ಬೆಂಗಳೂರು: ರಾಜ್ಯದ ಆಶಾ ಕಾರ್ಯಕರ್ತೆಯರಿಗೆ 2025-26ನೇ ಸಾಲಿನ ಎರಡನೇ ತ್ರೈಮಾಸಿಕ ಕಂತಿನ ಗೌರವಧನವನ್ನು ಪಾವತಿಸಲು ಅನುಧಾನವನ್ನು ಬಿಡುಗಡೆ ಮಾಡಿ ಮಾಡಿ ಸರ್ಕಾರ ಆದೇಶಿಸಿದೆ. ಈ ಮೂಲಕ ರಾಜ್ಯದ ಆಶಾ ಕಾರ್ಯಕರ್ತೆಯರಿಗೆ ಸಿಹಿಸುದ್ದಿಯನ್ನು ನೀಡಿದೆ.
ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಸಿ ಆದೇಶಿಸಿದ್ದು, ನಿರ್ದೇಶಕರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು ಇವರ ಪತ್ರದಲ್ಲಿ ಆಶಾ ಕಾರ್ಯಕರ್ತೆಯರಿಗೆ 2025-26ನೇ ಸಾಲಿನ ಆಯವ್ಯಯದಲ್ಲಿ ಲೆಕ್ಕಶೀರ್ಷಿಕೆ: 2211-00-103-0-11-324 ರಡಿಯಲ್ಲಿ ರೂ. 27100.00 ಲಕ್ಷಗಳ ಅನುದಾನವನ್ನು ನಿಗದಿಪಡಿಸಲಾಗಿದ್ದು, ಸದರಿ ಅನುದಾನದಲ್ಲಿ ಮೊದಲನೇ ತ್ರೈಮಾಸಿಕ ಗೌರವಧನ ಅನುದಾನ ಬಿಡುಗಡೆ ಮಾಡುವಂತೆ ಕೋರಲಾಗಿದೆ ಎಂದಿದ್ದಾರೆ.
ಆರ್ಥಿಕ ಇಲಾಖೆಯ ಹಿಂಬರಹದಲ್ಲಿ 41000 ಆಶಾ ಕಾರ್ಯಕರ್ತೆಯರಿಗೆ ಮಾಸಿಕ ಗೌರವಧನ ಪತಿ ಮಾಹೆಗೆ ರೂ.5000/- ರಂತೆ ಒಟ್ಟು ರೂ. 24600.00 ಲಕ್ಷಗಳ ಅನುದಾನ ನಿಗದಿಪಡಿಸಲಾಗಿದೆ ಎಂದು ಹೇಳಿದೆ.
ಆದೇಶ ಸಂಖ್ಯೆ:ಎಫ್.ಡಿ. 01 ಟಿ.ಎಫ್.ಪಿ. 2025, ದಿನಾಂಕ: 02.04.2025 ರಲ್ಲಿ 2025-26ನೇ ಸಾಲಿನಲ್ಲಿ ಇಲಾಖೆಗಳಿಗೆ ಒದಗಿಸಲಾದ ಅನುದಾನದಲ್ಲಿ ಮೊದಲನೇ ತ್ರೈಮಾಸಿಕ ಕಂತಿನ (ಏಪ್ರಿಲ್ ನಿಂದ ಜೂನ್ ಮಾಹೆಯವರೆಗೆ) ಅನುದಾನವನ್ನು ಬಿಡುಗಡೆ ಮಾಡಲು ಇಲಾಖಾ ಅವರ ಮುಖ್ಯ ಕಾರ್ಯದರ್ಶಿ/ಪ್ರಧಾನ ಕಾರ್ಯದರ್ಶಿ/ಕಾರ್ಯದರ್ಶಿಗಳಿಗೆ ಆರ್ಥಿಕ ಅಧಿಕಾರ ಪ್ರತ್ಯಾಯೋಜಿಸಲಾಗಿದೆ.
ಪುಸ್ತಾವನೆಯನ್ನು ಕೂಲಂಕುಷವಾಗಿ ಪರಿಶೀಲಿಸಿ, 2025-26ನೇ ಸಾಲಿನಲ್ಲಿ ಆಶಾ ಕಾರ್ಯಕರ್ತೆಯರಿಗೆ ಗೌರವಧನ ಪಾವತಿಸಲು ಲೆಕ್ಕಶೀರ್ಷಿಕೆ 2211-00-103-0-11-324 (ಗೌರವಧನ) ರಡಿ ಎರಡನೇ ತ್ರೈಮಾಸಿಕ ಅನುದಾನ (ಜುಲೈ ಮಾಹೆಯಿಂದ ಸೆಪ್ಟೆಂಬರ್ ಮಾಹೆಯ) ರೂ. 6150.00 ಲಕ್ಷ (ಆರು ಸಾವಿರದ ಒಂದು ನೂರ ಐವತ್ತು ಲಕ್ಷ ರೂಪಾಯಿಗಳು ಮಾತ್ರ) ಗಳನ್ನು ಬಿಡುಗಡೆ ಮಾಡಲಾಗಿದೆ ಎಂದಿದ್ದಾರೆ.
ಸರ್ಕಾರವು ಬಿಡುಗಡೆ ಮಾಡಿರುವ ಅನುದಾನವನ್ನು ಯಾವ ಉದೇಶಕ್ಕಾಗಿ ಬಿಡುಗಡೆ ಮಾಡಲಾಗಿದೆಯೋ ಅದೇ ಉದ್ದೇಶಕ್ಕೆ ಮಾತ್ರ ಬಳಸಿಕೊಳ್ಳುವ ಷರತ್ತುಗಳಿಗೊಳಪಟ್ಟಿದ್ದು, ನ್ಯಾಯಸಮ್ಮತವಾಗಿ ಬಳಸಿಕೊಂಡಿರುವ ಬಗ್ಗೆ ಸರ್ಕಾರಕ್ಕೆ ವರದಿ ಸಲ್ಲಿಸತಕ್ಕದ್ದು ಹಾಗೂ ಈ ಅನುದಾನವನ್ನು ನಿಯಮಿತವಾಗಿ ಖಜಾನೆ ಮೂಲಕ ಮಾತ್ರ ವ್ಯವಹರಿಸತಕ್ಕದ್ದು. ಈ ಆದೇಶವನ್ನು ಆದೇಶ ಸಂಖ್ಯೆ, ಎಫ್.ಡಿ. 01 ಟಿ.ಎಫ್.ಪಿ. 2025, ದಿನಾಂಕ:02.04.2025 ರಲ್ಲಿ ನೀಡಿರುವ ಪ್ರತ್ಯಾಯೋಜಿಸಲಾದ ಅಧಿಕಾರದನ್ವಯ ಹೊರಡಿಸಲಾಗಿದೆ ಎಂದು ತಿಳಿಸಿದ್ದಾರೆ.