Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾಗರದಲ್ಲಿ ‘ಸತ್ತವರ ಹೆಸರ’ಲ್ಲಿ ಆಸ್ತಿ ಮಾರಾಟ, ಬೃಹತ್ ಭೂ ಹಗರಣ: ‘ಲೋಕಾಯುಕ್ತ’ದಿಂದ ತನಿಖೆಗೆ ಆದೇಶ

ದಂಪತಿಗಳ ಲೈಂಗಿಕ ಜೀವನ ಸುಧಾರಿಸಲು ಈ ಒಂದು ಸರಳ ಅಭ್ಯಾಸ ಸಾಕು: ಸಂಶೋಧನೆಯಿಂದ ದೃಢ!

ದಂಪತಿಗಳ ನಡುವಿನ ಅನ್ಯೋನ್ಯತೆ ಹೆಚ್ಚಿಸಲು ಹೊಸ ಪ್ರಯೋಗ: ವೈವಾಹಿಕ ಜೀವನಕ್ಕೆ ಮರುಜೀವ ನೀಡಿದ ‘ನಗ್ನ ಛಾಯಾಚಿತ್ರ’

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » GOOD NEWS: ರಾಜ್ಯದ ಜನತೆಗೆ ಗುಡ್ ನ್ಯೂಸ್: ಯಶಸ್ವಿನಿ ಯೋಜನೆ ಚಿಕಿತ್ಸೆ ದರ ಪರಿಷ್ಕರಿಸಿ ಸರ್ಕಾರ ಆದೇಶ
KARNATAKA

GOOD NEWS: ರಾಜ್ಯದ ಜನತೆಗೆ ಗುಡ್ ನ್ಯೂಸ್: ಯಶಸ್ವಿನಿ ಯೋಜನೆ ಚಿಕಿತ್ಸೆ ದರ ಪರಿಷ್ಕರಿಸಿ ಸರ್ಕಾರ ಆದೇಶ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ರಾಜ್ಯ ಸರ್ಕಾರದಿಂದ ರಾಜ್ಯದ ಜನತೆಗೆ ಮತ್ತೊಂದು ಗುಡ್ ನ್ಯೂಸ್ ನೀಡಲಾಗಿದೆ. ಯಶಸ್ವಿನಿ ಯೋಜನೆಯಡಿ ಶಸ್ತ್ರ ಚಿಕಿತ್ಸೆ ದರಗಳನ್ನು ಪರಿಷ್ಕರಿಸಿ ಆದೇಶಿಸಿದೆ.

ಈ ಕುರಿತಂತೆ ಸಿಎಂ ಕಚೇರಿಯಿಂದ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯಡಿ ಸದಸ್ಯರಿಗೆ ನೀಡುತ್ತಿರುವ ಶಸ್ತ್ರ ಚಿಕಿತ್ಸೆಗಳ ದರ ಪರಿಷ್ಕರಣೆ ಕುರಿತು ಶಾಸಕರಾದ ಡಾ ಶ್ರೀನಿವಾಸ ಎನ್ ಟಿ ಅವರ ಅಧ್ಯಕ್ಷತೆಯಲ್ಲಿ ರಚಿಸಿರುವ ದರ ಪರಿಷ್ಕರಣೆ ಸಮಿತಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತನ್ನ‌ ಶಿಫಾರಸ್ಸುಗಳನ್ನು ಸಲ್ಲಿಸಿತು ಎಂದಿದೆ.

ಪರಿಷ್ಕೃತ ಯಶಸ್ವಿನಿ ಯೋಜನೆಯನ್ನು ರಾಜ್ಯ ಸರ್ಕಾರವು 2022-23 ರಿಂದ ಮರುಜಾರಿಗೊಳಿಸಿದೆ. ಪ್ರಸ್ತುತ ಯಶಸ್ಸಿನಿ ಯೋಜನೆಯಲ್ಲಿನ ಚಿಕಿತ್ಸಾ ದರಗಳು 2017-18 ಅವಧಿಯಲ್ಲಿ ನಿಗದಿ ಮಾಡಿದ ದರಗಳಾಗಿದ್ದು, ಪ್ರಸ್ತುತ ಮಾರುಕಟ್ಟೆ ದರಗಳಿಗೆ ಹೋಲಿಸಿದಲ್ಲಿ ಅತ್ಯಂತ ಕಡಿಮೆ ಇರುವುದಾಗಿ ತಿಳಿಸಿ ಪ್ರಮುಖ ಆಸ್ಪತ್ರೆಗಳು ಯೋಜನೆಯಡಿ ನೆಟ್ ವರ್ಕ್ ಆಸ್ಪತ್ರೆಗಳಾಗಿ ಸೇರಿಕೊಳ್ಳಲು ಮುಂದೆ ಬರುತ್ತಿಲ್ಲ ಎಂದಿದೆ.

