ಬೆಂಗಳೂರು : ರಾಜ್ಯದ ಗ್ರಾಮೀಣ ಜನತೆಗೆ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆಯ ಮೋಜಿನಿ ವ್ಯವಸ್ಥೆಯಡಿರುವ ಸೇವೆಗಳನ್ನು ಗ್ರಾಮ ಪಂಚಾಯತಿಗಳ ಬಾಪೂಜಿ ಸೇವಾ ಕೇಂದ್ರಗಳಲ್ಲಿ ಒದಗಿಸುವ ಬಗ್ಗೆ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.
ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆಯ ಮೋಜಿನಿ ವ್ಯವಸ್ಥೆಯಡಿ “11 ಇ ನಕ್ಷೆ”, “ತತ್ಕಾಲ್ ಪೋಡಿ”, “ಭೂ ಪರಿವರ್ತನೆಗಾಗಿ ಅರ್ಜಿ” ಮತ್ತು “ಹದ್ದುಬಸ್ತು” ಸೇವೆಗಳನ್ನು ನೀಡಲಾಗುತ್ತಿದೆ. ಸದರಿ ಸೇವೆಗಳಿಗೆ ಅರ್ಜಿ ಸಲ್ಲಿಸಲು ಜನರು ತಾಲ್ಲೂಕು ಹಂತದಲ್ಲಿರುವ ತಹಶೀಲ್ದಾರ್ ಕಚೇರಿಗೆ ಅಥವಾ ಹೋಬಳಿ ಮಟ್ಟದಲ್ಲಿರುವ ಅಟಲ್ಜಿ ಜನಸ್ನೇಹಿ ಕೇಂದ್ರಗಳಿಗೆ ಭೇಟಿ ನೀಡಬೇಕಾಗಿರುತ್ತದೆ.
ಪ್ರತಿಯೊಂದು ತಾಲ್ಲೂಕು ಗಳು 30-40 ಗ್ರಾಮ ಪಂಚಾಯತಿಗಳನ್ನು ಹಾಗೂ ಪ್ರತಿಯೊಂದು ಹೋಬಳಿಯಲ್ಲಿ ಆರರಿಂದ ಏಳು ಗ್ರಾಮ ಪಂಚಾಯತಿಗಳನ್ನು ಹೊಂದಿರುತ್ತದೆ. ಈ ಎಲ್ಲಾ ಗ್ರಾಮ ಪಂಚಾಯತಿಯ ಸುಮಾರು 20-50 ಸಾವಿರ ಜನರು ಸರ್ಕಾರಿ ಸೇವೆಯನ್ನು ತಾಲ್ಲೂಕು ಅಥವಾ ಹೋಬಳಿ ಮಟ್ಟದಲ್ಲಿ ಪಡೆಯಬೇಕಾದುದರಿಂದ ಜನಸಂದಣಿ ಹೆಚ್ಚುವುದರ ಜೊತೆಗೆ ಕೇಂದ್ರದಲ್ಲಿ ತ್ವರಿತ ಗತಿಯಲ್ಲಿ ಸೇವೆಯನ್ನು ಒದಗಿಸುವುದಕ್ಕೆ ತೊಡಕಾಗುತ್ತಿತ್ತು. ಜೊತೆಗೆ ಸಾರ್ವಜನಿಕರು ಸೇವೆಗಳನ್ನು ಪಡೆಯಲು ಸಾಕಷ್ಟು ದೂರ ಕ್ರಮಿಸ ಬೇಕಾದುದರಿಂದ ಸಾಕಷ್ಟು ಹಣ ವ್ಯಯಿಸಬೇಕಾಗುತ್ತಿತ್ತು.
ಈ ಸಮಸ್ಯೆಗೆ ಪರಿಹಾರವಾಗಿ, ಗ್ರಾಮೀಣ ಜನತೆ ತಮಗೆ ಅವಶ್ಯವಿರುವ ಭೂಮಾಪನ ಕಂದಾಯ ವ್ಯವಸ್ಥೆ ಮತುತ ಭೂದಾಖಲೆಗಳ ಇಲಾಖೆಯ ಮೋಜಿನಿ ವ್ಯವಸ್ಥೆಯಡಿರುವ ಸದರಿ ಸೇವೆಗಳನ್ನು ಮತ್ತಷ್ಟು ದಕ್ಷ ಹಾಗೂ ತ್ವರಿತ ರೀತಿಯಲ್ಲಿ ಗ್ರಾಮ ಪಂಚಾಯತಿಯಲ್ಲೇ ಪಡೆದುಕೊಳ್ಳುವ ನಿಟ್ಟಿನಲ್ಲಿ ಸ್ಥಾಪಿಸಲಾಗಿರುವ ಗ್ರಾಮ ಪಂಚಾಯತಿಯ ಬಾಪೂಜಿ ಸೇವಾ ಕೇಂದ್ರಗಳಲ್ಲಿ ಒದಗಿಸಲು ಸರ್ಕಾರವು ನಿರ್ಧರಿಸಿದೆ.
