Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ನಾಳೆ ತಮಿಳುನಾಡು ಮುಖ್ಯಮಂತ್ರಿಯಾಗಿ ನಟ ವಿಜಯ್ ಅಧಿಕಾರ ಸ್ವೀಕಾರ | Actor Vijay oath

06/05/2026 5:13 PM

ಜೈಲಿನಲ್ಲಿ ನೂರಕ್ಕೆ ನೂರು ಫಲಿತಾಂಶ; ಶಿಕ್ಷಣದ ಮೂಲಕ ಹೊಸ ಜೀವನದತ್ತ ಹೆಜ್ಜೆಯಿಟ್ಟ 11 ಕೈದಿಗಳು

06/05/2026 5:06 PM

BIG NEWS: ವರದಕ್ಷಿಣೆ ಕಿರುಕುಳ ಅತ್ಯಂತ ಗಂಭೀರ ಅಪರಾಧ; ಹೈಕೋರ್ಟ್‌ನ ಜಾಮೀನು ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

06/05/2026 5:03 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಖಾಸಗಿ ಜಮೀನುಗಳಲ್ಲಿ `ಕಾಲುದಾರಿ, ಬಂಡಿದಾರಿ’ ಬಗ್ಗೆ ಸರ್ಕಾರದಿಂದ ಮಹತ್ವದ ಅದೇಶ.!
KARNATAKA

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಖಾಸಗಿ ಜಮೀನುಗಳಲ್ಲಿ `ಕಾಲುದಾರಿ, ಬಂಡಿದಾರಿ’ ಬಗ್ಗೆ ಸರ್ಕಾರದಿಂದ ಮಹತ್ವದ ಅದೇಶ.!

By kannadanewsnow5715/07/2025 6:26 AM

ಬೆಂಗಳೂರು : ರೈತರು ವ್ಯವಸಾಯದ ಉದ್ದೇಶಗಳಿಗಾಗಿ ತಿರುಗಾಡಲು ಬಳಸುವ ಖಾಸಗಿ ಜಮೀನುಗಳಲ್ಲಿ ಕಾಲುದಾರಿ, ಬಂಡಿದಾರಿ ಅಥವಾ ಸೌಲಭ್ಯ ಒದಗಿಸುವ ಸಲುವಾಗಿ ಕ್ರಮವಹಿಸುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

ರಾಜ್ಯದಲ್ಲಿ ರೈತರು ವ್ಯವಸಾಯದ ಉದ್ದೇಶಗಳಿಗಾಗಿ ಬಳಸುವ ಕೃಷಿ ಸಲಕರಣೆಗಳನ್ನು ಸಾಗಿಸಲು ಅನ್ಯ ಭೂಮಾಲೀಕರ ಖಾಸಗಿ ಜಮೀನುಗಳಲ್ಲಿ ತಿರುಗಾಡಲು ‘ದಾರಿ’ ಸಮಸ್ಯೆ ಇದ್ದು, ಬಳಕೆದಾರ ರೈತರುಗಳಿಗೆ ತೊಂದರೆಗಳಾಗುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ‘ದಾರಿ’ ಸಮಸ್ಯೆ ಬಹುಕಾಲದಿಂದಲೂ ಇದ್ದು, ಅಕ್ಕಪಕ್ಕದ ಜಮೀನುಗಳ ರೈತರು ಕೆಲವು ಖಾಸಗಿ ಜಮೀನುಗಳನ್ನು ದಾಟಿಕೊಂಡು ಕೃಷಿ ಪೂರಕ ಚಟುವಟಿಕೆಗಳನ್ನು ಜರುಗಿಸಲು ಹಾಗೂ ಬೆಳೆದ ಫಸಲನ್ನು ಹೊರತರಲಾಗದೆ ನಷ್ಟ ಹೊಂದುತ್ತಿರುವುದು ಕೆಲವು ಮಾಧ್ಯಮಗಳಿಂದ ತಿಳಿದು ಬಂದಿರುತ್ತದೆ ಹಾಗೂ ಈ ಬಗ್ಗೆ ಸಾರ್ವಜನಿಕರಿಂದ ಮನವಿ/ದೂರುಗಳು ಸ್ವೀಕೃತವಾಗಿರುತ್ತವೆ.

ಗ್ರಾಮ ನಕಾಶೆ ಕಂಡ ದಾರಿಗಳಲ್ಲಿ ಬಳಕೆದಾರ ರೈತರು ತಿರುಗಾಡಲು ಅವಕಾಶವಿದ್ಯಾಗ್ಯೂ ಕೆಲವು ಭೂಮಾಲೀಕರು ಬಳಕೆದಾರ ರೈತರುಗಳಿಗೆ ತಿರುಗಾಡಲು ಅಡ್ಡಿಪಡಿಸುತ್ತಿರುವುದು ಅಥವಾ ಅಂತಹ ಜಾಗಗಳನ್ನು ಮುಚ್ಚಿರುವುದು ಹಾಗೂ ರೈತರು ಬಹುಕಾಲದಿಂದಲೂ ಬಳಸುವ ದಾರಿಗಳಲ್ಲಿ ತಿರುಗಾಡಲು ಕೆಲವು ರೈತರ ಮಧ್ಯದ ವೈಯಕ್ತಿಕ ದ್ವೇಷ/ಅಸೂಯೆಗಳು ಮತ್ತು ಹೊಂದಾಣಿಕೆಯ ಕೊರತೆಯಿಂದಾಗಿ ಬಳಕೆದಾರ ರೈತರ ತೊಂದರೆಗಳಿಗೆ ಬಹುತೇಕ ಕಾರಣಗಳಾಗಿರುವುದು ಕಂಡುಬರುತ್ತದೆ.