ಈ ಕಾರಣಕ್ಕಾಗಿ ಚಿಕಿತ್ಸೆಗಳ ದರಗಳನ್ನು ಪರಿಷ್ಕರಿಸಲು ಸರ್ಕಾರವು ಶಾಸಕರಾದ ಡಾ|| ಶ್ರೀನಿವಾಸ್ ಎನ್. ಟಿ ಇವರ ಅಧ್ಯಕ್ಷತೆಯಲ್ಲಿ ತಜ್ಞ ವೈದ್ಯರನ್ನೊಳಗೊಂಡ ದರ ಪರಿಷ್ಕರಣಾ ಸಮಿತಿಯನ್ನು ರಚಿಸಿದೆ.

ಸಮಿತಿಯು ಪ್ರಸ್ತುತ ಚಿಕಿತ್ಸಾ ದರಗಳನ್ನು ಪರಿಶೀಲಿಸಿ ಈಗಿನ ಪರಿಸ್ಥಿತಿಗೆ ಅನುಗುಣವಾಗಿ ಸಹಕಾರ ಸಂಸ್ಥೆಗಳ ಸದಸ್ಯರಿಗೆ ಅನುಕೂಲವಾಗುವಂತೆ ಅಗತ್ಯವಿದ್ದಲ್ಲಿ ಹೊಸ ಚಿಕಿತ್ಸೆಗಳನ್ನು ಸೇರಿಸುವುದಲ್ಲದೇ ಈಗಿನ ಸ್ಥಿತಿ-ಗತಿಗಳಿಗೆ ಅನುಗುಣವಾಗಿ ಚಿಕಿತ್ಸಾ ದರಗಳನ್ನು ಪರಿಷ್ಕರಿಸಲು ಸರ್ಕಾರದ ಆದೇಶದಲ್ಲಿ ತಿಳಿಸಲಾಗಿರುತ್ತದೆ.

ಸಮಿತಿಯಲ್ಲಿ ಹೆಸರಾಂತ ಪ್ರತಿಷ್ಠಿತ ಆಸ್ಪತ್ರೆಗಳ 8 ತಜ್ಞ ವೈದ್ಯರಲ್ಲದೇ ವಿವಿಧ ವೈದ್ಯಕೀಯ ವಿಭಾಗಗಳ 11 ವಿಶೇಷ ಆಹ್ವಾನಿತ ತಜ್ಞ ವೈದ್ಯರನ್ನು ಆಹ್ವಾನಿಸಿ 13 ಸಭೆಗಳನ್ನು ನಡೆಸಿ ಅವರುಗಳ ಸಲಹೆ ಸೂಚನೆಗಳನ್ನು ಪಡೆದು ದರ ಪರಿಷ್ಕರಣೆ ಮಾಡಲಾಗಿದೆ.

ಈಗಿನ ಯಶಸ್ವಿನಿ ಯೋಜನೆಯಲ್ಲಿ 2128 ಚಿಕಿತ್ಸೆಗಳನ್ನು ಅಳವಡಿಸಿಕೊಂಡಿದ್ದು ಪ್ರಸ್ತುತ ಇರುವ ಚಿಕಿತ್ಸೆಗಳ ಪೈಕಿ 6 ಚಿಕಿತ್ಸೆಗಳನ್ನು ತಜ್ಞರ ಸಲಹೆಯಂತೆ ಕೈಬಿಡಲಾಗಿದೆ.

ಅದೇ ರೀತಿ ಇತ್ತೀಚಿಗೆ ವೈದ್ಯಕೀಯ ಕ್ಷೇತ್ರದಲ್ಲಿ ಹೊಸದಾಗಿ ಪ್ರವರ್ಧಮಾನಕ್ಕೆ ಬಂದಿರುವ ಚಿಕಿತ್ಸೆಗಳ ಪೈಕಿ ಸಹಕಾರಿಗಳಿಗೆ / ರೈತಾಪಿ ವರ್ಗಕ್ಕೆ Interventional Radiology, CTVS, ಕ್ಯಾನ್ಸರ್ ಕಾಯಿಲೆಗಳು ಮುಂತಾದ ವಿಭಾಗಗಳ ಒಟ್ಟು 69 ಹೊಸ ಚಿಕಿತ್ಸೆಗಳನ್ನು ತಜ್ಞರ ಸಲಹೆಯಂತೆ ಸೇರಿಸಲಾಗಿದೆ.

