ಕಲಬುರಗಿ: ತೊಗರಿ ಕಣಜ, ಶರಣರ ನಾಡು ಎಂದೇ ಖ್ಯಾತಿ ಹೊಂದಿರುವ ಕಲಬುರಗಿ ಜಿಲ್ಲೆ ಈಗ “ಕಲ್ಯಾಣ”ಮಯವಾಗುತ್ತಿದೆ. ಅಂದರೆ ಎಲ್ಲ ಕ್ಷೇತ್ರಗಳ ಅದರಲ್ಲೂ ಆರೋಗ್ಯ ಕ್ಷೇತ್ರಪ್ರ ಕಾಶಮಾನವಾಗುತ್ತಿದೆ. ಇದೇ ಡಿಸೆಂಬರ್.22ರಂದು ಕಲಬುರ್ಗಿಯಲ್ಲಿ ನಿರ್ಮಾಣವಾಗಿರುವಂತ ಜಯದೇವ ಹೃದ್ರೋಗ ಆಸ್ಪತ್ರೆಯನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಲೋಕಾರ್ಪಣೆಗೊಳಿಸಲಿದ್ದಾರೆ.
ಈ ಬಗ್ಗೆ ವೈದ್ಯಕೀಯ ಶಿಕ್ಷಣ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣ ಪ್ರಕಾಶ್ ಪಾಟೀಲ್ ಮಾಹಿತಿ ಹಂಚಿಕೊಂಡಿದ್ದು, ಕಲಬುರಗಿ ಜಿಲ್ಲೆಯಲ್ಲಿ ಜಯದೇವ ಹೃದ್ರೋಗ ವಿಜ್ಞಾನ ಸಂಸ್ಥೆ ಮತ್ತು ಸಂಶೋಧನಾ ಸಂಸ್ಥೆಯ ಶಾಖೆಯ ಲೋಕಾರ್ಪಣೆಗೆ ಈಗ ಮುಹೂರ್ತ ನಿಗದಿಯಾಗಿದೆ. ಈ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಆಡಳಿತಾವಧಿಯಲ್ಲಿ(2013–2018) ಜಯದೇವ ಸಂಸ್ಥೆಯ ಸ್ಥಾಪನೆಗೆ ಮುನ್ನುಡಿ ಬರೆಯಲಾಗಿತ್ತು. ಬೃಹತ್ ಆಸ್ಪತ್ರೆ ನಿರ್ಮಾಣ ಮಾಡಲು ಹಿಂದಿನ ಸರ್ಕಾರ ನಿರ್ಲಕ್ಷ್ಯ ತೋರಿದ್ದರಿಂದ ಯೋಜನೆ ನನೆಗುದಿಗೆ ಬಿದ್ದಿತ್ತು ಎಂದಿದ್ದಾರೆ.
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಶರಣ್ ಪ್ರಕಾಶ್ ಪಾಟೀಲ್ ಅವರು ವೈದ್ಯಕೀಯ ಶಿಕ್ಷಣ ಇಲಾಖೆಯ ಜವಾಬ್ದಾರಿ ವಹಿಸಿಕೊಂಡಕೂಡಲೇ ಈ ಯೋಜನೆ ಕೈಗೆತ್ತಿಕೊಂಡರು. ನಿರಂತರ ಪರಿಶೀಲನೆ ಹಾಗೂ ಯೋಜನೆಯನ್ನು ಅನುಷ್ಠಾನ ಮಾಡಲೇಬೇಕೆಂಬ ಸಂಕಲ್ಪ ತೊಟ್ಟಿದ್ದರಿಂದ ಇಂದು ಜಯದೇವ ಹೃದ್ರೋಗ ಸಂಸ್ಥೆಯ ಭವ್ಯ ಕಟ್ಟಡ ತಲೆ ಎತ್ತಿ ನಿಂತಿದೆ.ಇದೇ ಭಾನುವಾರ (ಡಿಸೆಂಬರ್ 22) ಲೋಕಾರ್ಪಣೆ ಕೂಡ ಆಗುತ್ತಿದೆ ಎಂದು ತಿಳಿಸಿದ್ದಾರೆ.
ಕಲಬುರಗಿ ಜಿಲ್ಲೆಯಲ್ಲಿ ಶರಣ ಪ್ರಕಾಶ್ ಪಾಟೀಲ್ ಆರೋಗ್ಯ ಕ್ಷೇತ್ರದಲ್ಲಿ ಕ್ರಾಂತಿ ಮಾಡಿದ್ದಾರೆ ಎಂದರೆ ಅತಿಶಯೋಕ್ತಿಯಾಗಲಾರದು. ಇವರ ಆಡಳಿತಾವಧಿಯಲ್ಲಿ ಹಲವಾರು ಯೋಜನೆಗಳು ಇಲ್ಲಿ ಜಾರಿಯಾಗಿವೆ.
