ಬೆಂಗಳೂರು: ನಗರದಲ್ಲಿ ಮಳೆಗಾಲ ಶುರುವಾದ ನಂತ್ರ, ಜನತೆಗೆ ಶುದ್ಧ ಕುಡಿಯುವ ನೀರಿನ ಕೊರತೆ ಉಂಟಾಗಿದೆ. ಕೆಲವೆಡೆ ಅಶುದ್ಧ ನೀರು ಸರಬರಾಜು ಪರಿಣಾಮ ಕಾಲರಾಕ್ಕೆ ಕಾರಣವಾಗುತ್ತಿದೆ ಎಂಬ ಆರೋಪ ಕೇಳಿ ಬಂದಿತ್ತು. ಈ ಬೆನ್ನಲ್ಲೇ ಬೆಂಗಳೂರು ಜನತೆಗೆ ಗುಡ್ ನ್ಯೂಸ್ ಎನ್ನುವಂತೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಶುದ್ಧ ಕುಡಿಯುವ ನೀರು ಪೂರೈಸಲು ಸೂಚಿಸಿದ್ದಾರೆ.
ಈ ಬಗ್ಗೆ ಬೆಂಗಳೂರು ಜಲಮಂಡಳಿಗೆ ಪತ್ರ ಬರೆದಿರುವಂತ ಡಿಸಿಎಂ ಡಿ.ಕೆ ಶಿವಕುಮಾರ್ ಅವರು, ಕರ್ನಾಟಕ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಲುಷಿತ ನೀರಿನೊಂದಿಗೆ ಸೇರಿರುವುದರಿಂದ ಜನರು ಅಸ್ವಸ್ಥಗೊಂಡು, ವಿವಿಧ ರೀತಿಯ ರೋಗಗಳಿಗೆ ತುತ್ತಾಗುತ್ತಿದ್ದಾರೆ ಎಂದು ಹಲವು ಮಾಧ್ಯಮ ಮತ್ತು ದಿನಪತ್ರಿಕೆಗಳಲ್ಲಿ ಪ್ರಸಾರವಾಗಿರುತ್ತದೆ. ಸದರಿ ವಿಷಯವು ಇಂದು ಸನ್ಮಾನ್ಯ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳೊಂದಿಗೆ ನಡೆದ ವಿಡಿಯೋ ಸಂವಾದದ ಸಭೆಯಲ್ಲಿ ಚರ್ಚೆಯಾಗಿರುತ್ತದೆ ಎಂದಿದ್ದಾರೆ.
ಈ ಹಿನ್ನೆಲೆಯಲ್ಲಿ, ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ನಾಗರೀಕರಿಗೆ ಸರಬರಾಜು ಮಾಡುತ್ತಿರುವ ಕುಡಿಯುವ ನೀರು ಹಾಗೂ ಬೋರವೆಲ್ ನೀರನ್ನು ಒಳಗೊಂಡಂತೆ ಪ್ರಯೋಗಾಲಯದಲ್ಲಿ ನೀರಿನ ಗುಣಮಟ್ಟವನ್ನು ಪರಿಶೀಲಿಸಿ, ಉತ್ತಮ ಗುಣಮಟ್ಟದ ಕುಡಿಯುವ ನೀರನ್ನು ಸರಬರಾಜು ಮಾಡಲು ಹಾಗೂ ಕುಡಿಯುವ ನೀರಿನಿಂದ ಯಾವುದೇ ಆರೋಗ್ಯ ಸಮಸ್ಯೆ ಉಂಟಾಗದಂತೆ ಸೂಕ್ತ ಕ್ರಮ ಕೈಗೊಳ್ಳಲು ಸೂಚಿಸಿದೆ. ತಪ್ಪಿದಲ್ಲಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಈ ಮೂಲಕ ತಿಳಿಸಿದ್ದಾರೆ.
ರಾಜ್ಯದ ವಿವಿಧೆಡೆ ಕಲುಷಿತ ನೀರು ಸೇವನೆಯಿಂದ ಜನರು ಅಸ್ವಸ್ಥಗೊಂಡಿರುವ ಪ್ರಕರಣಗಳು ಆತಂಕ ಉಂಟುಮಾಡಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ನಾಗರಿಕರಿಗೆ ಪೂರೈಸುವ ಕುಡಿಯುವ ನೀರು ಹಾಗೂ ಬೋರ್ ವೆಲ್ ನೀರನ್ನು ಒಳಗೊಂಡಂತೆ ಪ್ರಯೋಗಾಲಯದಲ್ಲಿ ನೀರಿನ ಗುಣಮಟ್ಟವನ್ನು ಪರಿಶೀಲಿಸಿ, ಉತ್ತಮ ಗುಣಮಟ್ಟದ ಕುಡಿಯುವ ನೀರನ್ನು ಸರಬರಾಜು ಮಾಡಲು ಹಾಗೂ ಕುಡಿಯುವ ನೀರಿನಿಂದ ಯಾವುದೇ ಆರೋಗ್ಯ ಸಮಸ್ಯೆ ಉಂಟಾಗದಂತೆ ಸೂಕ್ತ ಕ್ರಮ ಕೈಗೊಳ್ಳಲು ಬಿಬಿಎಂಪಿಯ ಮುಖ್ಯ ಆಯುಕ್ತರಿಗೆ, ಜಿಲ್ಲಾ ಪಂಚಾಯತ್’ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ, ಬೆಂಗಳೂರು ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿಯ ಅಧ್ಯಕ್ಷರಿಗೆ ಪತ್ರ ಬರೆದು ಸೂಚಿಸಿದ್ದೇನೆ. ತಪ್ಪಿದಲ್ಲಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುತ್ತದೆ. ಬೆಂಗಳೂರಿನ ಜನರಿಗೆ ಶುದ್ಧ ಕುಡಿಯುವ ನೀರು ಒದಗಿಸುವುದು ನಮ್ಮ ಆದ್ಯತೆ ಹಾಗೂ ಬದ್ಧತೆಯಾಗಿದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಎಚ್ಚರಿಸಿದ್ದಾರೆ.
Taking cognisance of the our people falling ill due to contaminated water, I have instructed Chief Executive Officer, Chairman of Bengaluru Water Supply and Internal Drainage Board to take appropriate measures to ensure clean water supply.
Similarly, Chief Commissioner of BBMP,… pic.twitter.com/EtK0Qz2dHb
— DK Shivakumar (@DKShivakumar) May 24, 2024
‘BMTC’ಗೆ ಮತ್ತೊಂದು ಗರಿಮೆ: ‘ಆರೋಗ್ಯ ವರ್ಲ್ಡ್’ನಿಂದ 2024ರ ಆರೋಗ್ಯಕರ ಕಾರ್ಯಸ್ಥಳ ಪ್ರಶಸ್ತಿ
2024-25 ನೇ ಸಾಲಿನ ಶೈಕ್ಷಣಿಕ ಮಾರ್ಗದರ್ಶಿ ಪುಸ್ತಕ : ಶಾಲಾ ಮುಖ್ಯಸ್ತರಿಗೆ ಶಿಕ್ಷಣ ಇಲಾಖೆಯಿಂದ ಮಹತ್ವದ ಸೂಚನೆ