ಶಿವಮೊಗ್ಗ : ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಅಧೀನದಲ್ಲಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಸ್ಪೆಷಾಲಿಟಿ ವಿಭಾಗಗಳು ಮತ್ತು ಆಸ್ಪತ್ರೆಯ ಆವರಣದಲ್ಲಿ ಸೂಪರ್ ಸ್ಪೆಷಾಲಿಟಿ ಕಟ್ಟಡದಲ್ಲಿ ಹೃದ್ರೋಗ ವಿಭಾಗವು ಮತ್ತು ನರರೋಗ ವಿಭಾಗವು ಕಾರ್ಯ ನಿರ್ವಹಿಸುತ್ತಿದ್ದು ಜನರಿಗೆ ಅತ್ಯುತ್ತಮ ಸೇವೆಯನ್ನು ನಿಡಲಾಗುತ್ತಿದ್ದು. ಪ್ರಸ್ತುತ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಹೆಚ್ಚಿನ ವಿಭಾಗಗಳ ಸೇವೆಯನ್ನು ವಿಸ್ತರಿಸುವ ದೃಷ್ಟಿಯಿಂದ ಈ ಕೆಳಕಂಡ ಸೂಪರ್ ಸ್ಪೆಷಾಲಿಟಿ ಸೇವೆಗಳು ಸಾರ್ವಜನಿಕರಿಗೆ ಇನ್ನು ಮುಂದೆ ಲಭ್ಯವಾಗುತ್ತಿವೆ
ಪ್ಲಾಸ್ಟಿಕ್ ಸರ್ಜರಿ, ಕ್ಯಾನ್ಸರ್ ಸರ್ಜರಿ, ನ್ಯೂರೋಸರ್ಜರಿ, ಮಕ್ಕಳ ಶಸ್ತ್ರಚಿಕಿತ್ಸೆ (Pediatric) ಮೂತ್ರರೋಗ ಶಸ್ತ್ರ ಚಿಕಿತ್ಸೆ,
ಕಿಡ್ನಿ ಖಾಯಿಲೆ (nephrology) ಸೇವೆಗಳು ದಿನಾಂಕ: 04/09/2025 ರಿಂದ ಕಾರ್ಯರಂಭಗೊಳ್ಳಲಿದ್ದು, ಮೂತ್ರರೋಗ ಶಸ್ತ್ರ ಚಿಕಿತ್ಸೆ, ಪ್ಲಾಸ್ಟಿಕ್ ಸರ್ಜರಿ, ಕ್ಯಾನ್ಸರ್ ಸರ್ಜರಿ, ಮೂತ್ರಪಿಂಡ ಸರ್ಜರಿ, ಮಕ್ಕಳ ಶಸ್ತ್ರಚಿಕಿತ್ಸಾ ತಜ್ಞರ ಸೇವೆಗಳು ಸೋಮವಾರ ಮತ್ತು ಗುರುವಾರ ದೊರೆಯಲಿದೆ.
ನರರೋಗ ವಿಭಾಗವು ಸೋಮವಾರ, ಬುದುವಾರ, ಶುಕ್ರವಾರದಂದು
ನರರೋಗ ಶಸ್ತ್ರಚಿಕಿತ್ಸಾ ಸೇವೆಯು ಮಂಗಳವಾರ, ಗುರುವಾರ, ಶನಿವಾರದಂದು ಹೋರರೋಗಿಗಳ ಸೇವೆ ಲಭ್ಯವಿರುತ್ತದೆ.
ಚಿಕಿತ್ಸೆಯ ನಂತರ ಶಸ್ತ್ರಚಿಕಿತ್ಸೆ ಅವಶ್ಯವಿದ್ದಲ್ಲಿ ರೋಗಿಗಳನ್ನು ದಾಖಲಿಸಿಕೊಂಡು ಬಿ.ಪಿ.ಎಲ್ ಕಾರ್ಡ್‌ದಾರರಿಗೆ ಎ.ಬಿ.ಎ.ಆರ್.ಕೆ ಅಡಿಯಲ್ಲಿ ಉಚಿತ ಸೌಲಭ್ಯ ದೊರೆಯಲಿದೆ.
ಸೂಪರ್ ಸ್ಪೆಷಾಲಿಟಿ ವಿಭಾಗದಲ್ಲಿ ವಾರ್ಡ್‌ಗಳನ್ನು ಪ್ರಾರಂಭಿಸಲಾಗಿದ್ದು ರೋಗಿಗಳು ಈ ಹೆಚ್ಚಿನ ಸೌಲಭ್ಯಗಳನ್ನು ಪಡೆದುಕೊಳ್ಳಲು ಸಂಸ್ಥೆಯ ಆಡಳಿತ ಮಂಡಳಿ ಪ್ರಕಟ ಪಡಿಸಿದೆ.
ಬೆಂಗಳೂರು, ಮೈಸೂರು, ಹುಬ್ಬಳ್ಳಿ ನಗರಗಳ ನಂತರ ಹೆಚ್ಚುವರಿ ಸೂಪರ್ ಸ್ಪೆಷಾಲಿಟಿ ಸೇವೆಯನ್ನು ಒದಗಿಸುವ ಸಂಸ್ಥೆಗಳ ಪಟ್ಟಿಗೆ ಶಿವಮೊಗ್ಗ ವೈದ್ಯಕೀಯ ಸಂಸ್ಥೆ ಸೇರ್ಪಡೆಯಾಗಿರುವುದು, ಸಂಸ್ಥೆಗೆ ಸಂತಸದ ಸುದ್ದಿಯಾಗಿದೆ ಎಂದು ಮೆಗ್ಗಾನ್ ಅಧಿಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.