Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಹಾಸನದಲ್ಲಿ ಹಲ್ಲಿ ಬಿದ್ದ ಊಟ ಮಾಡಿ 15ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥ : ಆಸ್ಪತ್ರೆಗೆ ದಾಖಲು!

BREAKING : ಹಾರ್ಮುಜ್ ಜಲಸಂಧಿ ಬಳಿ ವಾಣಿಜ್ಯ ನೌಕೆ ಮೇಲೆ ಅಮೆರಿಕ ಕ್ಷಿಪಣಿ ದಾಳಿ: ಮೂವರು ಭಾರತೀಯ ನಾವಿಕರು ದುರ್ಮರಣ

ALERT : ದಿನವೂ `ಪ್ಲಾಸ್ಟಿಕ್ ಬಾಟಲಿ ನೀರು’ ಕುಡಿಯುವವರೇ ಎಚ್ಚರ : ಈ 10 ಆರೋಗ್ಯ ಸಮಸ್ಯೆಗಳು ನಿಮ್ಮನ್ನೂ ಕಾಡಬಹುದು!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಕೃಷಿ ಕೆಲಸಕ್ಕೆ ಪ್ರತಿದಿನ 7 ಗಂಟೆ ವಿದ್ಯುತ್ ಪೂರೈಕೆ !
KARNATAKA

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಕೃಷಿ ಕೆಲಸಕ್ಕೆ ಪ್ರತಿದಿನ 7 ಗಂಟೆ ವಿದ್ಯುತ್ ಪೂರೈಕೆ !

By kannadanewsnow57

ಧಾರವಾಡ : ಬೇಸಿಗೆ ಅವಧಿ ಆರಂಭ ಆಗುತ್ತಿರುವದರಿಂದ ಜಿಲ್ಲೆಯಲ್ಲಿ ಕೃಷಿ ಚಟುವಟಿಕೆಗಳಿಗೆ ತೊಂದರೆ ಆಗದಂತೆ ಹೆಸ್ಕಾಂ ಸಂಸ್ಥೆಯವರು ಕ್ರಮವಹಿಸಬೇಕು. ಸರಕಾರದ ನಿಯಮದಂತೆ ಕೃಷಿ ಪಂಪ್ಸೆಟ್ಗಳಿಗೆ ಪ್ರತಿದಿನ 7 ಗಂಟೆ ವಿದ್ಯುತ್ ಪೂರೈಸಿ, ರೈತರಿಗೆ ಅನುಕೂಲವಾಗುವಂತೆ ಆದಷ್ಟು ಹಗಲು ಹೊತ್ತಿನಲ್ಲಿ ಅಥವಾ ಸಂಜೆ ಹೊತ್ತಿನಲ್ಲಿ ವಿದ್ಯುತ್ ಪೂರೈಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ಹೇಳಿದರು.

