ಮಂಡ್ಯ : ಈ ವರ್ಷ ಸುಮಾರು 5 ಲಕ್ಷಕ್ಕೂ ಹೆಚ್ಚು ಹೆಕ್ಟೇರ್ ಪ್ರದೇಶದಲ್ಲಿ ಮಳೆಯಿಂದ ಬೆಳೆ ಹಾನಿಯಾಗಿದೆ. ಅವೆಲ್ಲಕ್ಕೂ ಕೂಡಾ ಪರಿಹಾರ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನಲ್ಲಿ ಆಯೋಜಿಸಿದ್ದ ಗಗನಚುಕ್ಕಿ ಜಲಪಾತೋತ್ಸವ -2025 ರಲ್ಲಿ ಪಾಲ್ಗೊಂಡು ಮಾತನಾಡಿದ ಸಿಎಂ ಸಿದ್ದರಾಮಯ್ಯ ಈ ವರ್ಷ ಸುಮಾರು 82 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗಿದ್ದು, ಕಳೆದ ವರ್ಷಕ್ಕಿಂತ ಈ ವರ್ಷ ಹೆಚ್ಚು ಬಿತ್ತನೆ ಆಗಿದೆ. ಸುಮಾರು 5 ಲಕ್ಷಕ್ಕೂ ಹೆಚ್ಚು ಹೆಕ್ಟೇರ್ ಪ್ರದೇಶದಲ್ಲಿ ಮಳೆಯಿಂದ ಬೆಳೆ ಹಾನಿಯಾಗಿದೆ. ಅವೆಲ್ಲಕ್ಕೂ ಕೂಡಾ ಪರಿಹಾರ ನೀಡಲಾಗುವುದು ಎಂದು ಹೇಳಿದ್ದಾರೆ.
ಗಗನಚುಕ್ಕಿ ಜಲಪಾತ ಅಭಿವೃದ್ಧಿಗೆ 6 ಕೋಟಿ ರೂಪಾಯಿ ವೆಚ್ಚ ಮಾಡಲಾಗಿದೆ. ಜನ ಕೂತು ನೋಡಲು ಆಸನಗಳ ವ್ಯವಸ್ಥೆ ಮಾಡಲಾಗಿದೆ. ಹೆಚ್ಚಿನ ಜನರು ಜಲಪಾತ ವೀಕ್ಷಿಸಲು ಬರಬೇಕು. ಕಳೆದ ಮೂರು ವರ್ಷಗಳಲ್ಲಿ 22 ಲಕ್ಷಕ್ಕೂ ಹೆಚ್ಚು ಪ್ರವಾಸಿಗರು ಭೇಟಿ ನೀಡಿದ್ದಾರೆ. ಶಿವನಸಮುದ್ರ ಜಲಾಶಯದಲ್ಲಿ 1902 ರಲ್ಲಿ ಏಷ್ಯಾದಲ್ಲಿಯೇ ಮೊದಲ ಬಾರಿಗೆ ವಿದ್ಯುತ್ ಉತ್ಪಾದನೆ ಮಾಡಿದ ಕೇಂದ್ರ ಎಂಬ ಹೆಗ್ಗಳಿಕೆಯಿದೆ.
ರಾಜ್ಯ ಇಂದು ವಿದ್ಯುತ್ ಉತ್ಪಾದನೆಯಲ್ಲಿ ಸ್ವಾವಲಂಬಿಯಾಗಿದ್ದರೆ ಅದಕ್ಕೆ ಶಿವನಸಮುದ್ರ ಮೂಲ ಕಾರಣ.ಪ್ರಸ್ತುತ ಕರ್ನಾಟಕಕ್ಕೆ ಅಗತ್ಯವಿರುವಷ್ಟು ವಿದ್ಯುತ್ ಉತ್ಪಾದನೆಯಾಗುತ್ತಿದ್ದು, ಅದನ್ನು ಬಳಸಿಕೊಳ್ಳುವ ಕೆಲಸವೂ ಆಗುತ್ತಿದೆ. ಉತ್ಪಾದಿಸಿದ ವಿದ್ಯುತ್ ನಿಂದ ರೈತರಿಗೆ ಉಪಯೋಗವಾಗುತ್ತಿದೆ.
