ಬೆಂಗಳೂರು : ವಿಧಾನಸಭಾ ಚುನಾವಣೆ ಸಮೀಪದ ಬೆನ್ನಲ್ಲೇ ಮತದಾರರನ್ನು ಸೆಳೆಯಲು ಬಿಜೆಪಿ ಪ್ಲ್ಯಾನ್ ಮಾಡುತ್ತಿದ್ದು, ಹಲವಾರು ಜನಪರ ಯೋಜನೆಗಳನ್ನು ಘೋಷಣೆ ಮಾಡುತ್ತಿದೆ.
ಇದರ ನಡುವೆ ರಾಜ್ಯ ಸರ್ಕಾರ ಗ್ರಾಹಕರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದ್ದು, ಬೆಸ್ಕಾಂ, ಮೆಸ್ಕಾಂ ವ್ಯಾಪ್ತಿಯಲ್ಲಿ ವಿದ್ಯುತ್ ದರ ಇಳಿಕೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಈ ಕುರಿತು ಟ್ವೀಟ್ ಮಾಡಿರುವ ಇಂಧನ ಸಚಿವ ಸುನಿಲ್ ಕುಮಾರ್ ಬೆಸ್ಕಾಂ ಹಾಗೂ ಮೆಸ್ಕಾಂ ವ್ಯಾಪ್ತಿಯಲ್ಲಿ ವಿದ್ಯುತ್ ಹೊಂದಾಣಿಕೆ ವೆಚ್ಚ ಕಡಿತ ಮಾಡುವ ನಿರ್ಧಾರ ತೆಗದುಕೊಳ್ಳಲಾಗಿದೆ.
ಬೆಸ್ಕಾಂ ವ್ಯಾಪ್ತಿಯಲ್ಲಿ ಪ್ರತಿ ಯೂನಿಟ್ ಗೆ 37 ಪೈಸೆ ಹಾಗೂ ಮೆಸ್ಕಾಂ ವ್ಯಾಪ್ತಿಯಲ್ಲಿ ಪ್ರತಿ ಯೂನಿಟ್ ಗೆ 39 ಪೈಸೆ ಕಡಿತ ಮಾಡಲಾಗಿದ್ದು, ಇದರ ಪ್ರಯೋಜನ ನೇರವಾಗಿ ಗ್ರಾಹಕರಿಗೆ ಲಭಿಸಲಿದೆ ಎಂದು ಟ್ವೀಟ್ ಮಾಡಿದ್ದಾರೆ. ವಿದ್ಯುತ್ ದರ ಏರಿಕೆ ಮಾಡಿದ ಹಿನ್ನೆಲೆ ಸರ್ಕಾರದ ವಿರುದ್ಧ ಜನರು ಆಕ್ರೋಶ ಹೊರಹಾಕಿದ್ದರು. ಇದೀಗ ಸರ್ಕಾರ ಜನರಿಗೆ ನೆಮ್ಮದಿ ಸುದ್ದಿ ನೀಡಿದೆ.
ಬೆಸ್ಕಾಂ ಹಾಗೂ ಮೆಸ್ಕಾಂ ವ್ಯಾಪ್ತಿಯಲ್ಲಿ ವಿದ್ಯುತ್ ಹೊಂದಾಣಿಕೆ ವೆಚ್ಚ ಕಡಿತ ಮಾಡುವ ನಿರ್ಧಾರ ತೆಗದುಕೊಳ್ಳಲಾಗಿದೆ.
ಬೆಸ್ಕಾಂ ವ್ಯಾಪ್ತಿಯಲ್ಲಿ ಪ್ರತಿ ಯೂನಿಟ್ ಗೆ 37 ಪೈಸೆ ಹಾಗೂ ಮೆಸ್ಕಾಂ ವ್ಯಾಪ್ತಿಯಲ್ಲಿ ಪ್ರತಿ ಯೂನಿಟ್ ಗೆ 39 ಪೈಸೆ ಕಡಿತ ಮಾಡಲಾಗಿದ್ದು, ಇದರ ಪ್ರಯೋಜನ ನೇರವಾಗಿ ಗ್ರಾಹಕರಿಗೆ ಲಭಿಸಲಿದೆ.@CMofKarnataka— Sunil Kumar Karkala (@karkalasunil) December 29, 2022
BIG NEWS : ಮೆಡಿಸಿನ್ ಕಂಪನಿಗಳ ಜೊತೆ ಸಭೆ ನಡೆಸಿದ ಮನ್ಸುಖ್ ಮಾಂಡವಿಯಾ : ಔಷಧಿ ದಾಸ್ತಾನು ಲಭ್ಯವಿರುವಂತೆ ಸೂಚನೆ
BIGG NEWS : 2023-24ನೇ ಸಾಲಿಗೆ ವಸತಿ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