2024-25ನೇ ಸಾಲಿಗೆ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಸ್ವಯಂ ಉದ್ಯೋಗ ನೇರಸಾಲ ಯೋಜನೆ-ಕುರಿ ಸಾಕಾಣಿಕೆ ಹಾಗೂ ಸ್ವಾವಲಂಬಿ ಸಾರಥಿ-ಪುಡ್ ಕಾರ್ಟ್ ಯೋಜನೆಗಳಡಿ ನಿಗಮದ ವ್ಯಾಪಿಗೆ ಒಳಪಡುವ ಫಲಾಪೇಕ್ಷಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆ ಅವಧಿಯನ್ನು ಡಿ.29 ರವರೆಗೆ ವಿಸ್ತರಿಸಲಾಗಿದೆ.
ಸ್ವಯಂ ಉದ್ಯೋಗ ನೇರಸಾಲ ಯೋಜನೆಯಡಿ ಕುರಿ ಸಾಕಾಣಿಕೆ ಉದ್ದೇಶಕ್ಕಾಗಿ ಸಹಾಯಧನ ರೂ.50 ಸಾವಿರ ಹಾಗೂ ಸಾಲ ರೂ.50 ಸಾವಿರ ಸೇರಿ ಒಟ್ಟು ಘಟಕ ವೆಚ್ಚ 1 ಲಕ್ಷ ಮಂಜೂರು ಮಾಡಲಾಗುವುದು. ಸ್ವಾವಲಂಬಿ ಸಾರಥಿ-ಪುಡ್ ಕಾರ್ಟ್ ಯೋಜನೆಯಡಿ ಪುಡ್ ಕಾರ್ಟ್ ಉದ್ದೇಶಕ್ಕಾಗಿ ಜಿಲ್ಲಾ ಕೇಂದ್ರಗಳ ವ್ಯಾಪ್ತಿಯಲ್ಲಿ ಮಾತ್ರ ಬ್ಯಾಂಕುಗಳ ಸಹಯೋಗದೊಂದಿಗೆ ಯೋಜನೆ ಅನುಷ್ಠಾನಗೊಳಿಸಿ, ಸಾಲ ಮೊತ್ತಕ್ಕೆ ಶೇ.75ರಷ್ಟು ಅಥವಾ ಗರಿಷ್ಟ ರೂ.4 ಲಕ್ಷಗಳ ಸಹಾಯಧನ ಮಂಜೂರು ಮಾಡಲಾಗುವುದು.
2022-23 ಹಾಗೂ 2023-24ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿರುವ ಫಲಾಪೇಕ್ಷಿಗಳು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ ಎಂದು ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಎಂ.ತಿಮ್ಮರಾಯಪ್ಪ ತಿಳಿಸಿದ್ದಾರೆ.