Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS: ಮಂಡ್ಯದಲ್ಲಿ ‘LPG ಸಿಲಿಂಡರ್‌’ಗೆ ಮುಗಿಬಿದ್ದ ಜನ: ಪೊಲೀಸ್ ರಕ್ಷಣೆಯಲ್ಲಿ ‘ಗ್ಯಾಸ್‌’ ವಿತರಣೆ

22/03/2026 8:13 PM

ಊಟದ ನಂತ್ರ ‘ಗ್ಯಾಸ್’ ಸಮಸ್ಯೆ ಆಗ್ತಿದ್ಯಾ.? ಈ 5 ಸರಳ ಸಲಹೆಗಳಿಂದ ತಕ್ಷಣ ಪರಿಹಾರ ಪಡೆಯಿರಿ!

22/03/2026 8:05 PM

ಸಾಗರದಲ್ಲಿ ಅದ್ದೂರಿಯಾಗಿ ನೆರವೇರಿದ ‘ಶ್ರೀ ಮಹಾಗಣಪತಿ ರಥೋತ್ಸವ’: ಭಕ್ತಿಯ ಪರಾಕಾಷ್ಠೆ, ಸಂಸ್ಕೃತಿಯ ಸಂಗಮ

22/03/2026 7:55 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » GOOD NEWS: ರಾಜ್ಯದ ಜನತೆಗೆ ಗುಡ್ ನ್ಯೂಸ್: ನ.28ರಂದು 5,000 ಅಂಗನವಾಡಿಗಳಲ್ಲಿ LKG, UKG ಆರಂಭ
KARNATAKA

GOOD NEWS: ರಾಜ್ಯದ ಜನತೆಗೆ ಗುಡ್ ನ್ಯೂಸ್: ನ.28ರಂದು 5,000 ಅಂಗನವಾಡಿಗಳಲ್ಲಿ LKG, UKG ಆರಂಭ

By kannadanewsnow0920/11/2025 5:36 AM

ಬೆಂಗಳೂರು: ರಾಜ್ಯದ ಜನತೆಗೆ ಗುಡ್ ನ್ಯೂಸ್ ಎನ್ನುವಂತೆ ನವೆಂಬರ್.28ರಂದು 5,000 ಅಂಗನವಾಡಿಗಳಲ್ಲಿ ಎಲ್ ಕೆ ಜಿ, ಯು ಕೆ ಜಿ ಆರಂಭವಾಗಲಿದೆ. 

ಕರ್ನಾಟಕದಲ್ಲಿ ಅಂಗನವಾಡಿ ಆರಂಭಗೊಂಡು‌ 50 ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ನವೆಂಬರ್ 28ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಮುಖ ಮೂರು ಯೋಜನೆಗಳಿಗೆ ಚಾಲನೆ ನೀಡಲಾಗುವುದು. ಇದೊಂದು ಹೊಸ ಇತಿಹಾಸ ಸೃಷ್ಟಿಸುವ ಕಾರ್ಯಕ್ರಮವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.

ಐಸಿಡಿಎಸ್ ಸುವರ್ಣ ಮಹೋತ್ಸವ, ಅಕ್ಕ ಪಡೆ ಲೋಕಾರ್ಪಣೆ, ಗೃಹಲಕ್ಷ್ಮಿ ಬ್ಯಾಂಕ್ ಗೆ ಚಾಲನೆ ಕಾರ್ಯಕ್ರಮಗಳು ಅತ್ಯಂತ ಅರ್ಥಪೂರ್ಣವಾಗಿ ಅಂದು ನಡೆಯಲಿದ್ದು, ಅಂಗನವಾಡಿ ಕಾರ್ಯಕರ್ತರು ಹಾಗೂ ಸಹಾಯಕಿಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿ ಗೊಳಿಸಬೇಕು ಎಂದು ಅವರು ಕರೆ ನೀಡಿದರು.

ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟ ಪಕ್ಷ ಕಾಂಗ್ರೆಸ್, ‌ದೇಶ‌ಕಟ್ಟಿದ್ದು ಕಾಂಗ್ರೆಸ್ ಪಕ್ಷ. ಕಾಂಗ್ರೆಸ್ ಅಂದರೆ ಗ್ಯಾರಂಟಿ ಸರ್ಕಾರ ಅಂತ ಅರ್ಥ. ಅಧಿಕಾರಕ್ಕೆ ಬಂದಾಗಲೆಲ್ಲಾ ಮಹಿಳೆಯರ ಪರ ಯೋಜನೆಗಳನ್ನು ಜಾರಿಗೊಳಿಸುತ್ತಿದೆ‌ ಎಂದು ಹೆಬ್ಬಾಳಕರ್ ಹೇಳಿದರು.‌

