ಬೆಂಗಳೂರು : ಕಾರ್ಮಿಕ ಇಲಾಖೆ ಮಂಡಳಿಯು 2025-26 ನೇ ಸಾಲಿನ ಶೈಕ್ಷಣಿಕ ಸಹಾಯಧನಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಿದೆ.
ಮಂಡಳಿಯಲ್ಲಿ 31/05/2025 ರ ಪೂರ್ವದಲ್ಲಿ ನೋಂದಾಯಿತರಾದ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳು ಶೈಕ್ಷಣಿಕ ಸಹಾಯಧನಕ್ಕಾಗಿ ಅರ್ಜಿ ಸಲ್ಲಿಸಲು ಅರ್ಹರಾಗಿದ್ದು, ಅರ್ಜಿ ಸಲ್ಲಿಸಲು 31/10/2025 ಕೊನೆ ದಿನಾಂಕವಾಗಿದ್ದು, https://ssp.karnataka.gov.in/ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಕೆ ಹೇಗೆ?
ಅರ್ಹ ಕಾರ್ಮಿಕರು ತಮ್ಮ ಮಕ್ಕಳ ವಿದ್ಯಾಭ್ಯಾಸಕ್ಕೆ ಸಹಾಯಧನ ಪಡೆಯಲು ನಿಗದಿತ ಕಾಲಮಿತಿಯಲ್ಲಿ ಎಸ್ಎಸ್ಪಿ (State Scholarship Portal) ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಕೊನೆ ದಿನಾಂಕ
31/10/2025
ಅರ್ಜಿ ಸಲ್ಲಿಸುವ ವೆಬ್ ಸೈಟ್
https://ssp.karnataka.gov.in/
ಹೆಚ್ಚಿನ ಮಾಹಿತಿಗಾಗಿ ಕಾರ್ಮಿಕ ಸಹಾಯವಾಣಿ 155214 ಸಂಪರ್ಕಿಸಬಹುದು.