ಬೆಂಗಳೂರು : ಬೆಂಗಳೂರು ಜನತೆಗೆ ನಮ್ಮ ಮೆಟ್ರೋ ಭರ್ಜರಿ ಗುಡ್ ನ್ಯೂಸ್ ನೀಡಿದ್ದು, 2023ರಲ್ಲಿ ನಮ್ಮ ಮೆಟ್ರೋ ಐಟಿ ಕಾರಿಡಾರ್ನಲ್ಲಿ ಮೆಟ್ರೋ ರೈಲಿನ ವಾಣಿಜ್ಯ ಸಂಚಾರ ಆರಂಭವಾಗಲಿದೆ.
ಹೌದು, ಮುಂದಿನ ವರ್ಷವೇ ನಮ್ಮ ಮೆಟ್ರೋ ಐಟಿ ಕಾರಿಡಾರ್ ನಲ್ಲಿ ವಾಣಿಜ್ಯ ರೈಲುಗಳು ಸಂಚರಿಸಲಿವೆ. ಬೈಯಪ್ಪನಹಳ್ಳಿಯಿಂದ ವೈಟ್ಫೀಲ್ಡ್ ನಡುವಿನ ಮಾರ್ಗವನ್ನು ಬೆಂಗಳೂರು ಮೆಟ್ರೋದಲ್ಲಿ ಐಟಿ ಕಾರಿಡಾರ್ ಎಂದು ಗುರುತಿಸಲಾಗಿದೆ. ಈ ಮಾರ್ಗದಲ್ಲಿ ಮೆಟ್ರೋ ರೈಲು ಸಂಚಾರ ಆರಂಭವಾದರೆ ಪ್ರಯಾಣಿಕರಿಗೆ ಅನುಕೂಲ ಆಗಲಿದ್ದು, ಟ್ರಾಫಿಕ್ ಕಿರಿ ಕಿರಿ ತಪ್ಪಲಿದೆ. ಈ ಮಾರ್ಗದಲ್ಲಿ ಕಾಮಗಾರಿ ಈಗಾಗಲೇ ಮುಗಿಯುತ್ತಾ ಬಂದಿದ್ದು, . ಬಿಎಂಆರ್ಸಿಎಲ್ ಈಗಾಗಲೇ ಪ್ರಾಯೋಗಿಕ ಸಂಚಾರವನ್ನು ಆರಂಭಿಸಿದೆ.
ಇನ್ನೂ, ಪ್ರಧಾನಿ ನರೇಂದ್ರ ಮೋದಿ ಶೀಘ್ರವೇ ಬೆಂಗಳೂರಿಗೆ ಆಗಮಿಸಲಿದ್ದು, ನಮ್ಮ ಮೆಟ್ರೋ ಐಟಿ ಕಾರಿಡಾರ್ ಗೆ ಚಾಲನೆ ನೀಡಲಿದ್ದಾರೆ ಎನ್ನಲಾಗಿದೆ.
ಕಳೆದ ತಿಂಗಳಿನಲ್ಲಿ ಬೆಂಗಳೂರಿಗೆ ಆಗಮಿಸಿದ್ದ ಪ್ರಧಾನಿ ಮೋದಿ ಕೆಂಪೇಗೌಡ ಪ್ರತಿಮೆ ಉದ್ಘಾಟನೆ , ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಟರ್ಮಿನಲ್ ಗೆ ಚಾಲನೆ ನೀಡಿದ್ದರು. ಇದೀಗ ಮತ್ತೆ ಪ್ರಧಾನಿ ಮೋದಿ ರಾಜ್ಯಕ್ಕೆ ಆಗಮಿಸಲಿದ್ದಾರೆ.ಹೌದು, ಪ್ರಧಾನಿ ನರೇಂದ್ರ ಮೋದಿ ಮತ್ತೆ ಮುಂದಿನ ರಾಜ್ಯಕ್ಕೆ ಭೇಟಿ ನೀಡಲಿದ್ದು, ರಾಜ್ಯದ ಬಿಜೆಪಿ ನಾಯಕರಿಗೆ ಮತ್ತಷ್ಟು ಹುಮ್ಮಸ್ಸು ಬರಲಿದೆ.
ಪ್ರಧಾನಿ ಮೋದಿ ವಿವೇಕಾನಂದ ಜಯಂತಿಯಲ್ಲಿ ಭಾಗಿಯಾಗಲಿದ್ದು, ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ. ಹಾಗೂ ಯುವ ಮೋರ್ಚಾ ಸಮಾವೇಶದಲ್ಲಿ ಮೋದಿ ಭಾಗಿಯಾಗುವ ಸಾಧ್ಯತೆ ಇದೆ. ಹಾಗೆಯೇ ಧಾರವಾಡದಲ್ಲಿ ಐಐಟಿ ಕಟ್ಟಡ ಉದ್ಘಾಟನೆಗೆ ಮೋದಿ ಬರಲಿದ್ದು, ಬಳಿಕ ಉಡುಪಿ ಹಾಗೂ ಧಾರವಾಡಕ್ಕೆ ಪ್ರಧಾನಿ ಮೋದಿ ಭೇಟಿ ನೀಡುವ ಸಾಧ್ಯತೆಯಿದೆ. ಈ ಹಿನ್ನೆಲೆ ಬಿಜೆಪಿಯಿಂದ ಸಮಾವೇಶಕ್ಕೆ ಭಾರೀ ಸಿದ್ಧತೆ ನಡೆದಿದೆ.
ಇನ್ನೂ, ಗುಜರಾತ್ ಚುನಾವಣೆ ಫಲಿತಾಂಶದ ಬಳಿಕ ಬಿಜೆಪಿ ನಚಿತ್ತ ಕರ್ನಾಟಕದತ್ತ ಹರಿದಿದ್ದು, ಬಿಜೆಪಿ ವರಿಷ್ಟರು ಕರ್ನಾಟಕಕ್ಕೆ ಭೇಟಿ ನೀಡುತ್ತಿದ್ದಾರೆ. ಪ್ರಧಾನಿ ಮೋದಿ ಹಾಗೂ ಅಮಿತ್ ಶಾ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ ವಿವಿಧ ನಾಯಕರುಗಳು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ ಎಂದು ತಿಳಿದು ಬಂದಿದೆ.
ಪ್ರಧಾನಿ ಮೋದಿ ಅವರು ಜ. 2ನೇ ವಾರ ಕರ್ನಾಟಕಕ್ಕೆ ಆಗಮಿಸಲಿದ್ದು, ಕೇಂದ್ರ ಸಚಿವ ಅಮಿತ್ ಶಾ ಅವರು ಚಿತ್ರದುರ್ಗದಲ್ಲಿ ಜನವರಿ ಮೊದಲ ವಾರ ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ.
ಪ್ರತ್ಯೇಕ ಯಾತ್ರೆ ಕೈಗೊಂಡಿದ್ದ ಡಿಕೆಶಿ, ಸಿದ್ದುಗೆ ಶಾಕ್ : ಒಟ್ಟಿಗೆ ಬಸ್ ಯಾತ್ರೆಗೆ ಹೈಕಮಾಂಡ್ ಸೂಚನೆ
BIGG NEWS : ಫೆಬ್ರವರಿಯಲ್ಲಿ 2,500 ಪ್ರೌಢಶಾಲಾ ಶಿಕ್ಷಕರ ನೇಮಕ : ಶಿಕ್ಷಣ ಸಚಿವ ಬಿ.ಸಿ.ನಾಗೇಶ್