ಬೆಂಗಳೂರು : ಯಶಸ್ವಿನಿ ಯೋಜನೆಯಡಿಯ ಫಲಾನುಭವಿಗಳಿಗೆ ಚಿಕಿತ್ಸೆ ನೀಡಿದ ಖಾಸಗಿ ಆಸ್ಪತ್ರೆಗಳಿಗೆ ವಾರದೊಳಗೆ ಬಿಲ್ ಪಾವತಿಸುವಂಥ ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದ್ದು, ಅದರ ಜೊತೆಯಲ್ಲೇ ಚಿಕಿತ್ಸಾ ದರಗಳನ್ನು ಪರಿಷ್ಕರಿಸಲು ನಿರ್ಧರಿಸಲಾಗಿದೆ ಎಂದು ಸಚಿವ ರಾಜಣ್ಣ ತಿಳಿಸಿದ್ದಾರೆ. ಸದ್ಯದಲ್ಲೇ ಯಶಸ್ವಿನಿ ಚಿಕಿತ್ಸಾ ದರಗಳನ್ನು ಆಯುಷ್ಮಾನ್ ಭಾರತ್ ಅಥವಾ ಆರೋಗ್ಯ ಕರ್ನಾಟಕ ಯೋಜನೆಗಳಲ್ಲಿ ನೀಡಲಾಗುವ ಚಿಕಿತ್ಸಾ ದರಗಳಿಗೆ ತತ್ಸಮನಾಗಿ ಹೆಚ್ಚಿಸಲು ತೀರ್ಮಾನಿಸಲಾಗಿದೆ ಎಂದು ಹೇಳಿದ್ದಾರೆ.
ಯಶಸ್ವಿನಿ ಯೋಜನೆಯಡಿ ರೋಗಿಗಳಿಗೆ ಖಾಸಗಿ ಆಸ್ಪತ್ರೆಗಳು ಚಿಕಿತ್ಸೆ ನೀಡಿದ ಒಂದು ವಾರದೊಳಗೆ ಬಿಲ್ ಪಾವತಿ ವ್ಯವಸ್ಥೆ ಜಾರಿಗೊ ಳಿಸ ಲಾಗಿದೆ. ಹಾಗೆಯೇ ಯೋಜನೆಯಡಿ ಚಿಕಿತ್ಸಾ ದರವನ್ನು ಕೇಂದ್ರ ಸರಕಾರದ ‘ಆಯು ಷ್ಮಾನ್ ಭಾರತ್- ಆರೋಗ್ಯ ಕರ್ನಾಟಕ’ ಯೋಜನೆಯ ಚಿಕಿತ್ಸಾ ದರಕ್ಕೆ ಸಮಾ ನವಾಗಿ ಪರಿಷ್ಕರಿಸಲು ನಿರ್ಧರಿಸಲಾಗಿದೆ ಎಂದು ಸಚಿವ ಕೆ.ಎನ್.ರಾಜಣ್ಣ ಹೇಳಿದರು.
ವಿಧಾನಸೌಧದಲ್ಲಿ ಮಂಗಳವಾರ ಮಾತನಾಡಿದ ಅವರು, ಯೋಜನೆಯಡಿ ಚಿಕಿತ್ಸಾ ದರವನ್ನು ಕೇಂದ್ರದ ‘ಆಯುಷ್ಮಾನ್ ಭಾರತ್- ಆರೋಗ್ಯ ಕರ್ನಾಟಕ’ ಯೋಜನೆಯ ದರಕ್ಕೆ ಸಮಾನವಾಗಿ ಪರಿಷ್ಕರಿಸಲು ನಿರ್ಧರಿಸಲಾಗಿದ್ದು, ಇದಕ್ಕೆ ಖಾಸಗಿ ಆಸ್ಪತ್ರೆಗಳು ಸಮ್ಮತಿಸಿವೆ. 15- 20 ವರ್ಷಗಳ ಹಿಂದೆ ರಾಜ್ಯ ಸರಕಾರ ಚಿಕಿತ್ಸಾ ದರ ನಿಗದಿಪಡಿಸಿದ್ದರಿಂದ ಪರಿಷ್ಕರಿ ಸಬೇಕೆಂದು ಖಾಸಗಿ ಆಸ್ಪತ್ರೆಗಳ ಒತ್ತಾಯವಿತ್ತು ಎಂದು ಹೇಳಿದರು.
ಈ ಹಿಂದೆ ಸುಮಾರು 25 ಕೋಟಿ ರೂ. ಬಾಕಿ ಉಳಿಸಿಕೊಂಡಿದ್ದರಿಂದ ಖಾಸಗಿ ಆಸ್ಪತ್ರೆಗಳು ಯಶಸ್ವಿನಿ ಯೋಜನೆಯಡಿ ಚಿಕಿತ್ಸೆ ನೀಡಲು ಹಿಂದೇಟು ಹಾಕುತ್ತಿದ್ದವು. ಈಗ ಆ ಸಮಸ್ಯೆ ಬಗೆಹರಿಸಲಾಗಿದ್ದು, ರೋಗಿ ಗಳಿಗೆ ಯಾವುದೇ ತೊಂದರೆಯಾಗದು ಎಂದು ಸಚಿವರು ತಿಳಿಸಿದರು.