ಕರ್ನಾಟಕ ಭೂ ಕಂದಾಯ ನಿಯಮಗಳು, 1966ರ ನಿಯಮ 59 ರಲ್ಲಿ ‘ದಾರಿಯ ಹಕ್ಕುಗಳು ಮತ್ತು ಇತರೆ ಅನುಭೋಗದ ಹಕ್ಕುಗಳ ಬಗ್ಗೆ ತಿಳಿಸಲಾಗಿದ್ದು, ಸಂಬಂಧಪಟ್ಟ ಜಮೀನುಗಳ ಭಾಗಿದಾರರು ಒಪ್ಪಿರುವಂತಹ ಸಂದರ್ಭದಲ್ಲಿ ಹಕ್ಕುಗಳ ದಾಖಲೆ ರಿಜಿಸ್ಟರ್ನಲ್ಲಿ ನಮೂದು ಮಾಡಲು ಅವಕಾಶವಿದೆ.

The Indian Easement Act, 1882 ರಂತೆ ಪ್ರತಿ ಜಮೀನಿನ ಮಾಲೀಕರು ಅಥವಾ ಜಮೀನಿನ ಅನುಭವದಲ್ಲಿರುವವರು ಅವರ ಭೂಮಿಯನ್ನು ಪ್ರವೇಶಿಸುವ ಹಕ್ಕು ಮತ್ತು ವಹಿವಾಟಿನ (Easement) ಹಕ್ಕನ್ನು ಹೊಂದಿದ್ದು, ಇದಕ್ಕೆ ಬಾಜುದಾರರಿಂದ ಯಾವುದೇ ಹಸ್ತಕ್ಷೇಪಕ್ಕೆ ಅಥವಾ ಈ ಬಗ್ಗೆ ಸದರಿ ಹಕ್ಕನ್ನು ಕ್ಷೀಣಿಸುವುದಕ್ಕೆ ಸಾಧ್ಯವಿರುವುದಿಲ್ಲ ಎಂಬುದಾಗಿ ತಿಳಿಸಲಾಗಿದ್ದು, ಈ ನಿಟ್ಟಿನಲ್ಲಿ ಕ್ರಮವಹಿಸಲು ಅವಕಾಶವಿದೆ. ಅಲ್ಲದೇ, Code of Criminal Procedure, 1973ರ ಕಲಂ 147 ರನ್ವಯ ‘ಭೂಮಿ ಮತ್ತು ನೀರಿನ ಹಕ್ಕಿನ ಉಪಯೋಗದ ಕುರಿತು ಸ್ಥಳೀಯ ಶಾಂತಿಗೆ ಭಂಗ ಉಂಟಾಗುವ ಸಂದರ್ಭಗಳಲ್ಲಿ ಅದನ್ನು ನಿವಾರಿಸಲು ಕಾನೂನು ರೀತ್ಯಾ ತಹಶೀಲ್ದಾರ್ ರವರು ತಾಲ್ಲೂಕು ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ ಆಗಿ ಕ್ರಮವಹಿಸುವ ಅಧಿಕಾರ ಹೊಂದಿರುತ್ತಾರೆ.

ಅದರಂತೆ, ತಾಲ್ಲೂಕಿನ ತಹಶೀಲ್ದಾರ್ಗಳು ನಕಾಶೆ ಕಂಡ ಕಾಲುದಾರಿ, ಬಂಡಿದಾರಿ ಅಥವಾ ರಸ್ತೆಗಳಲ್ಲಿ ಅನ್ಯ ಕೃಷಿ ಬಳಕೆದಾರರು ತಿರುಗಾಡಲು ಅವಕಾಶ ನೀಡದೆ ಅಡ್ಡಿಪಡಿಸುವಂತಹ ಅಥವಾ ಬಳಸಲು ಮುಚ್ಚಿರುವಂತಹ ಸಂದರ್ಭದಲ್ಲಿ ಅವುಗಳನ್ನು ತೆರವುಗೊಳಿಸಿ ಅಂತಹ ತಿರುಗಾಡಲು ದಾರಿಗಳನ್ನು ಸುಗಮಗೊಳಿಸಲು ಕ್ರಮವಹಿಸುವಂತೆ ಸೂಚಿಸಿದೆ.

cart paths' on private lands! Good news for the state's farmers: Important order from the government regarding 'footpaths
Share. Facebook Twitter LinkedIn WhatsApp Email

