ಬೆಳಗಾವಿ : ರಾಜ್ಯದ ಜನತೆಗೆ ರಾಜ್ಯ ಸರ್ಕಾರ ಇದೀಗ ಮತ್ತೊಂದು ಸಿಹಿ ಸುದ್ದಿ ಒಂದನ್ನು ನೀಡಿದ್ದು, ಗ್ಯಾರಂಟಿ ಯೋಜನೆಗಳು ಯಥಾವತ್ತಾಗಿ ಮುಂದುವರೆಯುತ್ತವೆ. ಅಭಿವೃದ್ಧಿ ಕಾರ್ಯಗಳಿಗೂ ಕೂಡ ಸರ್ಕಾರದ ಬಳಿ ಯಾವುದೇ ಹಣದ ಕೊರತೆ ಇಲ್ಲ ಅರ್ಹರಿಗೆ ಹೊಸ ಬಿಪಿಎಲ್ ಕಾರ್ಡ್ ಕೊಡುತ್ತಿದ್ದೇವೆ. 10 ಲಕ್ಷ ಅನರ್ಹರನ್ನು ಎಪಿಎಲ್ ಗೆ ಶಿಫ್ಟ್ ಮಾಡುತ್ತಿದ್ದೇವೆ ಎಂದು ಬೆಳಗಾವಿಯ ಸುವರ್ಣ ಸೌಧದಲ್ಲಿ ಆಹಾರ ಇಲಾಖೆಯ ಸಚಿವ ಕೆಎಚ್ ಮುನಿಯಪ್ಪ ಹೇಳಿಕೆ ನೀಡಿದರು.
ಬೆಳಗಾವಿಯ ಸುವರ್ಣ ಸೌಧದಲ್ಲಿ ಮಾತನಾಡಿದ ಅವರು, ಎಪಿಎಲ್ ಕಾರ್ಡಿಗೆ ಮೊದಲು 15 ಕೆಜಿ ಅಕ್ಕಿ ಕೊಡುತ್ತಿದ್ದೆವು. ಅವರು ತೆಗೆದುಕೊಳ್ಳುತ್ತಾ ಇರಲಿಲ್ಲ ಹೀಗಾಗಿ ಅದನ್ನ ನಿಲ್ಲಿಸಿದೆವು ಡಿಮ್ಯಾಂಡ್ ಬಂದರೆ ಮತ್ತೆ ಅಕ್ಕಿ ಕೊಡುತ್ತೇವೆ ಒಂದು ವರ್ಷದಿಂದ ಅಕ್ಕಿ ತೆಗೆದುಕೊಳ್ಳುವವರನ್ನು ಸಸ್ಪೆಂಡ್ ಮಾಡಿದ್ದೇವೆ ಎಂದು ಆಹಾರ ಸಚಿವ ಕೆ ಹೆಚ್ ಮುನಿಯಪ್ಪ ಹೇಳಿಕೆ ನೀಡಿದರು.








