿತರಣೆ.!

06/06/2025 5:01 AM

GOOD NEWS : ರಾಜ್ಯದ ಜನತೆಗೆ ಸರ್ಕಾರದಿಂದ ಗುಡ್ ನ್ಯೂಸ್ : ಕೇವಲ 21 ದಿನದೊಳಗೆ ನಿಮ್ಮ ದೂರು/ಮನವಿ ಅರ್ಜಿ ವಿಲೇವಾರಿ.!

06/06/2025 5:00 AM
State News
KARNATAKA

BIG NEWS : ರಾಜ್ಯಾದ್ಯಂತ ಎಲ್ಲಾ ಶಾಲೆಗಳಲ್ಲಿ ವಿದ್ಯಾರ್ಥಿಗಳು ಪ್ರತಿನಿತ್ಯ ಭಾರತ ಸಂವಿಧಾನ ಪೀಠಿಕೆ ಓದುವುದು ಕಡ್ಡಾಯ : ಶಿಕ್ಷಣ ಇಲಾಖೆ ಮಹತ್ವದ ಆದೇಶ.!

By kannadanewsnow5706/06/2025 5:27 AM KARNATAKA 1 Min Read

ಬೆಂಗಳೂರು : ರಾಜ್ಯಾದ್ಯಂತ ಎಲ್ಲಾ ಶಾಲೆಗಳಲ್ಲಿ ಭಾರತ ಸಂವಿಧಾನ ಪೀಠಿಕೆಯನ್ನು ವಿಧ್ಯಾರ್ಥಿಗಳು ಪ್ರತಿ ನಿತ್ಯ ಪ್ರಾರ್ಥನೆ ಸಮಯದಲ್ಲಿ ಓದುವ ಬಗ್ಗೆ…

ರಾಜ್ಯ ಸರ್ಕಾರದಿಂದ ಅಲೆಮಾರಿ, ಅರೆ ಅಲೆಮಾರಿ ಸಮುದಾಯಕ್ಕೆ ಗುಡ್ ನ್ಯೂಸ್ : `ಸ್ವಯಂ ಉದ್ಯೋಗ’ ಸಹಾಯಧನ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ.!

06/06/2025 5:02 AM

GOOD NEWS : ರಾಜ್ಯದ ಬಡಜನತೆಗೆ ಮತ್ತೊಂದು ಗುಡ್ ನ್ಯೂಸ್ : ಇಂದಿರಾ ಕ್ಯಾಂಟೀನ್ ಗಳಲ್ಲಿ `ಮೊಟ್ಟೆ’ ವಿತರಣೆ.!

06/06/2025 5:01 AM

GOOD NEWS : ರಾಜ್ಯದ ಜನತೆಗೆ ಸರ್ಕಾರದಿಂದ ಗುಡ್ ನ್ಯೂಸ್ : ಕೇವಲ 21 ದಿನದೊಳಗೆ ನಿಮ್ಮ ದೂರು/ಮನವಿ ಅರ್ಜಿ ವಿಲೇವಾರಿ.!

06/06/2025 5:00 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.