ಇಂದಿರಾ ಗಾಂಧಿ ಅವರಿಂದ ಕ್ರಾಂತಿಕಾರಕ ಬದಲಾವಣೆ

ಇಡೀ ದೇಶವೇ ಬಡತನದಿಂದ ಬಳಲುತ್ತಿದ್ದ ವೇಳೆ ಬಡ ಮಕ್ಕಳಿಗೂ ಪೌಷ್ಠಿಕ ಆಹಾರ ಸಿಗಬೇಕು.‌ ಪೌಷ್ಠಿಕ ಆಹಾರದ ಜೊತೆಗೆ ಶಿಕ್ಷಣ ಕೂಡ ಸಿಗಬೇಕು ಎನ್ನುವ ದೃಷ್ಟಿಯಿಂದ 1975ರಲ್ಲಿ ಮೈಸೂರು ಜಿಲ್ಲೆಯಲ್ಲಿ ಅಂದಿನ ಪ್ರಧಾನಿ ಇಂದಿರಾ ಗಾಂಧಿಯವರು ಅಂಗನವಾಡಿ ಆರಂಭಿಸಿದರು. ಇದೀಗ ಅಂಗನವಾಡಿ ಆರಂಭವಾಗಿ 50 ವರ್ಷ ಪೂರೈಸಿದೆ. ಹಾಗಾಗಿ ಅಂದಿನ ಕಾರ್ಯಕ್ರಮದಲ್ಲಿ ಅಕ್ಕಪಡೆ, ಎಲ್‌ಕೆಜಿ,‌ ಯುಕೆಜಿಗೆ ಚಾಲನೆ ಹಾಗೂ ಗೃಹಲಕ್ಷ್ಮಿ ಯೋಜನೆಯ ಮುಂದುವರಿದ ಭಾಗವಾಗಿ ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘವನ್ನು ಆರಂಭಿಸಲಾಗುವುದು.‌ ಅರ್ಥಪೂರ್ಣ ಕಾರ್ಯಕ್ರಮವನ್ನು ಎಲ್ಲರೂ ಸೇರಿ ಆಚರಿಸೋಣ ಎಂದರು.

2028ಕ್ಕೆ ನಮ್ದೆ ಸರ್ಕಾರ

ಪಂಚ ಗ್ಯಾರಂಟಿ ಯೋಜನೆ ಗಳನ್ನು ನೀಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಸಾರಥ್ಯದ ನಮ್ಮ ಸರ್ಕಾರ ಗ್ಯಾರಂಟಿ ಸರ್ಕಾರ ಆಗಿದ್ದು, 2028ಕ್ಕೂ ನಮ್ಮದೆ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದರು.

ನಮ್ಮ ಪಕ್ಷದ ಯೋಜನೆಗಳನ್ನು ಬಿಜೆಪಿ ಬೇರೆ ರಾಜ್ಯಗಳಲ್ಲಿ ನಕಲು ಮಾಡುತ್ತಿದೆ. ಮಹಾರಾಷ್ಟ್ರದಲ್ಲಿ ನಮ್ಮ ಗೃಹಲಕ್ಷ್ಮಿ ಯೋಜನೆ ಮಾದರಿಯಲ್ಲಿ ಲಾಡ್ಲಿಬೆಹನ್ ಯೋಜನೆಯನ್ನು ಜಾರಿಗೊಳಿಸಲಾಗಿತ್ತು. ಚುನಾವಣೆ ವೇಳೆ ತಿಂಗಳಿಗೆ 2,500 ರೂಪಾಯಿಯಂತೆ ಮೂರು ತಿಂಗಳ ಹಣ ಹಾಕಲಾಗಿತ್ತು. ಆದರೆ, ಚುನಾವಣೆಯಲ್ಲಿ ಗೆದ್ದ ಬಳಿಕ ಯೋಜನೆಯನ್ನೆ ಪರಿಷ್ಕರಿಸಲಾಗಿದೆ. 2,500 ರೂಪಾಯಿಯಿಂದ 1500 ರೂಪಾಯಿಗೆ ಇಳಿಸಲಾಗಿದೆ. 3.50 ಕೋಟಿ ಫಲಾನುಭವಿಗಳ ಸಂಖ್ಯೆಯನ್ನು 1.50 ಕೋಟಿಗೆ ಇಳಿಸಲಾಗಿದೆ ಎಂದರು.