ಗಗನಚುಕ್ಕಿ ಜಲಪಾತ ಅಭಿವೃದ್ಧಿಗೆ 6 ಕೋಟಿ ರೂಪಾಯಿ ವೆಚ್ಚ ಮಾಡಲಾಗಿದೆ. ಜನ ಕೂತು ನೋಡಲು ಆಸನಗಳ ವ್ಯವಸ್ಥೆ ಮಾಡಲಾಗಿದೆ. ಹೆಚ್ಚಿನ ಜನರು ಜಲಪಾತ ವೀಕ್ಷಿಸಲು ಬರಬೇಕು. ಕಳೆದ ಮೂರು ವರ್ಷಗಳಲ್ಲಿ 22 ಲಕ್ಷಕ್ಕೂ ಹೆಚ್ಚು ಪ್ರವಾಸಿಗರು ಭೇಟಿ ನೀಡಿದ್ದಾರೆ. ಶಿವನಸಮುದ್ರ ಜಲಾಶಯದಲ್ಲಿ 1902 ರಲ್ಲಿ ಏಷ್ಯಾದಲ್ಲಿಯೇ ಮೊದಲ ಬಾರಿಗೆ ವಿದ್ಯುತ್ ಉತ್ಪಾದನೆ… pic.twitter.com/PBzsaDpDrE
— CM of Karnataka (@CMofKarnataka) September 13, 2025
ಈಗಾಗಲೇ ಮಳೆಯಿಂದ ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ, ಜಾನುವಾರುಗಳ ಪ್ರಾಣ ಹಾನಿಗೆ, ಮನೆಗಳನ್ನು ಕಳೆದುಕೊಂಡವರಿಗೆ ಜಿಲ್ಲಾಡಳಿತದಿಂದ ಪರಿಹಾರ ಕೊಡಲಾಗಿದೆ. ಇತ್ತೀಚೆಗೆ ಜಿಲ್ಲಾಧಿಕಾರಿಗಳ ಸಭೆ ನಡೆಸಿ, ಇನ್ನು ಹತ್ತು ದಿನಗಳಲ್ಲಿ ಜಂಟಿ ಸಮೀಕ್ಷೆ ನಡೆಸಿ ಸರ್ಕಾರಕ್ಕೆ ವರದಿ ನೀಡುವಂತೆ ಜಿಲ್ಲಾಧಿಕಾರಿಗಳಿಗೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ವರದಿ ಆಧರಿಸಿ ಆದಷ್ಟು ಬೇಗನೆ ಬೆಳೆ ಪರಿಹಾರ ನೀಡಲಾಗುವುದು.
ಪರಿಹಾರ ನೀಡಲು ಸರ್ಕಾರದಲ್ಲಿ ಹಣದ ಕೊರತೆಯಿಲ್ಲ. ಆದರೂ ಗ್ಯಾರಂಟಿ ಯೋಜನೆಗಳಿಂದ ಸರ್ಕಾರದಲ್ಲಿ ದುಡ್ಡಿಲ್ಲ, ಅಭಿವೃದ್ಧಿ ಕಾರ್ಯಗಳಿಗೆ ದುಡ್ಡಿಲ್ಲ ಎಂದು ವಿರೋಧ ಪಕ್ಷದವರು ಸುಳ್ಳು ಪ್ರಚಾರ ಮಾಡುತ್ತಿದ್ದಾರೆ.
ಗ್ಯಾರಂಟಿ ಯೋಜನೆಗಳಿಗಾಗಿ ಇದುವರೆಗೆ ಸರ್ಕಾರ 99 ಸಾವಿರ ಕೋಟಿ ರೂಪಾಯಿಗಳನ್ನು ವೆಚ್ಚ ಮಾಡಿದೆ. ಶೀಘ್ರದಲ್ಲೇ 1ಲಕ್ಷ ಕೋಟಿ ರೂಪಾಯಿಗಳನ್ನು ಮುಟ್ಟುತ್ತೇವೆ. ಅಭಿವೃದ್ಧಿ ಹಾಗೂ ಗ್ಯಾರಂಟಿ ಯೋಜನೆಗಳಿಗೆ ಅಗತ್ಯವಾದ ಅನುದಾನ ಸರ್ಕಾರದಲ್ಲಿ ಲಭ್ಯವಿದೆ ಎಂದರು.