ಬೆಂಗಳೂರು : ರಾಜ್ಯದ ಜನತೆಗೆ ಸರ್ಕಾರವು ಮತ್ತೊಂದು ಸಿಹಿಸುದ್ದಿ ನೀಡಿದ್ದು, ಇನ್ಮುಂದೆ ಸರ್ಕಾರಿ ಆಸ್ಪತ್ರೆಗಳಲ್ಲಿ ಎಲ್ಲ ಬಗೆಯ ಔಷಧ ಪೂರೈಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಬೆಂಗಳೂರಿನ ಕೆ.ಸಿ. ಜನರಲ್ ಆಸ್ಪತ್ರೆಯ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಸೇರಿ 150 ಕೋಟಿ ರೂ. ವೆಚ್ಚದ ವಿವಿಧ ಕಾಮಗಾರಿಗಳಿಗೆ ಭೂಮಿಪೂಜೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹೊರಗಡೆಯಿಂದ ಔಷಧಿ ಬರೆದುಕೊಡುವ ಪರಿಪಾಠ ತಪ್ಪಿಸಿ, ಸರ್ಕರಿ ಆಸ್ಪತ್ರೆಗಳಲ್ಲೆ ಎಲ್ಲ ಬಗೆಯ ಔಷಧವನ್ನು ಪೂರೈಸಲು ಕ್ರಮ ವಹಿಸುತ್ತೇವೆ ಎಂದು ತಿಳಿಸಿದ್ದಾರೆ.
ರಾಜ್ಯದ ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಸೆಪ್ಟೆಂಬರ್ ನಿಂದ ಕ್ಯಾನ್ಸರ್ ಗೆ ನೀಡುವ ಕಿಮೋತಥೆರಪಿ ಡೇ ಕೇರ್ ಸೆಂಟರ್ ಆರಂಭಿಸಲಾಗುವುದು. ಕಿಮೋಥೆರಪಿಗೆ ಸಂಬಂಧಿಸಿದಂತೆ ದೊಡ್ಡ ಆಸ್ಪತ್ರೆಗೆ ತೆರಳವುದನ್ನು ತಪ್ಪಿಸಲು ಮುಂದಿನ ತಿಂಗಳಿನಿಂದ ಜಿಲ್ಲಾ ಆಸ್ಪತ್ರೆಗಳಲ್ಲಿಯೇ ಕಿಮೋಥೆರಪಿ ಡೇ ಕೇರ್ ಸೆಂಟರ್ ಪ್ರಾರಂಭಿಸಲಾಗುವುದು ಎಂದು ತಿಳಿಸಿದ್ದಾರೆ.
ಇನ್ನು ಅಪಘಾತಕ್ಕೆ ಒಳಗಾಗುವವರಿಗೆ ತುರ್ತು ಆರೋಗ್ಯ ಸೇವೆ ಒದಗಿಸಲು ಪ್ರತ್ಯೇಕ ಆಂಬುಲೆನ್ಸ್ ಸೇವೆಯನ್ನು ಶೀಘ್ರದಲ್ಲೆ ಪ್ರಾರಂಭಿಸಲಾಗುವುದು. ಈ ಸಂಬಂದ 60-70 ಹಾಟ್ ಸ್ಪಾಟ್ ಗುರುತಿಸಲಾಗಿದೆ ಎಂದು ಹೇಳಿದ್ದಾರೆ.