ಧಾರವಾಡ : ಕರ್ನಾಟಟಕ ರಾಜ್ಯ ಕಂಡ ಅಪರೂಪದ ಮೇರು ನಟ, ಹೃದಯವಂತ ಪುನೀತ ರಾಜಕುಮಾರ ಅವರು, ಹೃದಯಾಘಾತದಿಂದ ನಮ್ಮನ್ನಗಲಿದರು. ಅವರ ನೆನಪಿಗಾಗಿ ಬಡವರಿಗೆ, ಸಾರ್ವಜನಿಕರಿಗೆ ಎಲ್ಲ ಸರಕಾರಿ ಆಸ್ಪತ್ರೆಗಳಲ್ಲಿ ಹೃದಯ ಖಾಯಿಲೆಗೆ ತಕ್ಷಣದ ಚಿಕಿತ್ಸೆ, ವೈದ್ಯಕೀಯ ಸೌಲಭ್ಯಗಳನ್ನು ಕಲ್ಪಿಸಬೇಕೆಂದು ರಾಜ್ಯ ಸರಕಾರವು ದೇಶದಲ್ಲಿಯೇ ಪ್ರಥಮ ಬಾರಿಗೆ ಡಾ.ಪುನೀತ್ ರಾಜಕುಮಾರ ಹೃದಯ ಜ್ಯೋತಿ ಯೋಜನೆಯನ್ನು ಅನುμÁ್ಟನಗೊಳಿಸಲಾಗಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ ಗುಂಡೂರಾವ್ ಅವರು ಹೇಳಿದರು.
ಅವರು ಸತ್ತೂರಿನ ಡಾ. ಡಿ.ವರೇಂದ್ರ ಹೆಗ್ಗಡೆ ಕಲಾಕ್ಷತ್ರದಲ್ಲಿ ರಾಜ್ಯ ಸರಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಜಿಲ್ಲಾಡಳಿತ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಕಾರದಲ್ಲಿ ಆಯೋಜಿಸಿದ್ದ ಕರ್ನಾಟಕ ರತ್ನ ಡಾ|| ಪುನೀತ್ ರಾಜ್ ಕುಮಾರ ಹೃದಯ ಜ್ಯೋತಿ ಯೋಜನೆ ರಾಜ್ಯಮಟ್ಟದ ಕಾರ್ಯಕ್ರಮ ಉದ್ಘಾಟಿಸಿ, ಮಾತನಾಡಿದರು.
ಅನೇಕ ಸಂದರ್ಭಗಳಲ್ಲಿ ವ್ಯಕ್ತಿಗೆ ಹೃದಯಾಘಾತ ಆಗುವ ಸನ್ನಿವೇಶದಲ್ಲಿ ಆಸ್ಪತ್ರೆ ತಲುಪುವ ಮೊದಲೇ ಹೃದಯ ಬಡಿತ ನಿಂತು ಜೀವ ಹೊರಟು ಹೋಗುತ್ತದೆ. ತಾಲೂಕು ಆಸ್ಪತ್ರೆಗಳಲ್ಲಿ ಹೃದಯ ಸಂಬಂಧಿಸಿದ ಖಾಯಿಲೆಗಳಿಗೆ ತುರ್ತಾಗಿ ಸರಿಯಾದ ಚಿಕಿತ್ಸೆ ಲಭಿಸದೆ ಸಾವು ಸಂಭವಿಸುತ್ತವೆ. ಇದನ್ನು ತಡೆಗಟ್ಟಲು ಸರಕಾರ ತಾಲೂಕು ಆಸ್ಪತ್ರೆಗಳಿಗೂ ಹೃದಯ ಸಂಬಂಧಿ ಆರೋಗ್ಯ ಮತ್ತು ವೈದ್ಯಕೀಯ ಸೌಲಭ್ಯಗಳನ್ನು ವಿಸ್ತರಿಸಲು ಹೃದಯ ಜ್ಯೋತಿ ಯೋಜನೆಯನ್ನು ಜಾರಿಗೊಳಿಸಿದೆ ಎಂದು ಅವರು ಹೇಳಿದರು.
ಡಾ.ಪುನೀತ್ ರಾಜಕುಮಾರ ಹೃದಯ ಜ್ಯೋತಿ ಯೋಜನೆಯನ್ನು ಮೊದಲ ಹಂತದಲ್ಲಿ ರಾಜ್ಯದ 71 ತಾಲೂಕು ಆಸ್ಪತ್ರೆ ಮತ್ತು 15 ಜಿಲ್ಲಾ ಆಸ್ಪತ್ರೆಗಳಲ್ಲಿ ಅನುμÁ್ಟನಗೊಳಿಸಲಾಗಿದೆ. ವಿವಿಧ ಜಿಲ್ಲಾ ಆಸ್ಪತ್ರೆಗಳ 65 ಹೃದಯ ತಜ್ಞ ವೈದ್ಯರು ಈ ಸೇವೆ ಅನುμÁ್ಟನದಲ್ಲಿ ಆನ್ ಲೈನ್ ಸಂಪರ್ಕದಲ್ಲಿದ್ದು ರೋಗಿಯ ಆರೋಗ್ಯ ಮತ್ತು ಜೀವ ರಕ್ಷಣೆಗೆ ತಮ್ಮ ಸಲಹೆ, ಮಾರ್ಗದರ್ಶನ ನೀಡಲಿದ್ದಾರೆ ಎಂದು ಅವರು ಹೇಳಿದರು.
