ಬೆಂಗಳೂರು: ರಾಜ್ಯದಲ್ಲಿನ ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ 1200 ಚದುರ ಅಡಿ ವಿಸ್ತರೀಣದವರೆಗಿನ ನಿವೇಶನಗಳಲ್ಲಿ ನಿರ್ಮಿಸಿರುವ ನೆಲ+ 2 ಅಂತಸ್ತು ಅಥವಾ Stilt + 3 ಅಂತಸ್ತಿನವರೆಗಿನ ವಾಸದ ಕಟ್ಟಡಗಳಿಗೆ ಸ್ವಾಧೀನಾನುಭವ ಪ್ರಮಾಣಪತ್ರ ( Occupancy Certificate-OC) ಪಡೆಯುವುದರಿಂದ ವಿನಾಯ್ತಿ ನೀಡಿ ಅಧಿಕೃತ ಆದೇಶ ಹೊರಡಿಸಿದೆ.
ಈ ಕುರಿತಂತೆ ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ಮಾನ್ಯ ಮುಖ್ಯ ಮಂತ್ರಿಯವರು ಅಧ್ಯಕ್ಷತೆ ಹಾಗೂ ಮಾನ್ಯ ಉಪ ಮುಖ್ಯಮಂತ್ರಿಯವರು ಮತ್ತು ಸಂಬಂಧಿಸಿದ ಇತರ ಮಾನ್ಯ ಸಚಿವರುಗಳ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ, ರಾಜ್ಯಾದ್ಯಂತ ಸ್ಥಳೀಯ ಸಂಸ್ಥೆಗಳ ಕಾರ್ಯನಿರ್ವಹಣೆಗೆ ಸಂಬಂಧಿಸಿದಂತೆ, ಅನ್ವಯವಾಗುವ ಎಲ್ಲಾ ಕಾಯ್ದೆಗಳಲ್ಲಿಯೂ ಕೆಲವೊಂದು ವರ್ಗದ ನಿವೇಶನಗಳಲ್ಲಿ ನಿರ್ಮಿಸಿರುವ ಕಟ್ಟಡಗಳಿಗೆ ಸ್ವಾಧೀನಾನುಭವ ಪಮಾಣ ಪತ್ರ ಪಡೆಯುವ ವಿಷಯಕ್ಕೆ ಸಂಬಂಧಿಸಿದಂತೆ, ಸಮಾನ ಅವಕಾಶಗಳಿರುವುದು ಸೂಕ್ತವೆಂದು ಅಭಿಪ್ರಾಯಿಸಿ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ, ನಗರಾಭಿವೃದ್ಧಿ ಇಲಾಖೆಯವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ, ಸೂಕ್ತ ತೀರ್ಮಾನ ಕೈಗೊಳ್ಳುವಂತೆ ಸೂಚಿಸಲಾಗಿತ್ತು ಎಂದಿದ್ದಾರೆ.
ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ, ನಗರಾಭಿವೃದ್ಧಿ ಇಲಾಖೆ ಇವರ ಅಧ್ಯಕ್ಷತೆಯಲ್ಲಿ ದಿನಾಂಕ: 11-07-2025 ರಂದು ನಗರಾಭಿವೃದ್ಧಿ ಇಲಾಖೆ ಮತ್ತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗಳಿಗೆ ಸಂಬಂಧಿಸಿದ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಗ್ರೇಟರ್ ಬೆಂಗಳೂರು ಆಡಳಿತ ಅಧಿನಿಯಮ, 2024ರ ಕಲಂ 241(7), ಕರ್ನಾಟಕ ಮಹಾನಗರ ಪಾಲಿಕೆಗಳ ಕಾಯ್ದೆ 1976 ಹಾಗೂ ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಉಪಬಂಧಗಳನ್ವಯ ಕೆಲವು ಕಟ್ಟಡಗಳಿಗೆ ಸ್ವಾಧೀನ ಪ್ರಮಾಣಪತ್ರ (Occupancy Certificate) ಹಾಗೂ ಆರಂಭಿಕ ಪ್ರಮಾಣ ಪತ್ರ (Commencement Certificate) ಗಳಿಂದ ವಿನಾಯಿತಿ ನೀಡುವ ಕುರಿತು ಚರ್ಚಿಸಿ, ನಗರಾಭಿವೃದ್ಧಿ ಇಲಾಖೆ ಇವರು ಕರ್ನಾಟಕ ಮಹಾನಗರ ಪಾಲಿಕೆಗಳ ಕಾಯ್ದೆ 1976 ಹಾಗೂ ಕರ್ನಾಟಕ ಪೌರಸಭೆಗಳ ಕಾಯ್ದೆ 1964 we GBA boat 20240 ಸೆಕ್ಷನ್ 241(7)ಗೆ ಸಮಾನಾಂತರ ಅವಕಾಶಗಳನ್ನು ಕಲ್ಪಿಸಿಕೊಳ್ಳಲು ಕಾಯಗಳಲ್ಲಿ ಅಗತ್ಯವಿರುವ ತಿದ್ದುಪಡಿಗಳನ್ನು ತರಲು ಕ್ರಮ ಕೈಗೊಳ್ಳಲು ನಿರ್ದೇಶಿಸಲಾಗಿರುತ್ತದೆ ಎಂದಿದ್ದಾರೆ.
