ಕಲಬುರಗಿ : ಕಲ್ಯಾಣ ಕರ್ನಾಟಕ ಜನತೆಗೆ ಸಿಹಿ ಸುದ್ದಿ ಸಿಕ್ಕಿದೆ. ಪ್ರತ್ಯೇಕ ಸಚಿವಾಲಯ ಸ್ಥಾಪನೆಗೆ ಸಂಪುಟ ಅನುಮೋದನೆ ನೀಡಿದೆ.
ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿಗಾಗಿ ಕೆಲಸಗಳನ್ನು ಇನ್ನೂ ಹೆಚ್ಚು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಮತ್ತು ಅಭಿವೃದ್ಧಿ ಕಾಮಗಾರಿಗಳ ಮೇಲುಸ್ತುವಾರಿ ಮಾಡಲು ಕಲ್ಯಾಣ ಕರ್ನಾಟಕ ಪ್ರದೇಶ ಸಚಿವಾಲಯ ಸ್ಥಾಪನೆಗೆ ಇಂದು ಸಚಿವ ಸಂಪುಟ ಸಭೆಯು ಅನುಮೋದನೆ ನೀಡಿದೆ.
ದಿನಾಂಕ:17.09.2024ರಂದು ಕಲಬುರಗಿಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿಗಾಗಿ ಕೆಲಸಗಳನ್ನು ಇನ್ನೂ ಹೆಚ್ಚಿನ ಪರಿಣಾಮಕಾರಿಯಾಗಿ ಜಾರಿಗೊಳಿಸಲು ಮತ್ತು ಅಭಿವೃದ್ಧಿ ಕಾಮಗಾರಿಗಳ ಮೇಲುಸ್ತುವಾರಿ ಮಾಡಲು ಒಂದು ಪ್ರತ್ಯೇಕ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಸಚಿವಾಲಯವನ್ನು ಸ್ಥಾಪಿಸಲು ಸಚಿವ ಸಂಪುಟವು ನಿರ್ಧರಿಸಲಾಗಿರುತ್ತದೆ. ಮುಂದುವರೆದು, ಕಾಮಗಾರಿಗಳನ್ನು ಅನುಷ್ಠಾನಗೊಳಿಸುವಲ್ಲಿ ಸಿಬ್ಬಂದಿಗಳ ಕೊರತೆ ಇರುವ ಕಾರಣ ಸದರಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಗೆ ಹಾಗೂ ಆ ಪ್ರದೇಶ 7 ಜಿಲ್ಲಾಧಿಕಾರಿಗಳ ಕಚೇರಿಗಳಿಗೆ ಹೆಚ್ಚುವರಿ ಹುದ್ದೆಗಳನ್ನು ಮಂಜೂರು ಮಾಡಿ ಬಲಪಡಿಸಲು ಸಹ ನಿರ್ಧರಿಸಲಾಗಿರುತ್ತದೆ.
ದಿನಾಂಕ 16.09.2025 ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿಗಾಗಿ ಪ್ರತ್ಯೇಕ ಇಲಾಖೆಯನ್ನು ಸೃಜಿಸಲು ನಿರ್ಣಯಿಸಲಾಗಿರುತ್ತದೆ. ಮೇಲಿನ ಹಿನ್ನೆಲೆಯಲ್ಲಿ ಈ ಕೆಳಕಂಡಂತೆ ಆದೇಶಿಸಿದೆ.
ಕರ್ನಾಟಕ ಪ್ರಸ್ತಾವನೆಯಲ್ಲಿ ವಿವರಿಸಿರುವ ಹಿನ್ನೆಲೆಯಲ್ಲಿ ಕಲ್ಯಾಣ ಪ್ರದೇಶಾಭಿವೃದ್ಧಿಗಾಗಿ ಪ್ರತ್ಯೇಕ ಇಲಾಖೆಯನ್ನು ಸೃಜಿಸಿ ಆದೇಶಿಸಿದೆ. ಸದರಿ ಇಲಾಖೆಯು ಮಾನ್ಯ ಯೋಜನೆ ಮತ್ತು ಸಾಂಖ್ಯಿಕ ಸಚಿವರ ಅಧೀನದಲ್ಲಿ ಕಾರ್ಯನಿರ್ವಹಿಸುವುದು.