ಡಾ.ಪುನೀತ ರಾಜಕುಮಾರ ಹೃದಯ ಜ್ಯೋತಿ ಯೋಜನೆಯು ಮಹತ್ವದ ಯೋಜನೆಯಾಗಿದ್ದು, ಯಾವುದೇ ವ್ಯಕ್ತಿಗೆ ಹೃದಯಾಘಾತ ಸಂಭವಿಸಿದರೆ ತಕ್ಷಣ ರೂ.30 ಸಾವಿರ ಮೊತ್ತದ ಇಂಜಕ್ಷನ್ ಉಚಿತವಾಗಿ ನೀಡಲಾಗುತ್ತದೆ. ಬರುವ ವರ್ಷ ರಾಜ್ಯದ ಎಲ್ಲ ತಾಲೂಕು ಆಸ್ಪತ್ರೆಗಳಿಗೆ ಈ ಯೋಜನೆಯನ್ನು ವಿಸ್ತರಿಸಲಾಗುತ್ತದೆ ಎಂದು ಅವರು ಹೇಳಿದರು.
ಹೃದಯಾಘಾತದ ಪ್ರಕರಣಗಳು ಹೆಚ್ಚುತ್ತಿದ್ದು, ರೈಲ್ವೆ ನಿಲ್ದಾಣ, ಬಸ್ ನಿಲ್ದಾಣ, ಅತೀ ಜನನಿಬಿಡ ಪ್ರದೇಶಗಳಲ್ಲಿನ ಜನರಿಗೆ ಹೃದಯ ಸಂಬಂಧಿ ಖಾಯಿಲೆ ಕಂಡುಬಂದಾಗ ತಕ್ಷಣ ಪ್ರಾಥಮಿಕ ಚಿಕಿತ್ಸೆ ನೀಡಲು ಕ್ರಮವಹಿಸಲಾಗಿದೆ. ಡಿಫಿಬ್ರಿಲೇಟರ್ ಗಳನ್ನು ಪ್ರಥಮ ಬಾರಿಗೆ ಆಸ್ಪತ್ರೆ ಹೊರಗಡೆಯೂ ಲಭ್ಯಗೊಳಿಸಲಾಗುತ್ತಿದೆ ಎಂದು ಸಚಿವರು ತಿಳಿಸಿದರು.
ರಾಜ್ಯದ ಎಲ್ಲ ಜನರಿಗೆ ಒಳ್ಳೆಯ ಗುಣಮಟ್ಟದ ಆರೋಗ್ಯ ಆರೈಕೆ ಸೀಗಬೇಕೆಂಬುದು ಸರಕಾರದ ಗುರಿಯಾಗಿದ್ದು, ಈ ನಿಟ್ಟಿನಲ್ಲಿ ಆಸ್ಪತ್ರೆಗಳನ್ನು ಮೇಲದರ್ಜೆಗೆ ಏರಿಸುವ, ಸುಧಾರಿತ ಆಧುನಿಕ ವೈದ್ಯಕೀಯ ಉಪಕರಣಗಳ ಪೂರೈಕೆ ಮತ್ತು ಅನೇಕ ಸುಧಾರಣಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಸಚಿವ ದಿನೇಶ ಗುಂಡೂರಾವ್ ಹೇಳಿದರು.
ಕರ್ನಾಟಕ ರತ್ನ ಡಾ|| ಪುನೀತ್ ರಾಜ್ ಕುಮಾರ ಹೃದಯ ಜ್ಯೋತಿ ಯೋಜನೆಯ ತರಬೇತಿ ಪುಸ್ತಕ ಬಿಡುಗಡೆ ಮಾಡಿದ ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಅವರು ಮಾತನಾಡಿ, ಇದೊಂದು ರಾಷ್ಟಮಾದರಿ ಯೋಜನೆ ಆಗಿದೆ. ಬಡವರಿಗೆ, ಗ್ರಾಮೀಣ ಜನರಿಗೆ ಬಹು ಉಪಯುಕ್ತವಾಗಿದೆ. ರಾಜ್ಯ ಸರಕಾರ ಬಡವರ, ಗ್ರಾಮೀಣರ, ಮಹಿಳೆಯರ ಮತ್ತು ಸಾಮಾಜಿಕವಾಗಿ, ಆರ್ಥಿಕವಾಗಿ ಹಿಂದುಳಿದವರ ಅಭಿವೃದ್ಧಿಗಾಗಿ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದೆ. ಸಂಧ್ಯಾ ಸುರಕ್ಷಾ, ವಿಕಲಚೇತನರ ಮತ್ತು ಇಂದಿರಾ ವೃದ್ದಾಪ್ಯ ಮುಂತಾದ ಪಿಂಚಣಿ ಯೋಜನೆಗಳನ್ನು ಈ ಹಿಂದೆ ನಮ್ಮ ಸರಕಾರವೇ ಜಾರಿಗೊಳಿಸಿದೆ. ಅಸಹಾಯಕರ, ಬಡವರ ಅಭಿವೃದ್ದಿಗೆ ನಮ್ಮ ಸರಕಾರ ಬದ್ದವಾಗಿದೆ ಎಂದು ಹೇಳಿದರು.