ಇದರಿಂದಾಗಿ ಒಟ್ಟು 2191 ಚಿಕಿತ್ಸೆಗಳನ್ನು ಅಂತಿಮಗೊಳಿಸಿದಂತಾಗಿದೆ.

ಯಶಸ್ವಿನಿ ಯೋಜನೆಯಡಿ 2024-25ರಲ್ಲಿ 68,159 ಫಲಾನುಭವಿಗಳು ರೂ.117.79 ಕೋಟಿ ಮೊತ್ತದ ಚಿಕಿತ್ಸೆಯನ್ನು ಪಡೆದಿದ್ದು ಸರಾಸರಿ ಒಂದು ಚಿಕಿತ್ಸಾ ವೆಚ್ಚ ರೂ.17,000 ಆಗಿದೆ. ಮುಂದಿನ ಸಾಲಿನಲ್ಲಿ ಸುಮಾರು 75,000 ಫಲಾನುಭವಿಗಳು ಚಿಕಿತ್ಸೆ ಪಡೆಯುವ ಅಂದಾಜಿದ್ದು ಅದರಂತೆ ಸುಮಾರು ರೂ.127.50 ಕೋಟಿ ವೆಚ್ಚ ಆಗಲಿದೆ.

ಆರೋಗ್ಯ ಸೇವೆಯಲ್ಲಿ ಹೊಸ ಹೊಸ ತಂತ್ರಜ್ಞಾನವನ್ನು ಅಳವಡಿಸಿಕೊಂಡು ಉನ್ನತ ಮಟ್ಟದ ಚಿಕಿತ್ಸೆಗಳನ್ನು ಹೊಸದಾಗಿ ಸೇರಿಸುವುದರಿಂದ ಸರಾಸರಿ ಚಿಕಿತ್ಸಾ ದರದಲ್ಲಿ 50% ರಿಂದ 55% ರ ವರವಿಗೆ ದರ ಹೆಚ್ಚಳವಾಗುವ ಅಂದಾಜಿದ್ದು ಅದರಂತೆ ಸುಮಾರು ರೂ.70.00 ಕೋಟಿ ರವರೆಗೆ ದರ ಹೆಚ್ಚಳವಾಗುವ ಅಂದಾಜು ಇದ್ದು ಇದರಿಂದ ರೂ.62.50 ಕೋಟಿ ಯಿಂದ 68.75 ಕೋಟಿ ಹೆಚ್ಚಿನ ಹೊರೆ ಬೀಳುವ ಸಂಭವವಿರುತ್ತದೆ

ಈ ಹೆಚ್ಚಳವಾಗುವ ಸುಮಾರು ರೂ.70.00 ಕೋಟಿ ಅಧಿಕ ಆರ್ಥಿಕ ಹೊರೆಯನ್ನು ಸರ್ಕಾರದಿಂದ ರೂ.40.00 ಕೋಟಿ ಹೆಚ್ಚುವರಿ ಅನುದಾನವನ್ನು ಒದಗಿಸುವ ಮೂಲಕ ಮತ್ತು ಸದಸ್ಯರು ಪಾವತಿಸುವ ವಂತಿಗೆ ಮೊತ್ತದಿಂದ ರೂ.30.00 ಕೋಟಿಯನ್ನು ಭರಿಸುವ ಮೂಲಕ ಯೋಜನೆಯನ್ನು ಅನುಷ್ಠಾನಗೊಳಿಸಬಹುದೆಂದು ವರದಿ ತಿಳಿಸಿದೆ.

BIG UPDATE: ಜಮ್ಮು-ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕರ ಗುಂಡಿನ ದಾಳಿ: ಇಬ್ಬರು ಸಾವು, 12 ಮಂದಿಗೆ ಗಾಯ

BREAKING : ಕನ್ನಡಿಗನ ಮೇಲೆ ಹಲ್ಲೆ ನಡೆಸಿದ ‘ವಿಂಗ್ ಕಮಾಂಡರ್ ‘ವಿರುದ್ಧ ಕಠಿಣ ಕ್ರಮ : CM ಸಿದ್ದರಾಮಯ್ಯ ಆದೇಶ.!