ಗೌರವ ಧನ ಹೆಚ್ಚಳವೇ ಮತ್ತೊಂದು ಗ್ಯಾರಂಟಿ

ಕಳೆದ ಬಾರಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಗೌರವ ಧನವನ್ನು 1000 ರೂಪಾಯಿ ಹೆಚ್ಚಿಸಲಾಗಿದೆ. ಶೀಘ್ರವೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮತ್ತೊಂದು ಸಾವಿರ ಹೆಚ್ಚಿಸುವಂತೆ ಮನವಿ ಮಾಡಲಾಗುವುದು. ಇದೇ ನಮ್ಮ ಸರ್ಕಾರದ ಮತ್ತೊಂದು ಗ್ಯಾರಂಟಿ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭರವಸೆ ನೀಡಿದರು.

ಜಿಲ್ಲೆಯಿಂದ 2.50 ಲಕ್ಷಕ್ಕೂ ಹೆಚ್ಚು ಷೇರುದಾರರ ಗುರಿ

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ 2.80 ಲಕ್ಷ ಮಹಿಳೆಯರು ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿದ್ದಾರೆ. ಈ ಪೈಕಿ ಕನಿಷ್ಠ 2.50 ಲಕ್ಷ ಫಲಾನುಭವಿಗಳನ್ನು ಗೃಹಲಕ್ಷ್ಮಿ‌ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ಷೇರುದಾರರನ್ನಾಗಿ ಮಾಡಬೇಕು‌. ಗೃಹಲಕ್ಷ್ಮಿ ಯೋಜನೆಯ ಯಶಸ್ಸಿಗೆ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರೆ ಕಾರಣ. ಅದೇ ರೀತಿ ಗೃಹಲಕ್ಷ್ಮಿ ಬ್ಯಾಂಕ್ ಕೂಡ ಮನೆ ಮನೆ ತಲುಪುವಂತಾಗಬೇಕು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಬೆಂಗಳೂರು ದಕ್ಷಿಣದ ಜನರು ರಾಜಕೀಯವಾಗಿ ಪ್ರಬುದ್ಧರು

ಓರ್ವ ಪ್ರಧಾನ ಮಂತ್ರಿ ಹಾಗೂ ಮೂವರು ಮುಖ್ಯಮಂತ್ರಿಗಳನ್ನು ಕೊಟ್ಟ ಕೀರ್ತಿ ಬೆಂಗಳೂರು ದಕ್ಷಿಣ ಜಿಲ್ಲೆಗೆ ಸಲ್ಲುತ್ತದೆ. ಜಿಲ್ಲೆಯ ಜನ ರಾಜಕೀಯವಾಗಿ ಸಾಕಷ್ಟು ಪ್ರಬುದ್ಧರು. ಮನೆ ಮನೆಗಳಲ್ಲಿ ನಾಯಕರಿದ್ದಾರೆ. ಅಂತ ನಾಯಕರು ಬೆಳೆಯಲು ತಾಯಂದಿರ ಶ್ರಮವೇ ಪ್ರಮುಖ ಕಾರಣ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಈ ವೇಳೆ ರಾಮನಗರ ಶಾಸಕ ಇಕ್ಬಾಲ್ ಹುಸೇನ್, ವಿಧಾನ ಪರಿಷತ್ ಸದಸ್ಯರಾದ ಎಸ್. ರವಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಕೆ.ರಾಜು, ಕರ್ನಾಟಕ ರೇಷ್ಮೆ ಮಾರಾಟ ಮಂಡಳಿ ಅಧ್ಯಕ್ಷರಾದ ಗಂಗಾಧರ್, ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಬಿ.ಎನ್.ನಟರಾಜು ಗಾಣಕಲ್, ರಾಮನಗರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಚೇತನ್ ಕುಮಾರ್, ತಾಲೂಕುಗಳ ಗ್ಯಾರಂಟಿ ಯೋಜನೆಗಳ ಅಧ್ಯಕ್ಷರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ದಿನೇಶ್ ಜೆ.ಆರ್. ಸೇರಿದಂತೆ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ALERT : ತೊಳೆಯದ `ತಲೆದಿಂಬು’ ಬಳಸುವವರೇ ಎಚ್ಚರ : ಇದರಲ್ಲಿವೆ `ಟಾಯ್ಲೆಟ್ ಸೀಟ್’ ಗಿಂತ ಡೇಂಜರ್ ಬ್ಯಾಕ್ಟೀರಿಯಾ.!

