ಬೆಂಗಳೂರು : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗೆ ಸಂಬಂಧಿಸಿದ ಕುಂದು–ಕೊರತೆಗಳು ಹಾಗೂ ವಿವಿಧ ಸಮಸ್ಯೆಗಳನ್ನು ದಾಖಲಿಸಲು ಇದ್ದ ಪ್ರತ್ಯೇಕ ಕರೆ ಸಂಖ್ಯೆಗಳನ್ನು ಒಗ್ಗೂಡಿಸಿ ಪಂಚಮಿತ್ರ ಸಹಾಯವಾಣಿ ಕೇಂದ್ರವನ್ನು ಸ್ಥಾಪಿಸಲಾಗಿದೆ.
ಸಾರ್ವಜನಿಕರು ಪಂಚಮಿತ್ರ ಸಹಾಯವಾಣಿ ಸಂಖ್ಯೆ 8277506000ಗೆ ಕರೆ ಮಾಡಿ ನಿಮ್ಮ ಸಮಸ್ಯೆಗಳಿಗೆ ತಕ್ಷಣ ಪರಿಹಾರ ಪಡೆಯಬಹುದು.
ಈ ಸಮಸ್ಯೆಗಳಿಗೆ ತಕ್ಷಣವೇ ಸಿಗಲಿದೆ ಪರಿಹಾರ
ಗ್ರಾಮ ಪಂಚಾಯಿತಿ ಆಸ್ತಿ ತೆರಿಗೆ ಪಾವತಿ
ಜನನ ಹಾಗೂ ಮರಣ ಪ್ರಮಾಣ ಪತ್ರ ಮಾಹಿತಿ
ನಿಮ್ಮ ಗ್ರಾಮದ ಕುಡಿಯು ನೀರಿನ ಸಮಸ್ಯೆ
ಮಹತ್ಮಾ ಗಾಂಧಿ ನರೇಗಾ ಯೋಜನೆಯಡಿ ಜಾಬ್ ಕಾರ್ಡ್ ಪಡೆಯಲು ಬೇಡಿಕೆ ಸಲ್ಲಿಸಲು
ನಿಮ್ಮ ಗ್ರಾಮದ ರಸ್ತೆ ದುರಸ್ಥಿ ಮಾಡಿಸಲು ದೂರು ನೀಡಬೇಕೇ?
ಮೇಲ್ಕಂಡ ಎಲ್ಲ ಸಮಸ್ಯೆಗಳಿಗೆ ದೂರು ಸಲ್ಲಿಸಲು ಸಾರ್ವಜನಿಕರು ಪಂಚಮಿತ್ರ ಸಹಾಯವಾಣಿ ಸಂಖ್ಯೆ 8277506000ಗೆ ಕರೆ ಮಾಡಿ, ಬೆಳಗ್ಗೆ 6 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಸಾರ್ವಜನಿಕರು ಕರೆ ಮಾಡಬಹುದು.