ಬೆಳಗಾವಿ : ರಾಜ್ಯದಲ್ಲಿ ಪ್ರಸಕ್ತ ವರ್ಷದ ಮುಂಗಾರು ಹಂಗಾಮಿನಲ್ಲಿ ಬೆಳೆ ನಷ್ಟ ಅನುಭವಿಸಿದ 14.21 ಲಕ್ಷ ರೈತರಿಗೆ 2,249 ಕೋಟಿ ರೂ. ಬೆಳೆ ಪರಿಹಾರ ನೀಡಲಾಗಿದೆ.
ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನಸಭೆಯಲ್ಲಿಉತ್ತರ ಕರ್ನಾಟಕ ಅಭಿವೃದ್ಧಿ ಕುರಿತು ಚರ್ಚೆ ನಡೆದ ಸಂದರ್ಭದಲ್ಲಿ ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ಉತ್ತರ ನೀಡಿದರು.
2023ರಲ್ಲಿ ಬರ ಪರಿಸ್ಥಿತಿ ರಾಜ್ಯದಲ್ಲಿ ತಲೆದೋರಿದಾಗ, ಕೇಂದ್ರ ಸರ್ಕಾರ ನೆರವಿಗೆ ಬರಲಿಲ್ಲ. ನಮ್ಮ ಸರ್ಕಾರ ಸುಪ್ರಿಂಕೋರ್ಟ್ ಮೊರೆಹೋಗಿ ಪರಿಹಾರ ಕೇಳುವ ಪ್ರಸಂಗ ಬರುವಂತಾಯಿತು. ಪರಿಹಾರ ಅನುದಾನಕ್ಕಾಗಿ ಸುಪ್ರಿಂಕೊರ್ಟ್ ಮೊರೆಹೋಗಿ ಅನುದಾನ ಪಡೆದದ್ದು ದೇಶದ ಇತಿಹಾಸದಲ್ಲಿ ದಾಖಲಾಯಿತು. ಈ ಸಂದರ್ಭದಲ್ಲಿ ಕರ್ನಾಟಕದ ಇತಿಹಾಸದಲ್ಲಿಯೇ ಅತಿ ಹೆಚ್ಚಿನ ಪರಿಹಾರವನ್ನು ನಮ್ಮ ಸರ್ಕಾರ ಕೊಟ್ಟಿದೆ.
38 ಲಕ್ಷ ರೈತರಿಗೆ ಸುಮಾರು 4,300 ಕೋಟಿ ರೂ. ಪರಿಹಾರವನ್ನು ನಾವು ಕೊಟ್ಟಿದ್ದೇವೆ. ಈ ವರ್ಷದ ಮುಂಗಾರು ಹಂಗಾಮಿನಲ್ಲಿ ಬೆಳೆ ನಷ್ಟ ಅನುಭವಿಸಿದ 14.21 ಲಕ್ಷ ರೈತರಿಗೆ ಈಗಾಗಲೇ 2,249 ಕೋಟಿ ರೂ. ಪರಿಹಾರವನ್ನು ನೀಡಿದ್ದೇವೆ.








