ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದಮೇಲೆ ಗೃಹ ಲಕ್ಷ್ಮಿ ಗೃಹಜ್ಯೋತಿಯಂತಹ ಜನೋಪಯೋಗಿ ಗ್ಯಾರಂಟಿಗಳನ್ನು ನೀಡಿದ್ದಲ್ಲದೆ ಈಗ ಇನ್ನೊಂದು ಹೆಜ್ಜೆ ಮುಂದೆ ಹೋಗಿ ಮತ್ತೊಂದು ಗ್ಯಾರಂಟಿ ಮಾದರಿಯ ಯೋಜನೆ ಜಾರಿ ಮಾಡಲು ಮುಂದಾಗಿದೆ. ಜನರಿಗೆ ಆರೋಗ್ಯ ಭಾಗ್ಯ ನೀಡಲು ಆರೋಗ್ಯ ಇಲಾಖೆ ಮುಂದಾಗಿದೆ.
ಹೌದು ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ‘ಗೃಹ ಆರೋಗ್ಯ’ ಯೋಜನೆ ಜಾರಿ ಮಾಡಲು ಆರೋಗ್ಯ ಇಲಾಖೆ ಮುಂದಾಗಿದೆ. ಈ ಸಂಬಂಧ ಸರ್ಕಾರಕ್ಕೆ ಪ್ರಸ್ತಾವನೆ ಕೂಡ ಸಲ್ಲಿಕೆ ಮಾಡಲಾಗಿದ್ದು, ಸಚಿವ ಸಂಪುಟದಲ್ಲಿ ಈಗಾಗಲೇ ಅನುಮೋದನೆ ದೊರೆತಿದೆ. ಮುಂದಿನ ತಿಂಗಳಿನಿಂದ ‘ಗೃಹ ಆರೋಗ್ಯ’ ಯೋಜನೆ ಜಾರಿಯಾಗಲಿದೆ ಎಂದು ತಿಳಿದುಬಂದಿದೆ.
ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಗೃಹ ಆರೋಗ್ಯ ಯೋಜನೆ ಜಾರಿ ತರಲು ಆರೋಗ್ಯ ಇಲಾಖೆ ಚಿಂತನೆ ನಡೆಸಿದೆ. ಮುಂದಿನ ತಿಂಗಳು ಗೃಹ ಆರೋಗ್ಯ ಯೋಜನೆ ಜಾರಿಯಾಗಲಿದೆ ಎಂದು ಆರೋಗ್ಯ ಇಲಾಖೆ ಸಚಿವ ದಿನೇಶ್ ಗೂಂಡುರಾವ್ ತಿಳಿಸಿದ್ದಾರೆ. ಮುಂದಿನ ತಿಂಗಳು ರಾಜಧಾನಿ ಬೆಂಗಳೂರು ಸೇರಿದ್ದಂತೆ ರಾಜ್ಯದಲ್ಲಿ ‘ಗೃಹ ಆರೋಗ್ಯ’ ಯೋಜನೆ ಜಾರಿಗೆ ಆರೋಗ್ಯ ಇಲಾಖೆ ಮುಂದಾಗಿದೆ.
ಹೃದಯ, ಕಿಡ್ನಿ, ಕ್ಯಾನ್ಸರ್, ಬಿಪಿ, ಮಧುಮೇಹ, ಇಸಿಜಿ ಸೇರಿದಂತೆ ಎಲ್ಲಾ ರೀತಿಯ ಆರೋಗ್ಯ ತಪಾಸಣೆ ನಡೆಸಿ ಆಯ್ದ ಸಮಸ್ಯೆಗಳಿಗೆ ಅಗತ್ಯವಿರುವಷ್ಟು ಔಷಧಗಳನ್ನು ಸ್ಥಳದಲ್ಲೇ ಉಚಿತವಾಗಿ ನೀಡಲು ಇಲಾಖೆ ಮುಂದಾಗಿದೆ. ಮುಂದಿನ ತಿಂಗಳಿನಿಂದ ರಾಜ್ಯದ ಜನರಿಗೆ ಮನೆ ಮನೆಗೆ ಕ್ಲಿನಿಕ್ ಸೇವೆ ನೀಡಲು ಇಲಾಖೆ ಯೋಜನೆ ಹಾಕಿಕೊಂಡಿದೆ. ಚಿಕಿತ್ಸೆ ಜೊತೆ ಉಚಿತ ಔಷಧಿಯೂ ಮನೆ ಬಾಗಿಲಿಗೆ ಬರಲಿದೆ.