Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನನ್ನ ಮತ್ತು ಸಿದ್ದರಾಮಯ್ಯ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ: ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ

BREAKING : RTE ಅಡಿ SC, ST ವಿದ್ಯಾರ್ಥಿಗಳಿಗೆ 10ನೇ ತರಗತಿ ಪ್ರವೇಶಾತಿ: ರಾಜ್ಯ ಸರ್ಕಾರದ ಸುತ್ತೋಲೆಗೆ ಹೈಕೋರ್ಟ್‌ ತಡೆ!

BREAKING : ಕೊಪ್ಪಳದಲ್ಲಿ ತಂದೆ, ಅಕ್ಕನ ಕೊಲೆಗೆ ಬಿಗ್ ಟ್ವಿಸ್ಟ್ : ಪೋಲೀಸರ ತನಿಖೆಯಲ್ಲಿ ಸ್ಪೋಟಕ ಮಾಹಿತಿ ಬಹಿರಂಗ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ರೈತರಿಗೆ ಗುಡ್ ನ್ಯೂಸ್ : ವಾರಸುದಾರರ ಹೆಸರಿಗೆ ಪಹಣಿ ನೋಂದಣಿ, ಮನೆ ಬಾಗಿಲಿಗೇ `ಪೌತಿ ಖಾತೆ’.!
KARNATAKA

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ವಾರಸುದಾರರ ಹೆಸರಿಗೆ ಪಹಣಿ ನೋಂದಣಿ, ಮನೆ ಬಾಗಿಲಿಗೇ `ಪೌತಿ ಖಾತೆ’.!

By kannadanewsnow57

ಬೆಂಗಳೂರು: ರೈತರು ತಮ್ಮ ಜಮೀನುಗಳನ್ನು ಪೌತಿ ಮಾಡಿಸಿಕೊಳ್ಳಲು ಇನ್ಮುಂದೆ ಕಂದಾಯ ಇಲಾಖೆ ಕಚೇರಿವರೆಗೂ ಅಲೆಯಬೇಕಿಲ್ಲ. ಸರಕಾರವೇ ಇ-ಪೌತಿ ಆಂದೋಲನದ ಮೂಲಕ ನಿಮ್ಮ ಮನೆ ಬಾಗಿಲಿಗೆ ಬರಲಿದೆ.

ರಾಜ್ಯದಲ್ಲಿ ಮೃತಪಟ್ಟ ಜಮೀನು ಮಾಲೀಕರ ಹೆಸರಿನಲ್ಲಿರುವ ಪಹಣಿಗಳನ್ನು ವಾರಸುದಾರರ ಹೆಸರಿಗೆ ನೋಂದಣಿ ಮಾಡಿಕೊಡಲು ಈ ಹಿಂದಿನಿಂದಲೂ ಅಭಿಯಾನಗಳು ನಡೆದಿವೆ. ಹೋಬಳಿ, ಗ್ರಾಮ ಮಟ್ಟದಲ್ಲಿ ಅಭಿಯಾನ ನಡೆದಿವೆ. ಆದರೂ ಇನ್ನು ಕೆಲವು ಪ್ರಕರಣ ಬಾಕಿ ಇದ್ದು, ಕಂದಾಯ ಇಲಾಖೆ ಸಚಿವರ ನಿರ್ದೇಶನದ ಮೇರೆಗೆ ಮನೆ ಬಾಗಿಲಿಗೆ ಕಂದಾಯ ಸೇವೆಗಳ ‘ಇ-ಪೌತಿ’ ಆಂದೋಲನ ಆರಂಭಿಸಲಾಗಿದೆ.

ಈ ಯೋಜನೆಯಡಿ ಕಂದಾಯ ನಿರೀಕ್ಷಕರು ಮತ್ತು ಗ್ರಾಮ ಅಭಿವೃದ್ಧಿ ಅಧಿಕಾರಿಗಳು ರೈತರ ಮನೆ ಬಾಗಿಲಿಗೆ ತೆರಳಿ, ವಾರಸುದಾರರಿಗೆ ಮೊಬೈಲ್ ಮೂಲಕ ಪೌತಿ ಖಾತೆಯನ್ನು ನೋಂದಾಯಿಸಲಿದ್ದಾರೆ. ಈ ಪ್ರಕ್ರಿಯೆಯಲ್ಲಿ ಆಧಾರ್ ಸೀಡಿಂಗ್‌ನ ಮೂಲಕ ಭೂಮಿ ಹಿಡುವಳಿಯ ನಿಖರ ಮಾಹಿತಿಯನ್ನು ಸಂಗ್ರಹಿಸಲಾಗುತ್ತದೆ.

