ಬೆಂಗಳೂರು: ರಾಜ್ಯದ ಜನತೆಗೆ ಗುಡ್ ನ್ಯೂಸ್ ಎನ್ನುವಂತೆ ಪ್ರತಿ ತಿಂಗಳು 3ನೇ ಶನಿವಾರದಂದು ಪಂಚಾಯತ್ ರಾಜ್ ಆಯುಕ್ತಾಲಯದಲ್ಲಿ ಕುಂದುಕೊರತೆ ಸಭೆ ನಡೆಸಲಾಗುತ್ತದೆ. ಈ ಸಭೆಯಲ್ಲಿ ಪಾಲ್ಗೊಂಡು ನಿಮ್ಮ ಸಮಸ್ಯೆಗೆ ಸ್ಥಳದಲ್ಲೇ ಪರಿಹಾರವನ್ನು ಪಡೆಯಬಹುದಾಗಿದೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಅವರು ಗ್ರಾಮ ಪಂಚಾಯತಿ ನೌಕರರ ವಿವಿಧ ಸಂಘಟನೆಗಳ ಜಂಟಿ ಸಭೆಯಲ್ಲಿ ಭರವಸೆ ನೀಡಿದಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಕುಂದು ಕೊರತೆಗಳ ಬಗ್ಗೆ ಚರ್ಚಿಸಲು ಪ್ರತಿ ಮಾಹೆಯ ಮೂರನೇ ಶನಿವಾರದಂದು ಬೆಂಗಳೂರಿನಲ್ಲಿರುವ ಪಂಚಾಯತ್ ರಾಜ್ ಆಯುಕ್ತಾಲಯದಲ್ಲಿ ನಿಗದಿತವಾಗಿ ಸಭೆ ನಡೆಸಲಾಗುವುದು.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವರ ಅಧ್ಯಕ್ಷತೆಯಲ್ಲಿ ಕಳೆದ ತಿಂಗಳು 10ರಂದು ಬೆಂಗಳೂರಿನಲ್ಲಿ ನಡೆದ ಗ್ರಾಮ ಪಂಚಾಯತಿ ನೌಕರರ ಸಭೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ನೌಕರರ ವೃಂದದ ಸಂಘಗಳ ಬೇಡಿಕೆಯಂತೆ ನಿಗದಿತವಾಗಿ ಪ್ರತಿ ತಿಂಗಳು ಕುಂದು ಕೊರತೆ ಸಭೆಯನ್ನು ನಡೆಸಲು ಕ್ರಮ ಕೈಗೊಳ್ಳುವುದಾಗಿ ಹೇಳಿದ್ದರು.
ಅದರಂತೆ ಪ್ರತಿ ಮಾಹೆಯ ಮೂರನೇ ಶನಿವಾರದಂದು ಅಪರಾಹ್ನ 3 ಗಂಟೆಗೆ ಆಯುಕ್ತರು, ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯ, ಬೆಂಗಳೂರು ಇವರ ಅಧ್ಯಕ್ಷತೆಯಲ್ಲಿ ಕುಂದುಕೊರತೆ ಸಭೆ ಆಯೋಜಿಸಲು ನಿರ್ಧರಿಸಲಾಗಿದೆ. ನೌಕರರು ಸಭೆಗೆ ಹಾಜರಾಗಿ ತಮ್ಮ ಆಹವಾಲುಗಳ ಕುರಿತು ಚರ್ಚಿಸಬಹುದು ಎಂದು ಪಂಚಾಯತ್ ರಾಜ್ ಇಲಾಖೆಯ ಆಯುಕ್ತರಾದ ಡಾ.ಅರುಂಧತಿ ಚಂದ್ರಶೇಖರ್ ತಿಳಿಸಿದ್ದಾರೆ.
BREAKING: ಜಮ್ಮು- ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿಯಲ್ಲಿ ಓರ್ವ ಯೋಧ ಹುತಾತ್ಮ, ಮೂವರಿಗೆ ಗಾಯ
ಉಕ್ಕು ಕಾರ್ಖಾನೆಗಳಿಂದ ಮೋದಿ ಹೆಸರು ಹೇಳಿ 1,000 ಕೋಟಿ ರೂ ಹಣ HDK ಸಂಗ್ರಹಿಸಿದ್ದಾರೆ: ಚೆಲುವರಾಯಸ್ವಾಮಿ ಗಂಭೀರ ಆರೋಪ