ಬೆಳಗಾವಿ ಸುವರ್ಣಸೌಧ: ಬಸವ ವಸತಿ ಯೋಜನೆಗೆ ಈಗ ನೀಡುತ್ತಿರುವ ಸಹಾಯಧನವು ಸಾಕಾಗುತ್ತಿಲ್ಲ ಎಂಬ ವಿಚಾರ ಸರ್ಕಾರದ ಗಮನಕ್ಕೆ ಬಂದಿದ್ದು, ಆಯ್ಕೆಯಾದ ಫಲಾನುಭವಿಗಳಿಗೆ ಕನಿಷ್ಠ 3 ರಿಂದ 4 ಲಕ್ಷ ರೂ.ವರೆಗಾದರೂ ಸಹಾಯಧನ ಕೊಡುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ ಎಂಬುದಾಗಿ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ.
ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ಪ್ರದೀಪ್ ಶೆಟ್ಟರ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ವಸತಿ ಸಚಿವರಾದ ಜಮೀರ್ ಅಹ್ಮದ್ ಖಾನ್ ಅವರ ಉತ್ತರಿಸಿದರು.
ಗ್ರಾಮೀಣ ಪ್ರದೇಶಗಳಲ್ಲಿ ಮನೆ ನಿರ್ಮಾಣ ಮಾಡಲು ಬೇಕಾಗುವ ಕಚ್ಚಾ ವಸ್ತುಗಳ ಬೆಲೆ ದುಬಾರಿಯಾಗಿದ್ದು, ಆದ್ದರಿಂದ ವಿವಿಧ ವಸತಿ ಯೋಜನೆಗಳಡಿ ಫಲಾನುಭವಿಗಳಿಗೆ ಈಗ ನೀಡಲಾಗುತ್ತಿರುವ ಸಹಾಯಧನ ಹೆಚ್ಚಿಸುವ ಪ್ರಸ್ತಾವನೆಯು ಪರಿಶೀಲನೆಯಲ್ಲಿರುತ್ತದೆ ಎಂದರು.
ಈ ಸಹಾಯಧನ ಹೆಚ್ಚಳ ಸಂಬಂಧ ಈಗಾಗಲೇ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿದ್ದು, ಈ ಬಗ್ಗೆ ಬರುವ ಬಜೆಟ್‍ನಲ್ಲಿ ಪರಿಗಣಿಸುವ ಬಗ್ಗೆ ಪರಿಶೀಲಿಸುವುದಾಗಿ ತಿಳಿಸಿದ್ದಾರೆ.
ಪ್ರಸ್ತುತ ಕೇಂದ್ರ ಸರ್ಕಾರದ ವಸತಿ ಯೋಜನೆಗಳನ್ನು ಹೊರತುಪಡಿಸಿ ಉಳಿದ ಯಾವುದೇ ವಸತಿ ಯೋಜನೆಗಳಡಿ ಅನುದಾನ ಬಿಡುಗಡೆ ಮಾಡಲು ಬಾಕಿ ಇರುವುದಿಲ್ಲ. 2025-26ನೇ ಸಾಲಿನಲ್ಲಿ ರಾಜ್ಯದಲ್ಲಿ ವಿವಿಧ ವಸತಿ ಯೋಜನೆಗಳಡಿ ಅಕ್ಟೋಬರ್-2025ರ ಅಂತ್ಯಕ್ಕೆ 1324.26 ರೂ ಅನುದಾನವನ್ನು ಅರ್ಹ ಫಲಾನುಭವಿಗಳಿಗೆ ಬಿಡುಗಡೆ ಮಾಡಲಾಗಿದೆ ಎಂದು ಹೇಳಿದರು.
ಬಸವ ವಸತಿ ಯೋಜನೆಗೆ ಈಗ ನೀಡುತ್ತಿರುವ ಸಹಾಯಧನವು ಸಾಕಾಗುತ್ತಿಲ್ಲ ಎಂಬ ವಿಚಾರ ಸರ್ಕಾರದ ಗಮನಕ್ಕೆ ಬಂದಿದ್ದು, ಆಯ್ಕೆಯಾದ ಫಲಾನುಭವಿಗಳಿಗೆ ಕನಿಷ್ಠ 3 ರಿಂದ 4 ಲಕ್ಷ ರೂ.ವರೆಗಾದರೂ ಸಹಾಯಧನ ಕೊಡುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ.
ಗ್ರಾಮೀಣ ಪ್ರದೇಶಗಳಲ್ಲಿ ಮನೆ ನಿರ್ಮಾಣ ಮಾಡಲು ಬೇಕಾಗುವ ಕಚ್ಚಾ ವಸ್ತುಗಳ ಬೆಲೆ ದುಬಾರಿಯಾಗಿದ್ದು, ಆದ್ದರಿಂದ… pic.twitter.com/8BhD49UeNd
— DIPR Karnataka (@KarnatakaVarthe) December 10, 2025
ರಾಜ್ಯದ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಬಾಲಕಿಯರ ವಿದ್ಯಾರ್ಥಿನಿಲಯಕ್ಕೆ ಹೊಸ ಕಟ್ಟಡ
ಹೀಗಿದೆ ಇಂದು ಬೆಳಗಾವಿಯ ವಿಧಾನಸಭೆಯಲ್ಲಿ ಮಂಡನೆಯಾಗಿ ಅಂಗೀಕರಿಸಿದ ವಿಧೇಯಕಗಳ ಪಟ್ಟಿ