ಕಲಬುರಗಿಯ ಸರ್ದಾರ್ ವಲ್ಲಭಾಯ್ ಪಟೇಲ್ ರಸ್ತೆಯ ಎಸ್.ಎಂ.ಪಂಡಿತ್ ರಂಗಮಂದಿರದ ಎದುರು ಬೃಹತ್ ಪ್ರದೇಶದಲ್ಲಿ ನಿರ್ಮಾಣವಾಗಿರುವ ಜಯದೇವ ಹೃದ್ರೋಗ ಸಂಸ್ಥೆಯ ಕಟ್ಟಡ ಕಲ್ಯಾಣಕ ರ್ನಾಟಕ ಭಾಗದ ಜನರಿಗೆ ಆರೋಗ್ಯ ಸೇವೆ ನೀಡಲು ಸಜ್ಜಾಗಿದೆ.
ಕಲಬುರಗಿಯ ಹೊಸ ಆಸ್ಪತ್ರೆ ಸಂಕೀರ್ಣದ ಒಟ್ಟು ಯೋಜನಾ ವೆಚ್ಚ 262.20 ಕೋಟಿ ರೂ. ಆಗಿದ್ದು, ಇದರಿಂದ ಕಲ್ಯಾಣ ಕರ್ನಾಟ ಭಾಗದ ಕಲಬುರಗಿ, ಕೊಪ್ಪಳ, ಬೀದರ್, ಯಾದಗಿರಿ, ಬಳ್ಳಾರಿ, ರಾಯಚೂರು ಜಿಲ್ಲೆಯ ನಾಗರಿಕರಿಗೆ ಸಾಕಷ್ಟು ಅನುಕೂಲವಾಗಲಿದೆ.
ಅತ್ಯಾಧುನಿಕ ಹಾಗೂ ಗುಣಮಟ್ಟದ ಸೌಲಭ್ಯಗಳನ್ನು ಒಳಗೊಂಡಿರುವ 371 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆ ಜಯದೇವ ಹೃದ್ರೋಗ ಸಂಸ್ಥೆಯ ದಕ್ಷಿಣ ಏಷ್ಯಾದ ಅತ್ಯಂತ ಬೃಹತ್ ಹೃದ್ರೋಗ ಚಿಕಿತ್ಸಾಸಂಸ್ಥೆ ಎಂಬ ಕೀರ್ತಿಗೂ ಪಾತ್ರವಾಗಿದೆ. ಜಯದೇವ ಸಂಸ್ಥೆ ಎಂದರೆ “ಚಿಕಿತ್ಸೆ ಮೊದಲು, ಹಣ ನಂತರ (ಟ್ರೀಟ್‌ಮೆಂಟ್ ಫಸ್ಟ್-ಪೇಮೆಂಟ್ ನೆಕ್ಸ್ಟ್) ಎಂಬ ಮುಖ್ಯ ಧ್ಯೇಯಹೊಂದಿದೆ.
ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಹಲವಾರು ಆರೋಗ್ಯಕರ ಯೋಜನೆಗಳು ಜಿಲ್ಲೆಗೆ ಲಭಿಸಿವೆ. ಈ ಯೋಜನೆಗಳು ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಆರೋಗ್ಯ ಮೂಲಸೌಕರ್ಯವನ್ನು ಹೆಚ್ಚಿಸುವ ಸರ್ಕಾರದ ಬದ್ಧತೆಗೆ ಸಾಕ್ಷಿಯಾಗಿವೆ. ಕಲ್ಯಾಣ ಕರ್ನಾಟಕ ಭಾಗದ ಜನರ ಮನೆಬಾಗಿಲಿಗೆ ಗುಣಮಟ್ಟದ ವೈದ್ಯಕೀಯ ಸೇವೆ ಒದಗಿಸಬೇಕೆಂಬ ಸರ್ಕಾರದ ಹಾಗೂ ಸಚಿವ ಶರಣ್ ಪ್ರಕಾಶ್ ಪಾಟೀಲ್ ಆಶಯದಂತೆ ಈಗ ಕಲಬುರಗಿಯಲ್ಲಿ ಜಯದೇವ ಹೃದ್ರೋಗ ಸಂಸ್ಥೆಯ ಬೃಹತ್ ಕಟ್ಟಡ ಲೋಕಾರ್ಪಣೆ ಸಿದ್ಧವಾಗಿದೆ. ಈ ಭಾಗದಲ್ಲಿ ಅಭಿವೃದ್ಧಿಯ”ಕಲ್ಯಾಣ”ವಾಗಲಿ ಎಂಬ ಜನರು ಕನಸು ನನಸಾಗುತ್ತಿದೆ.