ಜಿಲ್ಲಾಧಿಕಾರಿಗಳ ಕಚೇರಿ ನೂತನ ಸಭಾಂಗಣದಲ್ಲಿ ಹೆಸ್ಕಾಂ ಸಂಸ್ಥೆಯ ವಿವಿಧ ಕಾಮಗಾರಿಗಳ ಪ್ರಗತಿ ಹಾಗೂ ಬೇಸಿಗೆ ಅವಧಿಯ ವಿದ್ಯುತ್ ಪೂರೈಕೆ ಸಿದ್ದತೆ ಕುರಿತು ಹೆಸ್ಕಾಂ ಅಧಿಕಾರಿಗಳೊಂದಿಗೆ ಸಭೆ ಜರುಗುಸಿ, ಮಾತನಾಡಿದರು ಅವರು, ಜಿಲ್ಲೆಯಲ್ಲಿ 67 ಕೃಷಿ ವಿದ್ಯುತ್ ಫೀಡರ್ಗಳಿವೆ. ಇದರಲ್ಲಿ 41 ಫೀಡರ್ಗಳಿಂದ ಬೆಳಿಗ್ಗೆ 7 ರಿಂದ ಸಂಜೆ 4 ಗಂಟೆಯೊಳಗೆ, 12 ಫೀಡರ್ಗಳಿಗೆ ಸಂಜೆ 6 ರಿಂದ ರಾತ್ರಿ 9 ಗಂಟೆ ಹಾಗೂ ರಾತ್ರಿ 10 ರಿಂದ ಮಧ್ಯರಾತ್ರಿ 1 ಗಂಟೆಯೊಳಗೆ ಮತ್ತು 8 ಫೀಡರ್ಗಳಿಂದ ಬೆಳಿಗ್ಗೆ 6 ರಿಂದ 10 ಗಂಟೆವರೆಗೆ ಮತ್ತು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ, ಹೀಗೆ ನಿಗದಿತ ಫೀಡರಗಳಿಂದ ವಿವಿಧ ಅವಧಿಯಲ್ಲಿ ಒಟ್ಟು 7 ತಾಸು ಕೃಷಿ ಚಟುವಟಿಕೆಗಳಿಗಾಗಿ ವಿದ್ಯುತ್ ಪೂರೈಸಲಾಗುತ್ತಿದೆ ಎಂದು ಹೆಸ್ಕಾಂ ಅಧಿಕಾರಿಗಳು ತಿಳಿಸಿದ್ದಾರೆ ಎಂದು ಸಚಿವರು ಹೇಳಿದರು.

ಹಿಂಗಾರು ಗೊಧಿ, ಬತ್ತ, ಕಬ್ಬು ಬೆಳೆಗಳಿಗೆ ನೀರಿನ ಅಗತ್ಯವಿದ್ದು, ರೈತರು ನೀರಾವರಿಗಾಗಿ ಕೊಳವೆಬಾವಿಗಳ ಹೆಚ್ಚು ಅವಲಂಬನೆ ಆಗಿದ್ದಾರೆ. ಕಲಘಟಗಿ, ಅಳ್ನಾವರ ಮತ್ತು ಜಿಲ್ಲೆಯ ಇತರ ಭಾಗಗಳಲ್ಲಿ ಸರಿಯಾಗಿ ವಿದ್ಯುತ್ ಪೂರೈಸುತ್ತಿಲ್ಲ, ತಡ ರಾತ್ರಿ ವಿದ್ಯುತ್ ನೀಡುವದರಿಂದ ನೀರು ಹಾಯಿಸಲು ತೊಂದರೆ ಆಗುತ್ತಿದೆ ಎಂದು ರೈತರು ಕರೆ ಮಾಡಿ, ಸಮಸ್ಯೆ ಹೇಳುತ್ತಿದ್ದಾರೆ ಎಂದರು.

ಹೆಸ್ಕಾಂ ಅಧಿಕಾರಿಗಳು ವಿದ್ಯುತ್ ಪೂರೈಕೆಯನ್ನು ಶಿಪ್ಟ್ ಆಧಾರದಲ್ಲಿ ಮಾಡಿದರೂ ಪರವಾಗಿಲ್ಲ, ಆದರೆ ತೀರಾ ಮಧ್ಯರಾತ್ರಿ ವಿದ್ಯುತ್ ಪೂರೈಸಿದರೆ, ರಾತ್ರಿ ಹೊತ್ತಲ್ಲಿ ರೈತರಿಗೆ ತೊಂದರೆ ಆಗುತ್ತದೆ. ಇದನ್ನು ಪರಿಶೀಲಿಸಿ ಕ್ರಮವಹಿಸಬೇಕು ಎಂದು ಸಚಿವ ಸಂತೋಷ ಲಾಡ್ ಅವರು ತಿಳಿಸಿದರು.