ಜಿಲ್ಲೆಯಲ್ಲಿ ಮೃತಪಟ್ಟ 75,000 ಜಮೀನುಗಳ ಮಾಲೀಕರ ಪಹಣಿಗಳನ್ನು ವಾರಸುದಾರರ ಹೆಸರಿಗೆ ನೋಂದಣಿ ಮಾಡಿಕೊಡಲು ಇ-ಪೌತಿ ಆಂದೋಲನವನ್ನು ಆರಂಭಿಸಿದೆ. ಆಧಾರ್ ಜೋಡಣೆಯಿಂದ ಕೃಷಿ ಭೂಮಿಯ ಪ್ರಮಾಣ, ರೈತರ ಭೂ ಹಿಡುವಳಿ, ಮತ್ತು ಸಣ್ಣ ಹಾಗೂ ಅತಿ ಸಣ್ಣ ರೈತರ ಸಂಖ್ಯೆಯ ಬಗ್ಗೆ ನಿಖರ ಅಂಕಿ-ಅಂಶಗಳು ಲಭ್ಯವಾಗಲಿವೆ.

ಮರಣ ಹೊಂದಿದ ವ್ಯಕ್ತಿಯ ಹೆಸರಿನಲ್ಲಿರುವ ಆಸ್ತಿಯನ್ನು ತಮ್ಮ ಕಾನೂನು ಬದ್ದ ವಾರಸುದಾರರ ಹೆಸರಿಗೆ ಜಮೀನಿನ ಖಾತೆಯನ್ನು ವರ್ಗಾವಣೆ ಮಾಡುವುದನ್ನು ಪೌತಿ ಖಾತೆ ಎನ್ನಲಾಗುವುದು.

ಮನೆ ಬಾಗಿಲಿಗೆ ಹೋಗಿ ಪೌತಿ ಖಾತೆ ಅಭಿಯಾನ ನಡೆಸುತ್ತಿರುವುದರಿಂದ ಅರ್ಹರಿಗೆ ಸುಲಭವಾಗಿ ಪೌತಿ ಖಾತೆ ಲಭ್ಯವಾಗುತ್ತದೆ. ಜಮೀನಿನ ವಾರಸುದಾರಿಕೆಯ ಪಹಣಿ ಸಿಗುತ್ತದೆ.

ಇ-ಪೌತಿ ಆಂದೋಲನಕ್ಕಾಗಿ ಕಂದಾಯ ಇಲಾಖೆಯು ಪ್ರತ್ಯೇಕ ತಂತ್ರಾಂಶ ಅಭಿವೃದ್ಧಿಪಡಿಸಿದೆ. ಈ ತಂತ್ರಾಂಶವು ವಂಶವೃಕ್ಷದ ಆಧಾರದ ಮೇಲೆ ವಾರಸುದಾರರ ಮಾಹಿತಿಯನ್ನು ಸಂಗ್ರಹಿಸಿ, ಆಧಾರ್ ಸಂಖ್ಯೆಯ ಮೂಲಕ ಒಟಿಪಿ ಪರಿಶೀಲನೆ ನಡೆಸುತ್ತದೆ.

ಈ ಪ್ರಕ್ರಿಯೆಯು ಪೌತಿ ಖಾತೆ ನೋಂದಣಿಯಲ್ಲಿ ಸಂಭವಿಸಬಹುದಾದ ಅಕ್ರಮ ಕಡಿವಾಣ ಹಾಕಲು ಮತ್ತು ರೈತರಿಗೆ ತಮ್ಮ ಆಸ್ತಿಯ ದಾಖಲೆಗಳನ್ನು ಸರಿಪಡಿಸಿಕೊಳ್ಳಲು ಈ ಯೋಜನೆಯು ಸರಳ ಮತ್ತು ಪಾರದರ್ಶಕ ವೇದಿಕೆಯಾಗಿದೆ.