ಜಯದೇವ ಕಲಬುರಗಿ ನೂತನ ಶಾಖೆಯ ವಿಶೇಷತೆಗಳು
❖ 262.20 ಕೋಟಿ ರೂ.ವೆಚ್ಚದಲ್ಲಿ ನಿರ್ಮಾಣವಾಗಿರುವ 371 ಹಾಸಿಗೆಸಾಮರ್ಥ್ಯದ ಕಟ್ಟಡ
❖ 3 ಕ್ಯಾಥ್‌ಲ್ಯಾಬ್‌ಗಳು
❖ 3 ಆಪರೇಷನ್ ಥಿಯೇಟರ್‌ಗಳು
❖ 1 ಹೈಬ್ರಿಡ್ OT
❖ 105 ICCU ಹಾಸಿಗೆಗಳು
❖ 120 ಸಾಮಾನ್ಯ ವಾರ್ಡ್ ಬೆಡ್
❖ ಅರೆ-ವಿಶೇಷ, ವಿಶೇಷ ಮತ್ತು ಡೀಲಕ್ಸ್ ವಾರ್ಡ್ ಹಾಸಿಗೆಗಳು, 12 ರಿಕವರಿ ಮತ್ತು 12 ಪೋಸ್ಟ್ ಆಪರೇಟಿವ್ ಹಾಸಿಗೆಗಳು
❖ ಕಾರ್ಡಿಯಾಲಜಿ, ಕಾರ್ಡಿಯೋಥೊರಾಸಿಕ್ ಸರ್ಜರಿ, ವ್ಯಾಸ್ಕುಲಾರ್‌ಶಸ್ತ್ರಚಿಕಿತ್ಸೆ, ಪೀಡಿಯಾಟ್ರಿಕ್ ಕಾರ್ಡಿಯಾಲಜಿ, ರೇಡಿಯಾಲಜಿ, 128 ಸ್ಲೈಸ್ CT ಸ್ಕ್ಯಾನ್, 1.5T MRI, ಅಲ್ಟ್ರಾಸೋನೋಗ್ರಫಿ, ಹೈಟೆಕ್ಪ್ಯಾಥಾಲಜಿ ಮತ್ತು ರಕ್ತ ಬ್ಯಾಂಕ್ ಸೇವೆ
ಶರಣ್ ಪ್ರಕಾಶ್ ಪಾಟೀಲ್ ಜಾರಿಗೆ ತಂದ ಯೋಜನೆಗಳು
❖ ನರ್ಸಿಂಗ್ ಕಾಲೇಜು, ಡೆಂಟಲ್ ಕಾಲೇಜುಗಳನ್ನು ನಿರ್ಮಿಸುವಮೂಲಕ ಈ ಭಾಗವನ್ನು ವೈದ್ಯಕೀಯ ಶಿಕ್ಷಣ ಮತ್ತು ಆರೋಗ್ಯ ಹಬ್ಮಾಡುವ ಉದ್ದೇಶವಿದೆ. ಸಚಿವರು ಜಾರಿಗೆ ತಂದ ಪ್ರಮುಖಯೋಜನೆಗಳ ವಿವರ ಹೀಗಿದೆ.
❖ ಕಲಬುರಗಿಯಲ್ಲಿ 110 ಹಾಸಿಗೆ ಸಾಮರ್ಥ್ಯ ಟ್ರಾಮಾ ಕೇರ್ ಸೆಂಟರ್, ಇಲ್ಲಿ 2023-24ರಲ್ಲಿ ತುರ್ತು ಘಟಕ ಚಿಕಿತ್ಸೆಗಾಗಿ ಆಸ್ಪತ್ರೆ ನಿರ್ಮಾಣ.
❖ ಕಲಬುರಗಿಯಲ್ಲಿ ಪ್ರಾದೇಶಿಕ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ
❖ ಕಲಬುರಗಿಯಲ್ಲಿ 106 ಕೋಟಿ ರೂ. ವೆಚ್ಚದಲ್ಲಿ 150 ಹಾಸಿಗೆಗಳಪ್ರಾದೇಶಿಕ ಕ್ಯಾನ್ಸರ್ ಕೇಂದ್ರ, ಕಿದ್ವಾಯಿ ಸ್ಮಾರಕ ಆಂಕೊಲಾಜಿ ಸಂಸ್ಥೆಮಾದರಿಯಲ್ಲಿ
❖ ಗುಲ್ಬರ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ 16 ಕೋಟಿರೂ.ವೆಚ್ಚದಲ್ಲಿ 30 ಹಾಸಿಗೆಗಳ ಸುಟ್ಟಗಾಯಗಳ ಘಟಕ
❖ ಗುಲ್ಬರ್ಗ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ 92 ಕೋಟಿರೂ.ವೆಚ್ಚದಲ್ಲಿ 200 ಹಾಸಿಗೆಗಳ ತಾಯಿ-ಮಗು ಆಸ್ಪತ್ರೆ
❖ 92 ರೂ ವೆಚ್ಚದಲ್ಲಿ ಗುಲ್ಬರ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ150 ಹಾಸಿಗೆಗಳ ಮಕ್ಕಳ ಆರೋಗ್ಯ ಆಸ್ಪತ್ರೆ
ಬೆಂಗಳೂರು ಜನತೆ ಗಮನಕ್ಕೆ: ಡಿ.22ರಂದು ಬೆಳಿಗ್ಗೆ 10ರಿಂದ ಈ ಪ್ರದೇಶದಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut
ಮಲೆನಾಡಲ್ಲಿ ‘ಹೊಸ ವರ್ಷ ಆಚರಣೆ’ ಆಸೆ ಇದೆಯೇ? ಇಲ್ಲಿದೆ ಸುವರ್ಣಾವಕಾಶ | Malnad Karnival New Year Celebration