ಅತೀ ಹೆಚ್ಚು ಸಮಸ್ಯೆ ಉಂಟಾಗುತ್ತಿರುವ ತಬಕದಹೊನ್ನಳ್ಳಿ ವಿದ್ಯುತ್ ವಿತರಣಾ ಕೇಂದ್ರ ಉನ್ನತಿಕರಿಸುವ ಕಾರ್ಯ ಪ್ರಗತಿಯಲ್ಲಿದೆ. ಜಿಲ್ಲಾಧಿಕಾರಿಗಳು, ಹೆಸ್ಕಾಂ ಅಧಿಕಾರಿ, ಇಂಜನೀಯರಗಳೊಂದಿಗೆ ತಬಕದಹೊನ್ನಳ್ಳಿ ವಿದ್ಯುತ್ ಸ್ಟೇಶನ್ ಭೇಟಿ ನೀಡಿ, ಕಾಮಗಾರಿ ಪ್ರಗತಿ ಪರಿಶೀಲಿಸಲು ಸಚಿವರು ಸೂಚಿಸಿದರು.

ನಿಗದಿ ಮತ್ತು ಅರಳಿಕಟ್ಟಿ ಕ್ರಾಸ್, ಬಮ್ಮಿಗಟ್ಟಿ ಸೇರಿ ಮೂರು ಗ್ರಾಮಗಳಿಗೆ ಹೊಸದಾಗಿ ವಿದ್ಯುತ್ ವಿತರಣಾ ಕೇಂದ್ರ ಸ್ಥಾಪಿಸಲು ಸರಕಾರದಿಂದ ಈಗಾಗಲೇ ಕ್ರಮಕೈಗೊಳ್ಳಲಾಗಿದೆ. ಟೆಂಡರ್, ಗುತ್ತಿಗೆದಾರ ಸಮಸ್ಯೆಗಳಿಂದ ವಿಳಂಬವಾಗುತ್ತಿದೆ ಎಂದು ಹೇಳಿದ ಸಚಿವರು ಕೆಪಿಟಿಸಿಎಲ್ ನೂತನ ವ್ಯವಸ್ಥಾಪಕ ನಿರ್ದೇಶಕರಾದ ಹಿರಿಯ ಐಎಎಸ್ ಅಧಿಕಾರಿ ವ್ಹಿ. ರಾಮ್ ಪ್ರಸಾತ್ ಮನೋಹರ ಅವರಿಗೆ ದೂರವಾಣಿ ಕರೆ ಮಾಡಿ, ತಕ್ಷಣ ಸಮಸ್ಯೆ ಬಗೆಹರಿಸಲು ಸೂಚಿಸಿದರು.

ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರು ಮಾತನಾಡಿ, ಬೇಡಿಕೆಗಿಂತ ಹೆಚ್ಚು ವಿದ್ಯುತ್ ಲಭ್ಯವಿದೆ. ಹೆಸ್ಕಾಂ ಅಧಿಕಾರಿಗಳು ವಿದ್ಯುತ್ ವಿತರಣೆ ಬಗ್ಗೆ ಸರಿಯಾದ ಕ್ರಮವಹಿಸಬೇಕು. ಕಾಮಗಾರಿಗಳನ್ನು ತೀವ್ರಗೊಳಿಸಿ, ಬೇಗ ಮುಗಿಸಬೇಕು. ರೈತರು ಟಿಸಿ ಬಯಸಿದಲ್ಲಿ ಬೇಗನೆ ಪೂರೈಸಬೇಕು. ಅಗತ್ಯಗಳಿಗೆ ಅನುಗುಣವಾಗಿ ಟಿಸಿಗಳ ಹೆಚ್ಚು ದಾಸ್ತಾನು ಹೊಂದಬೇಕು ಎಂದು ಅವರು ತಿಳಿಸಿದರು.

