ಬೆಂಗಳೂರು; ರಾಜ್ಯದ ಜನರಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಅತ್ಯಾಧುನಿಕ ಸೌಲಭ್ಯ ಸಿಗುವಂತಾಗಬೇಕು. ಹೀಗಾಗಿ ರೋಬೋಟಿಕ್ ತಂತ್ರಜ್ಞಾನವನ್ನು ಸರ್ಕಾರಿ ಆಸ್ಪತ್ರೆಗಳಲ್ಲಿ ಅಳವಡಿಸಲು ಕ್ರಮವಹಿಸಲಾಗುವುದು ಎಂಬುದಾಗಿ ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ.
ಜನರಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಅತ್ಯಾಧುನಿಕ ಸೌಲಭ್ಯ ಸಿಗುವಂತಾಗಬೇಕು. ಹೀಗಾಗಿ ರೋಬೊಟಿಕ್ ತಂತ್ರಜ್ಞಾನವನ್ನು ಸರ್ಕಾರಿ ಆಸ್ಪತ್ರೆಗಳಲ್ಲಿ ಅಳವಡಿಸಲು ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.@CMofKarnataka @siddaramaiah pic.twitter.com/5yemQtra8L
— DIPR Karnataka (@KarnatakaVarthe) August 28, 2024
ಸರ್ಕಾರಿ ಆಸ್ಪತ್ರೆ ವೈದ್ಯರು ಖಾಸಗಿ ಆಸ್ಪತ್ರೆ ವೈದ್ಯರಿಗಿಂತ ಯಾವುದರಲ್ಲೂ ಕಡಿಮೆ ಇಲ್ಲ. ಸರ್ಕಾರಿ ಆಸ್ಪತ್ರೆಗಳೂ ಖಾಸಗಿ ಆಸ್ಪತ್ರೆಗಳ ಗುಣಮಟ್ಟದಲ್ಲಿರಬೇಕು ಎನ್ನುವುದು ಸರ್ಕಾರದ ಗುರಿ ಎಂದು ನುಡಿದರು.
ಜಯದೇವ ಆಸ್ಪತ್ರೆಯಲ್ಲಿರುವ ಗುಣಮಟ್ಟ ಮತ್ತು ಶುಚಿತ್ವ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲೂ ಬರಬೇಕು. ಆಗ ಮಾತ್ರ ಸರ್ಕಾರ ಕೊಡುವ ಅನುದಾನಕ್ಕೆ ಅರ್ಥ ಬರುತ್ತದೆ ಎಂದರು.
ನಾನು ಸೇರಿ ಮಂತ್ರಿಗಳು, ರಾಜರಣಿಗಳು ಸರ್ಕಾರಿ ಆಸ್ಪತ್ರೆಗಳಿಗೆ ಹೋಗುವುದಿಲ್ಲ. ಉಪ ಇದರಲ್ಲಿ ನಮ್ಮಗಳ ತಪ್ಪು ಕೂಡ ಇದೆ. ಆದರೆ ಖಾಸಗಿ ಆಸ್ಪತ್ರೆಗಳ ಗುಣಮಟ್ಟ ಮತ್ತು ಶುಚಿತ್ವ ಸರ್ಕಾರಿ ಆಸ್ಪತ್ರೆಗಳಲ್ಲೂ ಇರುವಂತೆ ನೋಡಿಕೊಳ್ಳಲು ಅಗತ್ಯ ಅನುದಾನ ಕೊಡುತ್ತಲೇ ಇದ್ದೇವೆ. ಆಸ್ಪತ್ರೆಯ ಆಡಳಿತ ಪಾರದರ್ಶಕವಾಗಿ, ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಿ, ಸೇವೆ ಸಲ್ಲಿಸಿದರೆ ಇದು ಸಾಧ್ಯವಿದೆ ಎಂದರು.
ಅಪಘಾತ ವಲಯಗಳ ಹತ್ತಿರದಲ್ಲೇ ಟ್ರಾಮಾ ಸೆಂಟರ್ ಗಳನ್ನು ತೆರೆಯಲು ಸರ್ಕಾರ ಮುಂದಾಗಿದೆ. ಗಾಯಾಳುಗಳ ಜೀವ ಉಳಿಸಲು ಗೋಲ್ಡನ್ ಹವರ್ ಬಹಳ ಮುಖ್ಯ ಎನ್ನುವುದನ್ನು ಪರಿಗಣಿಸಿ ಸರ್ಕಾರ ಈ ಕಾರ್ಯಕ್ಕೆ ಮುಂದಾಗಿದೆ ಎಂದರು.
ಶಿವಮೊಗ್ಗ: ಆ.31ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut
ಬಿಜೆಪಿ ಕೇಂದ್ರ ಸರ್ಕಾರದ ಅಡಿಯಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಪರಿವರ್ತನೆ ಪರ್ವ ಆರಂಭ…!