ದಿನಾಂಕ:11-07- 05ರಂದು ನಡೆದ ಸಭೆಯ ನಿರ್ದೇಶನದನ್ವಯ ಕ್ರಮಜರುಗಿಸಲಾಗಿದ್ದು, ಕರ್ನಾಟಕ ಮಹಾನಗರ ಪಾಲಿಕೆಗಳ ಕಾಯ್ದೆ 1976ಕ್ಕೆ ತಿದ್ದುಪಡಿ ತರಲಾಗಿ, ಕಲಂ 310 ಉಪ ಪುಕರಣ ತನ್ನು ಈ ಕೆಳಕಂಡಂತೆ ಸೇರ್ಪಡಿಸಲಾಗಿರುತ್ತದೆ ಎಂದಿದ್ದಾರೆ.
3) ಅಧಿಭೋಗ ಪ್ರಮಾಣ ಪತ್ರವನ್ನು ಪಡೆಯುವುದರಿಂದ ವಿನಾಯಿತಿಸಲಾಗುವ ಕಟ್ಟಡಗಳ ಪುವರ್ಗವನ್ನು ಸರ್ಕಾರವು ಅಧಿಸೂಚಿಸಬಹುದು”.
ಅದರಂತೆ ಮೇಲೆ ಓದಲಾದ ಕ್ರಮ ಸಂಖ್ಯೆ (4)ರ ಏಕ ಕಡತ ಸಂಖ್ಯೆ: DMA/DEV/OTH/142/2025ರಲ್ಲಿ ನಿರ್ದೇಶಕರು, ಪೌರಾಡಳಿತ ನಿರ್ದೇಶನಾಲಯ ಇವರು ಮೇಲ್ಕಂಡ ಕಾಯ್ದೆಯ ಅವಕಾಶ ಹಾಗೂ ದಿನಾಂಕ:11-07-2025ರ ಸಭಾ ನಡವಳಿಯಂತೆ ಸ್ವಾಧೀನಾನುಭವ ಪುಮಾಣ ಪತ್ರ ನೀಡುವ ಪ್ರಕ್ರಿಯೆಯು ಸ್ಥಳ ಪರಿಶೀಲನೆ, ನಿರ್ಮಾಣ ಮಾಡಿರುವ ಕಟ್ಟಡ ಹಾಗೂ ಅನುಮೋದಿತ ಕಟ್ಟಡ ನಕ್ಷೆಯ ತುಲನಾತ್ಮಕ ಪರಿಶೀಲನೆ ಮುಂತಾದವುಗಳನ್ನು ಒಳಗೊಂಡಿರುವುದರಿಂದ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳಿಗೆ ಹೆಚ್ಚಿನ ಕೆಲಸದ ಹೊರ ಉಂಟಾಗುತ್ತಿದ್ದು, ಇದರಿಂದಾಗಿ ಸಾರ್ವಜನಿಕರಿಗೆ ಸೇವೆ ನೀಡುವಲ್ಲಿ ವಿಳಂಬವಾಗುವ ಸಾಧ್ಯತೆಗಳಿದ್ದು, ಸಾರ್ವಜನಿಕ ಅನುಕೂಲವನ್ನು ಗಮನದಲ್ಲಿರಿಸಿಕೊಂಡು, ಸಣ್ಣ ಪ್ರಮಾಣದ ಕಟ್ಟಡಗಳಿಗೆ ಸ್ವಾಧೀನಾನುಭವ ಪುಮಾಣ ಪತ್ರವನ್ನು ಕಡ್ಡಾಯವಾಗಿ ಪಡೆಯುವುದರಿಂದ ವಿನಾಯಿತಿ ನೀಡಲು ಪರಿಗಣಿಸುವುದು ಸೂಕ್ತವಾಗಿರುತ್ತದೆ ಎಂದು ಅಭಿಪ್ರಾಯಿಸಿರುತ್ತಾರೆ ಹಾಗೂ ಮಹಾನಗರಪಾಲಿಕೆಗಳು ಹಾಗೂ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸರ್ಕಾರಕ್ಕಿರುವ ಅಧಿಕಾರದಂತೆ 1200 ಚ.ಅಡಿ ವಿಸ್ತೀರ್ಣದವರೆಗಿನ ನಿವೇಶನಗಳಲ್ಲಿ ನಕ್ಷೆ ಮಂಜೂರಾತಿ ಪಡೆದು ನಿರ್ಮಿಸುವ ನೆಲ+ 2 ಅಂತಸ್ತು ಅಥವಾ Stilt + 3 ಅಂತಸ್ತಿನವರೆಗಿನ ವಾಸದ ಕಟ್ಟಡಗಳಿಗೆ ಸ್ವಾಧೀನಾನುಭವ ಪ್ರಮಾಣ ಪತ್ರ (Occupancy certificate) ಪಡೆಯುವುದರಿಂದ ವಿನಾಯಿತಿ ನೀಡಲು ಅಧಿಸೂಚನೆ ಹೊರಡಿಸಲು ಸರ್ಕಾರಕ್ಕೆ ಪುಸ್ತಾವನೆ ಸಲ್ಲಿಸಿರುತ್ತಾರೆ.