ಹೆಸ್ಕಾಂ ಅಧ್ಯಕ್ಷ ಸೈಯದ್ ಅಜೀಮ್ಪೀರ್ ಎಸ್. ಖಾದ್ರಿ, ಮಹಾನಗರ ಪೆÇಲೀಸ್ ಆಯುಕ್ತ ಎನ್. ಶಶಿಕುಮಾರ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ, ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಅವರು ವೇದಿಕೆಯಲ್ಲಿ ಇದ್ದರು.

ಸಭೆಯಲ್ಲಿ ಹೆಸ್ಕಾಂ ತಾಂತ್ರಿಕ ನಿರ್ದೇಶಕ ಜಗದೀಶ ಸಾವಳಗಿ, ಮುಖ್ಯ ಇಂಜನೀಯರ್ ದೀಪಕ ಕಾಮತ, ಅಧೀಕ್ಷಕ ಇಂಜನೀಯರ್ ಕೆ.ವಿ.ಪಾಗಿ, ಕೆಪಿಟಿಸಿಎಲ್ ಅಧೀಕ್ಷಕ ಅಭಿಯಂತರ ಶಿಲ್ಪಾ, ಕಾರ್ಯಪಾಲಕ ಅಭಿಯಂತರರಾದ ಎಂ.ಟಿ.ದೊಡಮನಿ, ರವೀಂದ್ರ ಗದಗಕರ, ಸಹಾಯಕ ಕಾರ್ಯಪಾಲಕ ಅಭಿಯಂತರ ಗುಲ್ಜಾರ ಅಹ್ಮದ್, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಕಾರ್ಯಪಾಲಕ ಅಭಿಯಂತರ ವಿ.ಎನ್.ಪಾಟೀಲ ಸೇರಿದಂತೆ ವಿವಿಧ ಇಂಜನೀಯರಗಳು, ಅಧಿಕಾರಿಗಳು ಭಾಗವಹಿಸಿದ್ದರು.

ವಿದ್ಯುತ್ ತಗುಲಿ ಸಾವಿಗಿಡಾಗಿದ್ದ ರೈತನ ಕುಟುಂಬಕ್ಕೆ ಪರಿಹಾರ: ಕಳೆದ 2023 ಜುಲೈ ತಿಂಗಳ ಮಳೆಗಾಲ ಅವಧಿಯಲ್ಲಿ ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ಸಾವಿಗಿಡಾಗಿದ್ದ ಧಾರವಾಡ ತಾಲೂಕಿನ ಸಲಕಿನಕೊಪ್ಪ ಗ್ರಾಮದ ಮೃತ ರೈತ ಮಾರುತಿ ಕೊನಪ್ಪನವರ ಅವರ ಪತ್ನಿ ಮಲ್ಲವ್ವ ಅವರಿಗೆ ಸಚಿವ ಸಂತೋಷ ಲಾಡ ಅವರು ಹೆಸ್ಕಾಂ ಪರವಾಗಿ ರೂ.5 ಲಕ್ಷದ ಪರಿಹಾರ ಚೆಕ್ ವಿತರಿಸಿದರು.

Good news for the state's farmers: 7 hours of electricity supply every day for agricultural work!
Share. Facebook Twitter LinkedIn WhatsApp Email

Related Posts

BREAKING : ಹಾಸನದಲ್ಲಿ ಹಲ್ಲಿ ಬಿದ್ದ ಊಟ ಮಾಡಿ 15ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥ : ಆಸ್ಪತ್ರೆಗೆ ದಾಖಲು!

1 Min Read

ALERT : ದಿನವೂ `ಪ್ಲಾಸ್ಟಿಕ್ ಬಾಟಲಿ ನೀರು’ ಕುಡಿಯುವವರೇ ಎಚ್ಚರ : ಈ 10 ಆರೋಗ್ಯ ಸಮಸ್ಯೆಗಳು ನಿಮ್ಮನ್ನೂ ಕಾಡಬಹುದು!

