ಬೆಂಗಳೂರು: ಮಂಗಳೂರು ಜನತೆಗೆ ಗುಡ್ ನ್ಯೂಸ್ ಎನ್ನುವಂತೆ ದೀಪಾವಳಿ ಹಬ್ಬಕ್ಕೆ ಊರಿಗೆ ತೆರಳುವ ಪ್ರಯಾಣಿಕರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಕೆಲ ವಿಶೇಷ ರೈಲುಗಳ ಸಂಚಾರದ ವ್ಯವಸ್ಥೆಯನ್ನು ಮಾಡಲಾಗಿದೆ.
ಈ ಬಗ್ಗೆ ನೈರುತ್ಯ ರೈಲ್ವೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್-ಕಾರವಾರ ನಿಲ್ದಾಣಗಳ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ (06597/98) ರೈಲು ಸಂಚಾರ ಮಾಡಲಿದೆ ಎಂದಿದೆ.
ರೈಲು ಸಂಖ್ಯೆ 06597 ಅಕ್ಟೋಬರ್ 30, 2024 ರಂದು ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ನಿಂದ ಮಧ್ಯಾಹ್ನ 1 ಗಂಟೆಗೆ ಹೊರಡಲಿರುವ ಈ ರೈಲು ಚಿಕ್ಕಬಾಣಾವರ, ಕುಣಿಗಲ್, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಬಕಪುತ್ತೂರು, ಬಂಟವಾಳ, ಸುರತ್ಕಲ್, ಮೂಲ್ಕಿ, ಉಡುಪಿ, ಬಾರ್ಕೂರು, ಕುಂದಾಪುರ, ಬೈಂದೂರು, ಭಟ್ಕಳ, ಮುರ್ಡೇಶ್ವರ, ಹೊನ್ನಾವರ, ಕುಮಟಾ, ಗೋಕರ್ಣ ರೋಡ್ ಮತ್ತು ಅಂಕೋಲಾ ನಿಲ್ದಾಣಗಳ ಮೂಲಕ ಮರುದಿನ ಬೆಳಗಿನ ಜಾವ 4 ಗಂಟೆಗೆ ಕಾರವಾರ ನಿಲ್ದಾಣವನ್ನು ತಲುಪಲಿದೆ.
ಹಿಂದಿರುಗುವ ದಿಕ್ಕಿನಲ್ಲಿ, ಪುನಃ ಇದೇ ರೈಲು (06598) ಅಕ್ಟೋಬರ್ 31, 2024 ರಂದು ಮಧ್ಯಾಹ್ನ 12 ಗಂಟೆಗೆ ಕಾರವಾರದಿಂದ ಹೊರಡಲಿರುವ ರೈಲು ಅದೇ ಮಾರ್ಗವಾಗಿ, ಮರುದಿನ ಬೆಳಗಿನ ಜಾವ್ 4 ಗಂಟೆಗೆ ಎಸ್ಎಂವಿಟಿ ಬೆಂಗಳೂರು ತಲುಪಲಿದೆ .
ಈ ರೈಲಿನಲ್ಲಿ 4 ಜನರಲ್ ಸೆಕೆಂಡ್ ಕ್ಲಾಸ್, 10 ಸ್ಲೀಪರ್ ಕ್ಲಾಸ್, 2 ಎಸಿ ತ್ರಿ ಟೈಯರ್ ಮತ್ತು 2 ಸೆಕೆಂಡ್ ಕ್ಲಾಸ್ ಲಗೇಜ್ / ಬ್ರೇಕ್ ವ್ಯಾನ್ಗಳು ಸೇರಿದಂತೆ 18 ಬೋಗಿಗಳು ಇರಲಿವೆ.
ಯಶವಂತಪುರ-ಮಂಗಳೂರು ಜಂಕ್ಷನ್ ನಿಲ್ದಾಣಗಳ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ (06565/66) ರೈಲು ಸಂಚಾರ
ರೈಲು ಸಂಖ್ಯೆ 06565 ಅಕ್ಟೋಬರ್ 30, 2024 ರಂದು ಯಶವಂತಪುರದಿಂದ ರಾತ್ರಿ 11.50ಕ್ಕೆ ಹೊರಡಲಿರುವ ಈ ರೈಲು ಕುಣಿಗಲ್, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಬಕಪುತ್ತೂರು, ಬಂಟ್ವಾಳ ನಿಲ್ದಾಣಗಳ ಮೂಲಕ ಮರುದಿನ ಬೆಳಗ್ಗೆ 11.45ಕ್ಕೆ ಮಂಗಳೂರು ಜಂಕ್ಷನ್ ತಲುಪಲಿದೆ.
ಹಿಂದಿರುಗುವ ದಿಕ್ಕಿನಲ್ಲಿ, ಪುನಃ ಇದೇ ರೈಲು (06566) ಅಕ್ಟೋಬರ್ 31, 2024 ರಂದು ಮಧ್ಯಾಹ್ನ 1 ಗಂಟೆಗೆ ಮಂಗಳೂರು ಜಂಕ್ಷನ್ ನಿಂದ ಹೊರಡಲಿರುವ ರೈಲು ಅದೇ ಮಾರ್ಗವಾಗಿ ಅದೇ ದಿನ ರಾತ್ರಿ 9:15 ಕ್ಕೆ ಯಶವಂತಪುರವನ್ನು ತಲುಪಲಿದೆ.
ಪ್ರಯಾಣಿಕರು www.enquiry.indianrail.gov.in ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುವ ಮೂಲಕ ಅಥವಾ NTES ಅಪ್ಲಿಕೇಶನ್ ಬಳಸಿ ಅಥವಾ 139 ಗೆ ಡಯಲ್ ಮಾಡುವ ಮೂಲಕ ರೈಲುಗಳ ಆಗಮನ/ನಿರ್ಗಮನದ ಸಮಯ ಮತ್ತು ಇತರ ವಿವರಗಳನ್ನು ಪರಿಶೀಲಿಸಬಹುದು.
ರಾಜ್ಯ ಸರ್ಕಾರಿ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್: ಕಲಿಕೆ ಸುಧಾರಣೆಗೆ ‘ಶಿಕ್ಷ ಕೋಪೈಲಟ್ ಯೋಜನೆ’ ಜಾರಿ
BREAKING: ಬಿಗ್ ಬಾಸ್ ಕನ್ನಡ 11ಕ್ಕೆ ಜಗದೀಶ್ ಗುಡ್ ಬೈ: ಕೊನೆಗೂ ಮನೆಯಿಂದ ಔಟ್ | BBK11