Share. Facebook Twitter LinkedIn WhatsApp Email

Related Posts

ಸಾಗರದಲ್ಲಿ ‘ಸತ್ತವರ ಹೆಸರ’ಲ್ಲಿ ಆಸ್ತಿ ಮಾರಾಟ, ಬೃಹತ್ ಭೂ ಹಗರಣ: ‘ಲೋಕಾಯುಕ್ತ’ದಿಂದ ತನಿಖೆಗೆ ಆದೇಶ

2 Mins Read

ಜನಿವಾರಕ್ಕೆ ಇವರೇನು ಅನುಮತಿ ನೀಡೋದು? ಕೇಸರಿ ಶಾಲು ನಿಷೇಧಿಸಲು ಇವರ್ಯಾರು?: ಪ್ರಹ್ಲಾದ್ ಜೋಶಿ ಪ್ರಶ್ನೆ

1 Min Read

ಮಂಗಳೂರಲ್ಲಿ ಹವಾಮಾನ ವೈಫರಿತ್ಯದಿಂದ ಆಕಾಶದಲ್ಲೇ ಅರ್ಧ ಗಂಟೆ ಗಿರಕಿ ಹೊಡೆದ ವಿಮಾನಗಳು

1 Min Read
Recent News

ಸಾಗರದಲ್ಲಿ ‘ಸತ್ತವರ ಹೆಸರ’ಲ್ಲಿ ಆಸ್ತಿ ಮಾರಾಟ, ಬೃಹತ್ ಭೂ ಹಗರಣ: ‘ಲೋಕಾಯುಕ್ತ’ದಿಂದ ತನಿಖೆಗೆ ಆದೇಶ

ದಂಪತಿಗಳ ಲೈಂಗಿಕ ಜೀವನ ಸುಧಾರಿಸಲು ಈ ಒಂದು ಸರಳ ಅಭ್ಯಾಸ ಸಾಕು: ಸಂಶೋಧನೆಯಿಂದ ದೃಢ!

ದಂಪತಿಗಳ ನಡುವಿನ ಅನ್ಯೋನ್ಯತೆ ಹೆಚ್ಚಿಸಲು ಹೊಸ ಪ್ರಯೋಗ: ವೈವಾಹಿಕ ಜೀವನಕ್ಕೆ ಮರುಜೀವ ನೀಡಿದ ‘ನಗ್ನ ಛಾಯಾಚಿತ್ರ’

ನೈಸರ್ಗಿಕ ಪೋಷಕಾಂಶಗಳ ಗಣಿ: ಪ್ರತಿದಿನ ಮೊಳಕೆ ಕಾಳುಗಳನ್ನು ತಿನ್ನುವುದರಿಂದಾಗುವ 7 ಲಾಭಗಳು

State News
KARNATAKA

ಸಾಗರದಲ್ಲಿ ‘ಸತ್ತವರ ಹೆಸರ’ಲ್ಲಿ ಆಸ್ತಿ ಮಾರಾಟ, ಬೃಹತ್ ಭೂ ಹಗರಣ: ‘ಲೋಕಾಯುಕ್ತ’ದಿಂದ ತನಿಖೆಗೆ ಆದೇಶ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ನಡೆಯುತ್ತಿರುವ ಭೂ ಮಾಫಿಯಾದ ಭೀಕರ ದಂಧೆಯೊಂದು ಬಯಲಿಗೆ ಬಂದಿದೆ. ಸತ್ತವರ ಹೆಸರಿನಲ್ಲಿ ನಕಲಿ…

ಜನಿವಾರಕ್ಕೆ ಇವರೇನು ಅನುಮತಿ ನೀಡೋದು? ಕೇಸರಿ ಶಾಲು ನಿಷೇಧಿಸಲು ಇವರ್ಯಾರು?: ಪ್ರಹ್ಲಾದ್ ಜೋಶಿ ಪ್ರಶ್ನೆ

ಮಂಗಳೂರಲ್ಲಿ ಹವಾಮಾನ ವೈಫರಿತ್ಯದಿಂದ ಆಕಾಶದಲ್ಲೇ ಅರ್ಧ ಗಂಟೆ ಗಿರಕಿ ಹೊಡೆದ ವಿಮಾನಗಳು

BIG NEWS: ಸಾಗರದ ನಾಡಕಲಸೆಯಲ್ಲಿ ‘ಕಂದಾಯ ಭೂಮಿ’ ಒತ್ತುವರಿ: ಲೋಕಾಯುಕ್ತರಿಂದ ಸ್ವಯಂ ಪ್ರೇರಿತ ಮೊಕದ್ದಮೆ ದಾಖಲು

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.