ಬೆಂಗಳೂರು: ನಗರದ ಜನತೆಗೆ ಮತ್ತೊಂದು ಗುಡ್ ನ್ಯೂಸ್ ಎನ್ನುವಂತೆ ಹೊಸ ಮಾರ್ಗದಲ್ಲಿ ಬಿಎಂಟಿಸಿ ಬಸ್ ಸಂಚಾರ ಆರಂಭಗೊಳಿಸಲಾಗುತ್ತಿದೆ.
ಈ ಬಗ್ಗೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಸಂಸ್ಥೆಯು ಸಾರ್ವಜನಿಕ ಪ್ರಯಾಣಿಕರಿಗೆ ದಕ್ಷ, ವಿಶ್ವಾಸನೀಯ, ಆರಾಮದಾಯಕ ಹಾಗೂ ಮಿತವ್ಯಯಕರ ದರದಲ್ಲಿ ಉತ್ತಮ ಸಾರಿಗೆ ಸೌಲಭ್ಯವನ್ನು ಒದಗಿಸುತ್ತಿದೆ ಎಂದಿದೆ.
ಬೆಂ.ಮ.ಸಾ.ಸಂಸ್ಥೆಯು ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ನೂತನ ಮಾರ್ಗವನ್ನು ದಿನಾಂಕ: 03.10.2024 ರಿಂದ ಪರಿಚಯಿಸುತ್ತಿದ್ದು ವಿವರ ಕೆಳಕಂಡಂತಿದೆ :
ಮಾರ್ಗ ಸಂಖ್ಯೆ | ಎಲ್ಲಿಂದ | ಎಲ್ಲಿಗೆ | ಮಾರ್ಗ | ಬಸ್ಸುಗಳ ಸಂಖ್ಯೆ |
298-ಎಂವೈ | ಯಶವಂತಪುರ | ದೇವನಹಳ್ಳಿ | ಮತ್ತಿಕೆರೆ, ಬಿ.ಇ.ಎಲ್ ಸರ್ಕಲ್, ಹೆಬ್ಬಾಳ, ಯಲಹಂಕ | 2 |
ಸದರಿ ಮಾರ್ಗದ ವೇಳಾಪಟ್ಟಿ ಕೆಳಕಂಡಂತಿದೆ.
ಬಿಡುವ ವೇಳೆ | ||
ಯಶವಂತಪುರ | ದೇವನಹಳ್ಳಿ | |
0545, 0720, 0935, 1520, 1620, 2020 | 0545, 0720, 1305, 1405, 1810, 1945 |
ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡುವವರೆಗೂ ಹೋರಾಟ ಮಾಡುತ್ತೇವೆ, ಈ ಹೋರಾಟ ನಿಲ್ಲಲ್ಲ: ಆರ್.ಅಶೋಕ್
BREAKING : ಬೆಂಗಳೂರಲ್ಲಿ ಕಿಲ್ಲರ್ ‘BMTC’ ಗೆ ಮತ್ತೊಂದು ಬಲಿ : ಬಸ್ ಚಕ್ರದ ಅಡಿ ಸಿಲುಕಿ ಬೈಕ್ ಸವಾರ ದುರ್ಮರಣ!