2 Mins Read

ಶಿವಮೊಗ್ಗ : ಜೈಲಲ್ಲಿದ್ದಾಗ ನೋಡಲು ಬಂದಿಲ್ಲವೆಂದು ಪತ್ನಿಗೆ ಬೆದರಿಸಲು ಕಳುಹಿಸಿದ್ದ ಬುರ್ಖಾಧಾರಿಗಳಿಗೆ ಹಿಗ್ಗಾಮುಗ್ಗಾ ಥಳಿತ!

1 Min Read
Recent News

BREAKING : ಹಾಸನದಲ್ಲಿ ಹಲ್ಲಿ ಬಿದ್ದ ಊಟ ಮಾಡಿ 15ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥ : ಆಸ್ಪತ್ರೆಗೆ ದಾಖಲು!

BREAKING : ಹಾರ್ಮುಜ್ ಜಲಸಂಧಿ ಬಳಿ ವಾಣಿಜ್ಯ ನೌಕೆ ಮೇಲೆ ಅಮೆರಿಕ ಕ್ಷಿಪಣಿ ದಾಳಿ: ಮೂವರು ಭಾರತೀಯ ನಾವಿಕರು ದುರ್ಮರಣ

ALERT : ದಿನವೂ `ಪ್ಲಾಸ್ಟಿಕ್ ಬಾಟಲಿ ನೀರು’ ಕುಡಿಯುವವರೇ ಎಚ್ಚರ : ಈ 10 ಆರೋಗ್ಯ ಸಮಸ್ಯೆಗಳು ನಿಮ್ಮನ್ನೂ ಕಾಡಬಹುದು!

ಶಿವಮೊಗ್ಗ : ಜೈಲಲ್ಲಿದ್ದಾಗ ನೋಡಲು ಬಂದಿಲ್ಲವೆಂದು ಪತ್ನಿಗೆ ಬೆದರಿಸಲು ಕಳುಹಿಸಿದ್ದ ಬುರ್ಖಾಧಾರಿಗಳಿಗೆ ಹಿಗ್ಗಾಮುಗ್ಗಾ ಥಳಿತ!

State News
KARNATAKA

BREAKING : ಹಾಸನದಲ್ಲಿ ಹಲ್ಲಿ ಬಿದ್ದ ಊಟ ಮಾಡಿ 15ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥ : ಆಸ್ಪತ್ರೆಗೆ ದಾಖಲು!

By ಸುರೇಶ್‌ KARNATAKA 1 Min Read

ಹಾಸನ : ಹಲ್ಲಿ ಬಿದ್ದ ಊಟ ಮಾಡಿ ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿರುವ ಘಟನೆ ಹಾಸನದ ಸಾರಾಪುರದ ಕೃಷಿ ವಿಜ್ಞಾನ ಕಾಲೇಜಿನಲ್ಲಿ ಈ…

ALERT : ದಿನವೂ `ಪ್ಲಾಸ್ಟಿಕ್ ಬಾಟಲಿ ನೀರು’ ಕುಡಿಯುವವರೇ ಎಚ್ಚರ : ಈ 10 ಆರೋಗ್ಯ ಸಮಸ್ಯೆಗಳು ನಿಮ್ಮನ್ನೂ ಕಾಡಬಹುದು!

ಶಿವಮೊಗ್ಗ : ಜೈಲಲ್ಲಿದ್ದಾಗ ನೋಡಲು ಬಂದಿಲ್ಲವೆಂದು ಪತ್ನಿಗೆ ಬೆದರಿಸಲು ಕಳುಹಿಸಿದ್ದ ಬುರ್ಖಾಧಾರಿಗಳಿಗೆ ಹಿಗ್ಗಾಮುಗ್ಗಾ ಥಳಿತ!

ಚಿನ್ನ ಖರೀದಿಸುತ್ತಿದ್ದೀರಾ? 916 ಅಂದ್ರೆ ಏನು? ಗೊತ್ತಿಲ್ಲದಿದ್ದರೆ ಭಾರೀ ನಷ್ಟ ಗ್ಯಾರಂಟಿ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.