ಬೆಂಗಳೂರು: ನಗರದ ಜನತೆ ಬೆಳಿಗ್ಗೆ ವಾಕ್ ಮಾಡೋದಕ್ಕಾಗಿ, ಸಂಜೆ ವಾಕಿಂಗ್ ಮಾಡೋದಕ್ಕಾಗಿ ಉಪಯೋಗವಾಗೋ ನಿಟ್ಟಿನಲ್ಲಿ, ಇನ್ಮುಂದೆ ಬೆಂಗಳೂರಿನ ಪಾರ್ಕ್ ಗಳು ಬೆಳಿಗ್ಗೆ 5 ರಿಂದ ರಾತ್ರಿ 10ರವರೆಗೆ ಓಪನ್ ಮಾಡೋದಕ್ಕೆ ಡಿಸಿಎಂ ಡಿ.ಕೆ ಶಿವಕುಮಾರ್ ಸೂಚಿಸಿದ್ದಾರೆ.
ಇಂದು ಸುದ್ದಿಗೋಷ್ಠಿಯಲ್ಲಿ ಮಾಹಿತಿ ಹಂಚಿಕೊಂಡಂತ ಅವರು, ಇನ್ನು ನಗರದಲ್ಲಿನ ಪಾಲಿಕೆ ವ್ಯಾಪ್ತಿಯ ಉದ್ಯಾನವನಗಳನ್ನು ನಿರ್ದಿಷ್ಟ ಸಮಯದಲ್ಲಿ ಮಾತ್ರ ತೆರೆಯಲಾಗುತ್ತಿದೆ. ಸಾರ್ವಜನಿಕರು ಮಧ್ಯಾಹ್ನದ ವೇಳೆಯೂ ಉದ್ಯಾನಗಳನ್ನು ತೆರೆಯ ಬೇಕು ಎಂದು ಮನವಿ ನೀಡಿದ್ದು, ಹೀಗಾಗಿ ನಗರದ ಎಲ್ಲಾ ಉದ್ಯಾನಗಳನ್ನು ಬೆಳಗ್ಗೆ 5 ಗಂಟೆಯಿಂದ ರಾತ್ರಿ 10 ರವರೆಗೆ ತೆರೆಯಲು ನಿರ್ಧರಿಸಲಾಗಿದೆ ಎಂದರು.
ಕಬ್ಬನ್ ಪಾರ್ಕ್ ತೋಟಗಾರಿಕಾ ಇಲಾಖೆ ವ್ಯಾಪ್ತಿಯಲ್ಲಿದ್ದು ಈ ಸಮಯ ಇಲ್ಲಿಗೆ ಅನ್ವಯವಾಗುವುದಿಲ್ಲ. ಉದ್ಯಾನವನಗಳಲ್ಲಿ ಕಾನೂನುಬಾಹಿರ ಚಟುವಟಿಕೆ ನಿಯಂತ್ರಿಸಲು ಪೊಲೀಸರ ಗಸ್ತು, ಮಾರ್ಷಲ್ ಗಳನ್ನು ನಿಯೋಜಿಸಲಾಗುವುದು. ಇದರ ಜತೆಗೆ 22660000, 22221188 ಪಾಲಿಕೆಯ ದೂರವಾಣಿ ಸಂಖ್ಯೆಗೆ ಕರೆ ಮಾಡಿ ದೂರು ನೀಡಬಹುದು. 9480685700 ಗೆ ವಾಟ್ಸಪ್ ಮೂಲಕ ಮಾಹಿತಿ ನೀಡಬಹುದು ಎಂದು ತಿಳಿಸಿದರು.
ಅನಧಿಕೃತ ಫ್ಲೆಕ್ಸ್; ಎಆರ್ ಓ ವಿರುದ್ಧವೂ ಪ್ರಕರಣ
ಪಾಲಿಕೆ ವತಿಯಿಂದ ಅನಧಿಕೃತ ಫ್ಲೆಕ್ಸ್ ನಿಷೇಧ ಮಾಡಿದ್ದರೂ, ಎಲ್ಲಾ ರಾಜಕೀಯ ಪಕ್ಷಗಳ ವತಿಯಿಂದ ಫ್ಲೆಕ್ಸ್ ಹಾಕಲಾಗುತ್ತಿದೆ. ಇದನ್ನು ನಿಯಂತ್ರಿಸುವುದು ಆಯಾ ಪ್ರದೇಶದ ಸಹಾಯಕ ಕಂದಾಯ ಅಧಿಕಾರಿಯ (ARO) ಜವಾಬ್ದಾರಿಯಾಗಿದ್ದು, ಇನ್ನು ಮುಂದೆ ಅನಧಿಕೃತ ಫ್ಲೆಕ್ಸ್ ಇದ್ದರೆ, ಅನಧಿಕೃತ ಫ್ಲೆಕ್ಸ್ ಹಾಕಿದವರ ಜತೆಗೆ ಈ ಅಧಿಕಾರಿಗಳ ಮೇಲೂ ಶಿಸ್ತುಕ್ರಮ ದಾಖಲಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಅನಧಿಕೃತ ಫ್ಲೆಕ್ಸ್ ಗಳ ಬಗ್ಗೆ ಸಾರ್ವಜನಿಕರು ಪಾಲಿಕೆಗೆ ದೂರು ನೀಡಲು 1533 ಸಹಾಯವಾಣಿಯನ್ನು ಸಂಪರ್ಕಿಸಬಹುದು. 9480683939 ವಾಟ್ಸಪ್ ಮೂಲಕ ಸಾರ್ವಜನಿಕರು ಅನಧಿಕೃತ ಫ್ಲೆಕ್ಸ್ ಹಾಕಿರುವ ಫೋಟೋ ಹಾಗೂ ವಿಳಾಸ ಕಳುಹಿಸಬಹುದು. ಆಗ ಪಾಲಿಕೆ ವತಿಯಿಂದ ತಕ್ಷಣ ಕ್ರಮ ಕೈಗೊಳ್ಳಲಾಗುವುದು ಎಂದರು.
BIG NEWS: ಬೆಂಗಳೂರಲ್ಲಿ ‘ಆಸ್ತಿ ತೆರಿಗೆ’ ಪಾವತಿಗೆ ಜು.31 ಕೊನೇ ದಿನ, ಮತ್ತೆ ಅವದಿ ವಿಸ್ತರಣೆಯಿಲ್ಲ: ಡಿಸಿಎಂ ಡಿಕೆಶಿ
ದರ್ಶನ್ ಬಂಧಿಸದಂತೆ ಪೊಲೀಸರಿಗೆ ಒತ್ತಡ : ರಾಜಕಾರಣಿಗಳು, ಸ್ಯಾಂಡಲ್ ವುಡ್ ಹಿರಿಯರಿಂದ ಪ್ರೆಶರ್!