ನವದೆಹಲಿ: ಕೇಂದ್ರ ಸರ್ಕಾರದಿಂದ ದೇಶದ ಜನತೆಗೆ ಮತ್ತೊಂದು ಗುಡ್ ನ್ಯೂಸ್ ನೀಡಲಾಗಿದೆ. 7 ಲಕ್ಷದ ವರೆಗೆ ಆದಾಯ ಇರೋರಿಗೆ ತೆರಿಗೆಯಿಲ್ಲ ಎಂಬುದಾಗಿ ತಿಳಿಸಿದೆ.
ಈ ಕುರಿತಂತೆ ಇಂದು ಲೋಕಸಭೆಯಲ್ಲಿ ಕೇಂದ್ರ ಬಜೆಟ್ ಮಂಡಿಸಿ ಮಾತನಾಡಿದಂತ ಕೇಂದ್ರ ಹಣ ಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು, 7 ಲಕ್ಷ ಆದಾಯ ಇರೋರಿಗೆ ತೆರಿಗೆ ಇಲ್ಲ ಎಂಬುದಾಗಿ ಹೇಳಿದರು.
ಆಶಾ, ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರಿಗೆ ಭರ್ಜರಿ ಸಿಹಿಸುದ್ದಿ: ‘ಆಯುಷ್ಮಾನ್ ಆರೋಗ್ಯ ಯೋಜನೆ’ ಜಾರಿ
ನವದೆಹಲಿ: ಲೋಕಸಭೆಯಲ್ಲಿ ಇಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೇಂದ್ರ ಬಜೆಟ್ 2024-25 ಅನ್ನು ಮಂಡಿಸುತ್ತಿದ್ದಾರೆ. ಈ ಬಜೆಟ್ ನಲ್ಲಿ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದಾರೆ. ಅದೇ ಆಯುಷ್ಮಾನ್ ಆರೋಗ್ಯ ಯೋಜನೆಯನ್ನು ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು, ಆಶಾ ಕಾರ್ಯಕರ್ತೆಯರಿಗೂ ಅನುಷ್ಠಾನಗೊಳಿಸೋದಾಗಿ ತಿಳಿಸಿದ್ದಾರೆ.
ಇಂದು ಲೋಕಸಭೆಯಲ್ಲಿ ಕೇಂದ್ರ ಬಜೆಟ್ ಮಂಡಿಸಿ ಮಾತನಾಡುತ್ತಿರುವಂತ ಅವರು, ದೇಶದ ಅಂಗನವಾಡಿ, ಆಶಾ ಕಾರ್ಯಕರ್ತೆಯರಿಗೆ ಹಾಗೂ ಅಂಗನವಾಡಿ ಸಹಾಯಕಿಯರಿಗೆ ಅನುಕೂಲ ಕಲ್ಪಿಸೋ ನಿಟ್ಟಿನಲ್ಲಿ ಆಯುಷ್ಮಾನ್ ಭಾರತ್ ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ. ಈ ಮೂಲಕ ಆಶಾ, ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಆರೋಗ್ಯ ಕಾಳಜಿಯನ್ನು ಸರ್ಕಾರ ವಹಿಸಲಿದೆ ಎಂಬುದಾಗಿ ಹೇಳಿದರು.
ಸರ್ಕಾರದ ಗಮನವು ಜಿಡಿಪಿ ಮೇಲೆ ಇದೆ ಎಂದು ಹಣಕಾಸು ಸಚಿವೆ ಸೀತಾರಾಮನ್ ಹೇಳಿದರು. ಸರ್ಕಾರವು ಆಡಳಿತ, ಅಭಿವೃದ್ಧಿ ಮತ್ತು ಕಾರ್ಯಕ್ಷಮತೆಯ ಮೇಲೆ ಸಮಾನವಾಗಿ ಗಮನಹರಿಸುತ್ತಿದೆ ಎಂಬುದಾಗಿ ನಿರ್ಮಲಾ ಸೀತಾರಾಮನ್ ತಿಳಿಸಿದರು.