ಬೆಂಗಳೂರು: ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ವತಿಯಿಂದ 2025-26ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ವಿವಿಧ ನಿಗಮಗಳಾದ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ (ನಿ), ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮ (ನಿ)., ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ (ನಿ)., ಕರ್ನಾಟಕ ಸವಿತಾ-ಸಮಾಜ ಅಭಿವೃದ್ಧಿ ನಿಗಮ (ನಿ)., ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ (ನಿ)., ಕರ್ನಾಟಕ ಮರಾಠ ಸಮುದಾಯ ಅಭಿವೃದ್ಧಿ ನಿಗಮ (ನಿ)., ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ (ನಿ)., ಕರ್ನಾಟಕ ಅಲೆಮಾರಿ-ಅರೆಮಾರಿ ಅಭಿವೃದ್ಧಿ ನಿಗಮ (ನಿ)., ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ (ನಿ)., ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮ (ನಿ)., ಕರ್ನಾಟಕ ಕಾಡುಗೊಲ್ಲ ಅಭಿವೃದ್ಧಿ ನಿಗಮ (ನಿ) ಗಳಲ್ಲಿ ಅರಿವು ಶೈಕ್ಷಣಿಕ ಸಾಲ ಯೋಜನೆ ಮತ್ತು ವಿದೇಶಿ ವಿಶ್ವ ವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆಯಡಿ ಸಾಲ ಮತ್ತು ಸಹಾಯಧನ ಸೌಲಭ್ಯ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಸೇವಾ ಸಿಂಧು ತಂತ್ರಾಂಶದಲ್ಲಿ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಸಕ್ತರು ಸೇವ ಸಿಂಧು ಪೊರ್ಟಲ್ https://sevasindhu.karnataka.gov.in ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು.
.ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರು ಕಚೇರಿ, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ನಿಯಮಿತ, ಬೆಂಗಳೂರು ದಕ್ಷಿಣ ಜಿಲ್ಲೆ, ನಂ.123/1037, 1ನೇ ಮಹಡಿ, 20ನೇ ಮುಖ್ಯ ರಸ್ತೆ, 5ನೇ ಬ್ಲಾಕ್, ವೆಸ್ಟ್ ಆಫ್ ಕಾರ್ಡ್ ರೋಡ್, ರಾಜಾಜಿನಗರ, ಬೆಂಗಳೂರು ನಗರ ಜಿಲ್ಲೆ -560001 ಅಥವಾ ನಿಗಮದ ಜಿಲ್ಲಾ ಕಛೇರಿಯ ಸಹಾಯವಾಣಿ ಸಂಖ್ಯೆ: 080-23156066 ಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ದಕ್ಷಿಣ ಜಿಲ್ಲೆ, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ನಿಯಮಿತದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.