ರಾಜ್ಯದಲ್ಲಿನ ಮಹಾನಗರ ಪಾಲಿಕೆಗಳ ವ್ಯಾಪ್ತಿಯ ಸಣ್ಣ ಪ್ರಮಾಣದ ಕಟ್ಟಡಗಳಿಗೆ ಸ್ವಾಧೀನಾನುಭವ ಪ್ರಮಾಣ ಪತ್ರ ಪಡೆಯಲು ಸಾರ್ವಜನಿಕರಿಗೆ ವಿನಾಯಿತಿ ನೀಡುವುದರಿಂದ, ಸಾರ್ವಜನಿಕರಿಗೆ ಸಕಾಲದಲ್ಲಿ ಸೇವೆ ಒದಗಿಸಲು ಸಹಕಾರಿಯಾದಂತಾಗುತ್ತದೆ ಎಂಬುದನ್ನು ಮನಗಂಡು ಸಚಿವ ಸಂಪುಟವು ಪುಕರಣ ಸಂಖ್ಯೆ: ಸಿ:865/2025, ದಿನಾಂಕ:16.10.2025 ರಲ್ಲಿ ಕರ್ನಾಟಕ ನಗರ ಪಾಲಿಕೆಗಳ ಅಧಿನಿಯಮ 1976ರ ಕಲಂ 3103) ರಡಿಯಲ್ಲಿ ಸರ್ಕಾರಕ್ಕೆ ಪ್ರದತ್ತವಾಗಿರುವ ಅಧಿಕಾರದನ್ವಯ, ರಾಜ್ಯದಲ್ಲಿನ ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ 1200 ಚ.ಅಡಿ ವಿಸ್ತೀರ್ಣದವರೆಗಿನ ನಿವೇಶನಗಳಲ್ಲಿ, ನಿರ್ಮಿಸಿರುವ ನೆಲ + 2 ಅಂತಸ್ತು ಅಥವಾ Stilt + 3 ಅಂತಸ್ತಿನವರಗಿನ ವಾಸದ ಕಟ್ಟಡಗಳಿಗೆ ಸ್ವಾಧೀನಾನುಭವ ಪ್ರಮಾಣ ಪತ್ರ (Occupancy certificate) ಪಡೆಯುವುದರಿಂದ ವಿನಾಯಿತಿ ನೀಡಲು ಸಚಿವ ಸಂಪುಟವು ತೀರ್ಮಾನಿಸಿದೆ ಎಂದಿದೆ.
ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ಕರ್ನಾಟಕ ನಗರ ಪಾಲಿಕೆಗಳ ಅಧಿನಿಯಮ 1976ರ ಕಲಂ 310(3) ರಡಿಯಲ್ಲಿ ಸರ್ಕಾರಕ್ಕೆ ಪದತ್ತವಾಗಿರುವ ಅಧಿಕಾರದನ್ವಯ, ರಾಜ್ಯದಲ್ಲಿನ ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ 1200 ಚ.ಅಡಿ ವಿಸ್ತೀರ್ಣದವರೆಗಿನ ನಿವೇಶನಗಳಲ್ಲಿ, ನಿರ್ಮಿಸಿರುವ ನೆಲ + 2 ಅಂತಸ್ತು ಅಥವಾ Stilt + 3 ಅಂತಸ್ತಿನವರೆಗಿನ ವಾಸದ ಕಟ್ಟಡಗಳಿಗೆ ಸ್ವಾಧೀನಾನುಭವ ಪ್ರಮಾಣ ಪತ್ರ (occupancy certificate) ಪಡೆಯುವುದರಿಂದ ವಿನಾಯಿತಿ ನೀಡಿ ಆದೇಶಿಸಿದ್ದಾರೆ.
ಈ ಆದೇಶವನ್ನು ಸಂಪುಟವು ಪಕರಣ ಸಂಖ್ಯೆ: ದಿನಾಂಕ:16.10.2025 ರಲ್ಲಿ ನೀಡಿರುವ ಅನುಮೋದನೆಯನ್ವಯ ಹೊರಡಿಸಲಾಗಿದೆ ಎಂದು ತಿಳಿಸಿದ್ದಾರೆ.