Share. Facebook Twitter LinkedIn WhatsApp Email

Related Posts

BIG NEWS: ಮಂಡ್ಯದಲ್ಲಿ ‘LPG ಸಿಲಿಂಡರ್‌’ಗೆ ಮುಗಿಬಿದ್ದ ಜನ: ಪೊಲೀಸ್ ರಕ್ಷಣೆಯಲ್ಲಿ ‘ಗ್ಯಾಸ್‌’ ವಿತರಣೆ

22/03/2026 8:13 PM1 Min Read

ಸಾಗರದಲ್ಲಿ ಅದ್ದೂರಿಯಾಗಿ ನೆರವೇರಿದ ‘ಶ್ರೀ ಮಹಾಗಣಪತಿ ರಥೋತ್ಸವ’: ಭಕ್ತಿಯ ಪರಾಕಾಷ್ಠೆ, ಸಂಸ್ಕೃತಿಯ ಸಂಗಮ

22/03/2026 7:55 PM3 Mins Read

ಸಾಗರದಲ್ಲಿ ಮದರ್ ತೆರೇಸಾ ಕೌಶಲ್ಯ ತರಬೇತಿ ಕೇಂದ್ರದಿಂದ ಬ್ಯುಟಿಶಿಯನ್ ತರಬೇತಿ; ಶಿಬಿರಾರ್ಥಿಗಳಿಗೆ ಪ್ರಮಾಣಪತ್ರ ವಿತರಣೆ

22/03/2026 7:28 PM1 Min Read
Recent News

BIG NEWS: ಮಂಡ್ಯದಲ್ಲಿ ‘LPG ಸಿಲಿಂಡರ್‌’ಗೆ ಮುಗಿಬಿದ್ದ ಜನ: ಪೊಲೀಸ್ ರಕ್ಷಣೆಯಲ್ಲಿ ‘ಗ್ಯಾಸ್‌’ ವಿತರಣೆ

22/03/2026 8:13 PM

ಊಟದ ನಂತ್ರ ‘ಗ್ಯಾಸ್’ ಸಮಸ್ಯೆ ಆಗ್ತಿದ್ಯಾ.? ಈ 5 ಸರಳ ಸಲಹೆಗಳಿಂದ ತಕ್ಷಣ ಪರಿಹಾರ ಪಡೆಯಿರಿ!

22/03/2026 8:05 PM

ಸಾಗರದಲ್ಲಿ ಅದ್ದೂರಿಯಾಗಿ ನೆರವೇರಿದ ‘ಶ್ರೀ ಮಹಾಗಣಪತಿ ರಥೋತ್ಸವ’: ಭಕ್ತಿಯ ಪರಾಕಾಷ್ಠೆ, ಸಂಸ್ಕೃತಿಯ ಸಂಗಮ

22/03/2026 7:55 PM

ಜನಸಾಮಾನ್ಯರಿಗೆ ಮತ್ತೊಂದು ಬಿಗ್ ಶಾಕ್ ; ‘ನೀರಿನ ಬಾಟಲಿ’ಗಳ ಬೆಲೆಯೂ ಏರಿಕೆ!

22/03/2026 7:42 PM
State News
KARNATAKA

BIG NEWS: ಮಂಡ್ಯದಲ್ಲಿ ‘LPG ಸಿಲಿಂಡರ್‌’ಗೆ ಮುಗಿಬಿದ್ದ ಜನ: ಪೊಲೀಸ್ ರಕ್ಷಣೆಯಲ್ಲಿ ‘ಗ್ಯಾಸ್‌’ ವಿತರಣೆ

By kannadanewsnow0922/03/2026 8:13 PM KARNATAKA 1 Min Read

ಮಂಡ್ಯ: ರಾಜ್ಯಾದ್ಯಂತ ಮುಂದುವರಿದಿರುವ ಅಡುಗೆ ಅನಿಲದ (LPG) ತೀವ್ರ ಅಭಾವವು ಈಗ ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆಯಲ್ಲಿ ಆತಂಕದ ವಾತಾವರಣ…

ಸಾಗರದಲ್ಲಿ ಅದ್ದೂರಿಯಾಗಿ ನೆರವೇರಿದ ‘ಶ್ರೀ ಮಹಾಗಣಪತಿ ರಥೋತ್ಸವ’: ಭಕ್ತಿಯ ಪರಾಕಾಷ್ಠೆ, ಸಂಸ್ಕೃತಿಯ ಸಂಗಮ

22/03/2026 7:55 PM

ಸಾಗರದಲ್ಲಿ ಮದರ್ ತೆರೇಸಾ ಕೌಶಲ್ಯ ತರಬೇತಿ ಕೇಂದ್ರದಿಂದ ಬ್ಯುಟಿಶಿಯನ್ ತರಬೇತಿ; ಶಿಬಿರಾರ್ಥಿಗಳಿಗೆ ಪ್ರಮಾಣಪತ್ರ ವಿತರಣೆ

22/03/2026 7:28 PM

ಈ ರೀತಿಯಾಗಿ ‘ಗ್ಯಾಸ್ ಸ್ಟೌವ್ ಬರ್ನರ್’ ಸ್ವಚ್ಛಗೊಳಿಸಿ, ‘LPG’ ಉಳಿಸಿ!

22/03/2026 7:09 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.