ಇದರಿಂದಾಗಿ, ಗ್ರಾಮೀಣಾ ಪ್ರದೇಶದಲ್ಲಿ ವಾಸವಾಗಿರುವ 3.7 ಕೋಟಿ ಜನರಿಗೆ ಅಂದರೆ 78 ಲಕ್ಷ ಕುಟುಂಬಗಳು ಭೂಮಾಪನ ಕಂದಾಯ ವ್ಯವಸ್ಥೆ ಮತುತ ಭೂದಾಖಲೆಗಳ ಇಲಾಖೆಯ ಮೋಜಿನಿ ವ್ಯವಸ್ಥೆಯಡಿರುವ “11 ಇ ನಕ್ಷೆ”, “ತತ್ಕಾಲ್ ಪೋಡಿ”, “ಭೂ ಪರಿವರ್ತನೆಗಾಗಿ ಅರ್ಜಿ” ಮತ್ತು “ಹದ್ದುಬಸ್ತು” ಸೇವೆಗಳನ್ನು ಪಡೆಯುವಲ್ಲಿ ಗ್ರಾಮ ಪಂಚಾಯತಿಯ ಬಾಪೂಜಿ ಸೇವಾ ಕೇಂದ್ರಗಳು ಮಹ್ಮತದ ಪಾತ್ರವಹಿಸಲಿವೆ.
ಸಾರ್ವಜನಿಕರು ಇನ್ನೂ ಮುಂದೆ ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆಯ ಮೋಜಿನಿ ವ್ಯವಸ್ಥೆಯಡಿರುವ “11 ಇ ನಕ್ಷೆ”, “ತತ್ಕಾಲ್ ಪೋಡಿ”, “ಭೂ ಪರಿವರ್ತನೆಗಾಗಿ ಅರ್ಜಿ” ಮತ್ತು “ಹದ್ದುಬಸ್ತು”ಸೇವೆಗಳಿಗೆ ಅರ್ಜಿ ಸಲ್ಲಿಸಿ, ಪಡೆಯಲು ತಾಲ್ಲೂಕು ಹಂತದಲ್ಲಿರುವ ತಹಶೀಲ್ದಾರ್ ಕಚೇರಿಗೆ ಅಥವಾ ಹೋಬಳಿ ಮಟ್ಟದಲ್ಲಿರುವ ಅಟಲ್ಜಿ ಜನಸ್ನೇಹಿ ಕೇಂದ್ರಗಳಿಗೆ ಭೇಟಿ ನೀಡದೇ, ಗ್ರಾಮ ಪಂಚಾಯತಿಯ ಬಾಪೂಜಿ ಸೇವಾ ಕೇಂದ್ರಗಳಲ್ಲಿಯೇ ಸದರಿ ಸೇವೆಗಳನ್ನು ಪಡೆಯಬಹುದಾಗಿದೆ.
ಅದರಂತೆ, ಗ್ರಾಮ ಪಂಚಾಯತಿಗಳ ಬಾಪೂಜಿ ಸೇವಾ ಕೇಂದ್ರಗಳಲ್ಲಿ “11 ಇ ನಕ್ಷೆ”, “ತತ್ಕಾಲ್ ಪೋಡಿ”, “ಭೂ ಪರಿವರ್ತನೆಗಾಗಿ ಅರ್ಜಿ” ಮತ್ತು “ಹದ್ದುಬಸ್ತು” ಸೇವೆಗಳಿಗೆ ಅರ್ಜಿಗಳನ್ನು ಸ್ವೀಕರಿಸಿ, ಉಲ್ಲೇಖ 1 ಮತ್ತು 2 ರ ಆದೇಶಗಳಂತೆ, ಈ ಕೆಳಗಿನ ಪಟ್ಟಿಯಲ್ಲಿ ತಿಳಿಸಲಾಗಿರುವ ಅರ್ಜಿ ಶುಲ್ಕವನ್ನು ಪಡೆಯಲು ಆದೇಶಿಸಿದೆ.









