ಬೆಂಗಳೂರು : ರಾಜ್ಯ ಸರ್ಕಾರವು ಗ್ರಾಮೀಣ ಜನತೆಗೆ ಸಿಹಿಸುದ್ದಿ ನೀಡಿದ್ದು, ಇನ್ಮುಂದೆ ರಾಜ್ಯದ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ವಾಧೀನಾನುಭವ ಪ್ರಮಾಣಪತ್ರ (OC) ಪಡೆಯದ 1,200 ಚದರ ಅಡಿ (30/40) ನಿವೇಶನದಲ್ಲಿ ನಿರ್ಮಿಸಲಾದ ವಸತಿ ಕಟ್ಟಡಗಳಿಗೆ ವಿದ್ಯುತ್ ಮತ್ತು ನೀರಿನ ಸಂಪರ್ಕ ಪಡೆಯಲು ಅವಕಾಶ ಕಲ್ಪಿಸಿ ಸಚಿವ ಸಂಪುಟಸಭೆಯಲ್ಲಿ ಅನುಮೋದನೆ ನೀಡಲಾಗಿದೆ.
ಹೌದು, ರಾಜ್ಯದ ಗ್ರಾಮೀಣ ಭಾಗದಲ್ಲಿ ಒಸಿ ಇಲ್ಲದ ಕಾರಣಕ್ಕಾಗಿ ವಿದ್ಯುತ್ ಸಂಪರ್ಕ, ನೀರಿನ ಸಂಪರ್ಕ ಪಡೆಯಲಾಗದೆ ಸಮಸ್ಯೆ ಅನುಭವಿಸುತ್ತಿರುವ ಲಕ್ಷಾಂತರ ಮನೆ ಮಾಲೀಕರಿಗೆ ಇದು ಅನುಕೂಲವಾಗಲಿದೆ. 1,200 ಚದರ ಅಡಿ ವಿಸ್ತೀರ್ಣದವರೆಗಿನ ನಿವೇಶನಗಳಲ್ಲಿ ನಿರ್ಮಿಸಲಾಗಿರುವ ವಸತಿ ಕಟ್ಟಡಗಳು ಸ್ವಾಧೀನಾನು ಭವ ಪತ್ರ ಪಡೆಯುವುದರಿಂದ ವಿನಾಯಿತಿ ದೊರೆಯ ಲಿದೆ.
ರಾಜ್ಯ ಸರ್ಕಾರವು ಉಪವಿಧಿಗಳ ಅಡಿಯಲ್ಲಿ ಒಸಿ, ಸಿಸಿ ಇಲ್ಲದ ವಸತಿ ಕಟ್ಟಡಗಳಿಗೆ ವಿದ್ಯುತ್ ಸಂಪರ್ಕ, ನೀರಿನ ಸಂಪರ್ಕ ನೀಡಲು ಅವಕಾಶ ಕಲ್ಪಿಸಿದೆ. ಈ ಮೂಲಕ ಗ್ರಾಮೀಣ ಭಾಗದ ಕಟ್ಟಡ ಮಾಲೀಕರಿಗೆ ಸಿಹಿಸುದ್ದಿ ಸಿಕ್ಕಂತಾಗಿದೆ.