Related Posts

ಒಳಮೀಸಲಾತಿ ಜಾರಿ ಐತಿಹಾಸಿಕ ತೀರ್ಮಾನ: ಸರ್ಕಾರ ಸಾಮಾಜಿಕ ನ್ಯಾಯಕ್ಕೆ ಬದ್ಧ – ಸಿಎಂ ಸಿದ್ಧರಾಮಯ್ಯ

06/05/2026 4:51 PM2 Mins Read

ಶಾಸಕರಿಗೆ ಟಿಕೆಟ್ ವಿತರಣೆಗೂ IPL ಫೈನಲ್ ಪಂದ್ಯ ಸ್ಥಳಾಂತರಕ್ಕೂ ಸಂಬಂಧವಿಲ್ಲ: ಡಿಸಿಎಂ ಡಿಕೆಶಿ ಸ್ಪಷ್ಟನೆ

06/05/2026 4:48 PM2 Mins Read

ಸಚಿವ ಕೆ.ಜೆ. ಜಾರ್ಜ್ ಅವರ ನಿರ್ದೇಶನ: ಜುಲೈ.1𝟱ರೊಳಗಾಗಿ ಮಂಗಳೂರಿನ ಕಡಂದಲೆ ಉಪಕೇಂದ್ರ ಕಾಮಗಾರಿ ಪೂರ್ಣ

06/05/2026 4:46 PM2 Mins Read
Recent News

BREAKING: ನಾಳೆ ತಮಿಳುನಾಡು ಮುಖ್ಯಮಂತ್ರಿಯಾಗಿ ನಟ ವಿಜಯ್ ಅಧಿಕಾರ ಸ್ವೀಕಾರ | Actor Vijay oath

06/05/2026 5:13 PM

ಜೈಲಿನಲ್ಲಿ ನೂರಕ್ಕೆ ನೂರು ಫಲಿತಾಂಶ; ಶಿಕ್ಷಣದ ಮೂಲಕ ಹೊಸ ಜೀವನದತ್ತ ಹೆಜ್ಜೆಯಿಟ್ಟ 11 ಕೈದಿಗಳು

06/05/2026 5:06 PM

BIG NEWS: ವರದಕ್ಷಿಣೆ ಕಿರುಕುಳ ಅತ್ಯಂತ ಗಂಭೀರ ಅಪರಾಧ; ಹೈಕೋರ್ಟ್‌ನ ಜಾಮೀನು ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

06/05/2026 5:03 PM

BREAKING: ಟಿವಿಕೆ ಪಕ್ಷದ ಅಧ್ಯಕ್ಷ ವಿಜಯ್ ಗೆ ಕಾನೂನು ಸಂಕಷ್ಟ: ಹೈಕೋರ್ಟ್ ಮೆಟ್ಟಿಲೇರಿ ಆಸ್ತಿ ವಿವರ ಮುಚ್ಚಿಟ್ಟ ಆರೋಪ

06/05/2026 5:00 PM
State News
KARNATAKA

ಒಳಮೀಸಲಾತಿ ಜಾರಿ ಐತಿಹಾಸಿಕ ತೀರ್ಮಾನ: ಸರ್ಕಾರ ಸಾಮಾಜಿಕ ನ್ಯಾಯಕ್ಕೆ ಬದ್ಧ – ಸಿಎಂ ಸಿದ್ಧರಾಮಯ್ಯ

By kannadanewsnow0906/05/2026 4:51 PM KARNATAKA 2 Mins Read

ಮೈಸೂರು: ಆರ್ಥಿಕ ಹಾಗೂ ಸಾಮಾಜಿಕ ಶಕ್ತಿಗಾಗಿ ಶಿಕ್ಷಣ ಅಗತ್ಯವಾಗಿದ್ದು, ಭೋವಿ ಜನಾಂಗದವರು ಶಿಕ್ಷಣಕ್ಕೆ ಒತ್ತು ನೀಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.…

ಶಾಸಕರಿಗೆ ಟಿಕೆಟ್ ವಿತರಣೆಗೂ IPL ಫೈನಲ್ ಪಂದ್ಯ ಸ್ಥಳಾಂತರಕ್ಕೂ ಸಂಬಂಧವಿಲ್ಲ: ಡಿಸಿಎಂ ಡಿಕೆಶಿ ಸ್ಪಷ್ಟನೆ

06/05/2026 4:48 PM

ಸಚಿವ ಕೆ.ಜೆ. ಜಾರ್ಜ್ ಅವರ ನಿರ್ದೇಶನ: ಜುಲೈ.1𝟱ರೊಳಗಾಗಿ ಮಂಗಳೂರಿನ ಕಡಂದಲೆ ಉಪಕೇಂದ್ರ ಕಾಮಗಾರಿ ಪೂರ್ಣ

06/05/2026 4:46 PM

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: ಮೂವರು IPS ಅಧಿಕಾರಿಗಳನ್ನು ವರ್ಗಾವಣೆ

06/05/2026 4:36 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.