ಬೆಂಗಳೂರು: ನಗರದ ಜನತೆಗೆ ಗುಡ್ ನ್ಯೂಸ್ ಎನ್ನುವಂತೆ ನೀರಿನ ಬಾಕಿ, ಅಸಲು ಬಿಲ್ ಪಾವತಿಸಿದರೇ ಬಡ್ಡಿ ಮನ್ನಾ ಮಾಡುವಂತ ನಿರ್ಧಾರವನ್ನು ರಾಜ್ಯ ಸಚಿವ ಸಂಪುಟ ಸಭೆಯು ನಿರ್ಧರಿಸಿದೆ.
ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯಲ್ಲಿ ಬೆಂಗಳೂರು ನಾಗರಿಕರಿಗೆ ಗುಡ್ ನ್ಯೂಸ್ ನೀಡಲಾಗಿದೆ. ನೀರಿನ ಬಿಲ್ ಪಾವತಿಸಿದರೆ ಬಡ್ಡಿ ಮನ್ನಾ ಮಾಡಲು ನಿರ್ಧರಿಸಲಾಗಿದೆ. ಬಾಕಿ, ಅಸಲು ಏಕ ಕಾಲದಲ್ಲಿ ಪಾವತಿಸಿದರೆ ಬಡ್ಡಿ ಮನ್ನಾ ಮಾಡುವಂತ ನಿರ್ಧಾರ ಕೈಗೊಂಡಿದೆ. ಏಕಕಾಲಿಕ ತೀರುವಳಿ ಯೋಜನೆಗೆ ಅನುಮೋದನೆಯನ್ನು ಸಂಪುಟ ನೀಡಿದೆ.
ಇನ್ನೂ ಶರಾವತಿ ನದಿಗೆ ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಾಣಕ್ಕೆ 200 ಕೋಟಿ ಮೊತ್ತದ ಯೋಜನೆಗೆ ಒಪ್ಪಿಗೆ ನೀಡಲಾಗಿದೆ. ಮುಳ್ಕೋಡು ಗ್ರಾಮದ ಬಳಿ ನಿರ್ಮಾಣ ಮಾಡಲಾಗುತ್ತಿದೆ. ಮೈಸೂರು ಮಹಾನಗರ ಪಾಲಿಕೆ ಮೇಲ್ದರ್ಜೇಗೇರಿಕೆ ನಿರ್ಧರಿಸಿದೆ. ಗ್ರೇಡ್-1 ಮಹಾನಗರ ಪಾಲಿಕೆಯಾಗಿ ಮೇಲ್ದರ್ಜೆಗೆ ಏರಿಸಲಿದೆ. ಕೆಲವು ಅಕ್ಕಪಕ್ಕದ ಗ್ರಾಮಗಳ ಸೇರ್ಪಡೆಗೆ ಒಪ್ಪಿಗೆ ನೀಡಲಾಗಿದೆ.
ಜಿಬಿಎ ವ್ಯಾಪ್ತಿಯಲ್ಲಿ ಘನತ್ಯಾಜ್ಯ ನಿರ್ವಹಣೆಗೆ 100 ಕೋಟಿ ಮೊತ್ತದಲ್ಲಿ BSWML ಮೂಲಕ ಅನುಷ್ಠಾನವಾಗಲಿದೆ. ತಿಪ್ಪಗೊಂಡನಹಳ್ಳಿ ಜಲಾನಯನದ ಬಫರ್ ಜೋನ್ ಮರುನಿಗದಿಗೆ ಒಪ್ಪಿಗೆ ನೀಡಿದೆ. ಕರ್ನಾಟಕ ವಿವಿ ತಿದ್ದುಪಡಿ ವಿಧೇಯಕಕ್ಕೆ ಒಪ್ಪಿಗೆ ನೀಡಲಾಗಿದೆ. ಕಲಬುರಗಿಯಲ್ಲಿ 12 ಕೋಟಿ ಮೊತ್ತದ ಯೋಜನೆ ನೀಡಲಾಗಿದೆ. ಲೀಪ್ ಆಧಾರದಲ್ಲಿ ಉತ್ಕೃಷ್ಟ ಕೇಂದ್ರ ಸ್ಥಾಪನೆಗೆ ನಿರ್ಧರಿಸಿದೆ. ಇದಕ್ಕೆ ಘಟನೋತ್ತರ ಅನುಮೋದನೆ ನೀಡಲಾಗಿದೆ.
ಕಬ್ಬಿಣದ ಅದಿರು ನೀತಿ-2025ಕ್ಕೆ ಒಪ್ಪಿಗೆಯನ್ನು ಸಂಪುಟ ನೀಡಿದೆ. ಜಿಲ್ಲೆಗಳಲ್ಲಿ ಜಿಲ್ಲಾ ಕಾರ್ಮಿಕ ಸೇವೆಗಳ ಸಹಕಾರ ಸಂಘ ಸ್ಥಾಪನೆಗೂ ನಿರ್ಧರಿಸಲಾಗಿದೆ. ನ್ಯಾಯಾಂಗ ಸೇವೆ ನಿಯಮಗಳಿಗೆ ತಿದ್ದುಪಡಿಗೆ ಒಪ್ಪಿಗೆಯನ್ನು ಇಂದಿನ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನೀಡಲಾಗಿದೆ.
ವರದಿ: ವಸಂತ ಬಿ ಈಶ್ವರಗೆರೆ.., ಸಂಪಾದಕರು…
ನುಡಿದಂತೆ ನಡೆದ ರಾಮಲಿಂಗಾರೆಡ್ಡಿ: NWKRTC 1000 ಚಾಲನಾ ಹುದ್ದೆ ಭರ್ತಿಗೆ ಸಂಪುಟದ ಅನುಮೋದನೆ ಪಡೆದ ಸಚಿವರು
BREAKING : ಡಿಕೆ ಶಿವಕುಮಾರ್ ಗೆ ಸಿಎಂ ಸ್ಥಾನ ಬಿಟ್ಟುಕೊಡದಿದ್ದರೆ ಸರ್ಕಾರ ಪತನ : ವೀರೇಶ್ವರ ಸ್ವಾಮೀಜಿ ಭವಿಷ್ಯ








