ಬೆಂಗಳೂರು: ರಾಜ್ಯದ ಜನರು ಬೇಸಿಗೆಯ ಬಿಸಿಯಿಂದ ತತ್ತರಿಸಿ ಹೋಗಿದ್ದಾರೆ. ಅಬ್ಬಾ ಸೆಕೆ, ಬಿಸಿಲ ಝಳ ಅಂತ ಬಸವಳಿದು ಹೋಗಿರುವಂತ ರಾಜ್ಯದ ಜನರಿಗೆ ಗುಡ್ ನ್ಯೂಸ್ ಅನ್ನ ಹವಾಮಾನ ಇಲಾಖೆ ನೀಡಿದೆ. ಅದೇ ಇಂದಿನಿಂದ ಮೂರು ದಿನಗಳ ಕಾಲ ಈ ಜಿಲ್ಲೆಯಲ್ಲಿ ಮಳೆಯಾಗಲಿದೆ ಎಂಬುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈ ಕುರಿತಂತೆ ಮಾಹಿತಿ ಬಿಡುಗಡೆ ಮಾಡಿರುವಂತ ಹವಾಮಾನ ಇಲಾಖೆಯು, ಮುಂದಿನ ನಾಲ್ಕು ದಿನಗಳ ಕಾಲ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗಲಿದೆ ಎಂಬುದಾಗಿ ತಿಳಿಸಿದೆ.
ರಾಯಚೂರು, ಬೆಳಗಾವಿ, ಬೀದರ್, ಬಾಗಲಕೋಟೆ ಹಾಗೂ ಗುಲ್ಬರ್ಗಾ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗಲಿದೆ. ಹಾಸನ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಬಳ್ಳಾಪುರ, ಮೈಸೂರು ಜಿಲ್ಲೆಯಲ್ಲೂ ಮಳೆಯಾಗಲಿದೆ ಅಂತ ತಿಳಿಸಿದೆ.
ಮಂಡ್ಯ, ಚಿತ್ರದುರ್ಗ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಶಿವಮೊಗ್ಗ ಹಾಗೂ ಮಂಡ್ಯ ಜಿಲ್ಲೆಯಲ್ಲಿ ಗುಡುಗು ಮಿಂಚಿನಿಂದ ಕೂಡಿದಂತ ಮಳೆಯಾಗಲಿದೆ ಎಂಬುದಾಗಿ ಮುನ್ಸೂಚನೆ ನೀಡಿದೆ.