Share. Facebook Twitter LinkedIn WhatsApp Email

Related Posts

ನನ್ನ ಮತ್ತು ಸಿದ್ದರಾಮಯ್ಯ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ: ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ

2 Mins Read

BREAKING : RTE ಅಡಿ SC, ST ವಿದ್ಯಾರ್ಥಿಗಳಿಗೆ 10ನೇ ತರಗತಿ ಪ್ರವೇಶಾತಿ: ರಾಜ್ಯ ಸರ್ಕಾರದ ಸುತ್ತೋಲೆಗೆ ಹೈಕೋರ್ಟ್‌ ತಡೆ!

2 Mins Read

BREAKING : ಕೊಪ್ಪಳದಲ್ಲಿ ತಂದೆ, ಅಕ್ಕನ ಕೊಲೆಗೆ ಬಿಗ್ ಟ್ವಿಸ್ಟ್ : ಪೋಲೀಸರ ತನಿಖೆಯಲ್ಲಿ ಸ್ಪೋಟಕ ಮಾಹಿತಿ ಬಹಿರಂಗ!

2 Mins Read
Recent News

ನನ್ನ ಮತ್ತು ಸಿದ್ದರಾಮಯ್ಯ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ: ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ

BREAKING : RTE ಅಡಿ SC, ST ವಿದ್ಯಾರ್ಥಿಗಳಿಗೆ 10ನೇ ತರಗತಿ ಪ್ರವೇಶಾತಿ: ರಾಜ್ಯ ಸರ್ಕಾರದ ಸುತ್ತೋಲೆಗೆ ಹೈಕೋರ್ಟ್‌ ತಡೆ!

BREAKING : ಕೊಪ್ಪಳದಲ್ಲಿ ತಂದೆ, ಅಕ್ಕನ ಕೊಲೆಗೆ ಬಿಗ್ ಟ್ವಿಸ್ಟ್ : ಪೋಲೀಸರ ತನಿಖೆಯಲ್ಲಿ ಸ್ಪೋಟಕ ಮಾಹಿತಿ ಬಹಿರಂಗ!

BIG NEWS : ಕರ್ನಾಟಕದ ‘ಗ್ರಾಮ ಪಂಚಾಯತಿ’ಗಳು ಈ 15 ಮೂಲಭೂತ ಸೌಕರ್ಯಗಳನ್ನು ಒದಗಿಸುವುದು ಕಡ್ಡಾಯ !

State News
KARNATAKA

ನನ್ನ ಮತ್ತು ಸಿದ್ದರಾಮಯ್ಯ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ: ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ತಮ್ಮ ನಡುವೆ ಯಾವುದೇ ರೀತಿಯ ಭಿನ್ನಾಭಿಪ್ರಾಯಗಳಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ.…

BREAKING : RTE ಅಡಿ SC, ST ವಿದ್ಯಾರ್ಥಿಗಳಿಗೆ 10ನೇ ತರಗತಿ ಪ್ರವೇಶಾತಿ: ರಾಜ್ಯ ಸರ್ಕಾರದ ಸುತ್ತೋಲೆಗೆ ಹೈಕೋರ್ಟ್‌ ತಡೆ!

BREAKING : ಕೊಪ್ಪಳದಲ್ಲಿ ತಂದೆ, ಅಕ್ಕನ ಕೊಲೆಗೆ ಬಿಗ್ ಟ್ವಿಸ್ಟ್ : ಪೋಲೀಸರ ತನಿಖೆಯಲ್ಲಿ ಸ್ಪೋಟಕ ಮಾಹಿತಿ ಬಹಿರಂಗ!

BIG NEWS : ಕರ್ನಾಟಕದ ‘ಗ್ರಾಮ ಪಂಚಾಯತಿ’ಗಳು ಈ 15 ಮೂಲಭೂತ ಸೌಕರ್ಯಗಳನ್ನು ಒದಗಿಸುವುದು ಕಡ್ಡಾಯ !

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.