ಬೆಳಗಾವಿ : ರಾಜ್ಯದ ಜನತೆಗೆ ಸರ್ಕಾರವು ಮತ್ತೊಂದು ಸಿಹಿಸುದ್ದಿ ನೀಡಿದ್ದು, ರಾಜ್ಯದ ಎಲ್ಲಾ ತಾಲೂಕುಗಳಿಗೂ ಪುನೀತ್ ರಾಜ್ ಕುಮಾರ್ ಹೃದಯ ಜ್ಯೋತಿ ಯೋಜನೆ ವಿಸ್ತರಣೆ ಮಾಡಲು ಚಿಂತನೆ ನಡೆಸಲಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಎಲ್ಲಾ ತಾಲೂಕುಗಳಿಗೂ ಪುನೀತ್ ರಾಜ್ ಕುಮಾರ್ ಹೃದಯ ಜ್ಯೋತಿ ಯೋಜನೆ ವಿಸ್ತರಣೆ ಮಾಡಲು ಚಿಂತನೆ ನಡೆಸಲಾಗುತ್ತಿದೆ. ಡಯಾಲಿಸಿಸ್ ಕೇಂದ್ರಗಳನ್ನು ಬದಲಾವಣೆ ಮಾಡಲಾಗಿದೆ. ಇದಕ್ಕೆ ಸದ್ಯದಲ್ಲೇ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ಎಲ್ಲಾ ಜಿಲ್ಲಾಕೇಂದ್ರಗಳಲ್ಲಿ ಟೇಕ್ ಕೇರ್ ಕೀಮೋಥೆರಪಿ ಆರಂಭಿಸಲಾಗುತ್ತಿದೆ ಹೇಳಿದ್ದಾರೆ.
ಪುನೀತ್ ರಾಜ್‌ಕುಮಾರ್ ಹೃದಯಜ್ಯೋತಿ ಯೋಜನೆಯಡಿ ಹೃದಯಾಘಾತದ ಸಂದರ್ಭದಲ್ಲಿ 25,000 ರೂ. ಮೌಲ್ಯದ ಜೀವರಕ್ಷಕ ಇಂಜೆಕ್ಷನ್ ಉಚಿತವಾಗಿ ನೀಡಲಾಗುತ್ತಿದೆ. 1 ಮತ್ತು 2 ನೇ ಹಂತದಲ್ಲಿ 15 ಜಿಲ್ಲೆಗಳ 70 ತಾಲೂಕು ಆಸ್ಪತ್ರೆಗಳಲ್ಲಿ ಈ ಯೋಜನೆ ಜಾರಿಯಾಗಿದ್ದು, 3 ಮತ್ತು 4 ನೇ ಹಂತದಲ್ಲಿ ಉಳಿದ 16 ಜಿಲ್ಲೆಗಳ ಎಲ್ಲಾ ತಾಲೂಕುಗಳಲ್ಲಿ ಪುನೀತ್ ರಾಜ್‌ಕುಮಾರ್ ಹೃದಯಜ್ಯೋತಿ ಯೋಜನೆ ವಿಸ್ತರಣೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.