ಬೆಂಗಳೂರು: ರಾಜ್ಯದ ರೈತರಿಗೆ ಸಂತಸದ ಸುದ್ದಿ ಎನ್ನುವಂತೆ ಈ ಬಾರಿ ಹಿಂಗಾರು ಮಳೆಯೂ ಉತ್ತಮವಾಗಿ ಆಗುವುದಾಗಿ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಈ ಬಗ್ಗೆ ಬೆಂಗಳೂರು ಕೇಂದ್ರ ಹವಾಮಾನ ಇಲಾಖೆಯ ನಿರ್ದೇಶಕ ಸಿಎಸ್ ಪಾಟೀಲ್ ಮಾಹಿತಿ ಹಂಚಿಕೊಂಡಿದ್ದು, ವಾಯುಭಾರ ಕುಸಿತದ ಪರಿಣಾವಾಗಿ ರಾಜ್ಯದಲ್ಲಿ ಹಿಂಗಾರು ಕ್ರಿಯಾಶೀಲವಾಗಿದ್ದು, ಈ ವಾರಾಂತ್ಯದವರೆಗೂ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂಬುದಾಗಿ ತಿಳಿಸಿದ್ದಾರೆ.
ಕಳೆದ ಒಂದು ವಾರದಿಂದ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ. ಹವಾಮಾನ ಮುನ್ಸೂಚನೆಯ ಪ್ರಕಾರ ಇನ್ನೂ ಒಂದು ವಾರ ಮುಂದುವರೆಯಲಿದೆ. ಈಶಾನ್ಯ ಹಿಂಗಾರು ಮಳೆ ಅಕ್ಟೋಬರ್.16ರಂದು ಪ್ರಾರಂಭವಾಗಿದ್ದು, ಡಿಸೆಂಬರ್ ವರೆಗೂ ಮುಂದುವರೆಯಲಿದೆ ಎಂಬುದಾಗಿ ಮಾಹಿತಿ ನೀಡಿದ್ದಾರೆ.
ಅರಬ್ಬೀ ಸಮುದ್ರದಲ್ಲಿ ಉಂಟಾಗಿರುವಂತ ವಾಯುಭಾರ ಕುಸಿತದ ಪರಿಣಾಮವಾಗಿ ಹಿಂಗಾರು ಚೇತರಿಕೆಯನ್ನು ಕಾಣಲಿದೆ. ದಕ್ಷಿಣ ಭಾರತದ ರಾಜ್ಯಗಳಲ್ಲಿ ಮಳೆಯಾಗುತ್ತಿದೆ. ಈ ವಾಯುಭಾರ ಕುಸಿತದ ಜೊತೆಗೆ ಮೇಲ್ಮೈ ಸುಳಿಗಾಳಿ ಉಂಟಾಗಿದೆ. ಅಲ್ಲದೇ ಬಂಗಾಳ ಕೊಲ್ಲಿಯ ದಕ್ಷಿಮ ಭಾಗದಲ್ಲಿ ಮತ್ತೊಂದು ವಾಯುಭಾರ ಕುಸಿತವಾಗಲಿದೆ. ಈ ಹಿನ್ನಲೆಯಲ್ಲಿ ರಾಜ್ಯದಲ್ಲಿ ಅಕ್ಟೋಬರ್.26ರವರೆಗೂ ಉತ್ತಮ ಮಳೆಯ ನಿರೀಕ್ಷೆಯಿದೆ ಎಂದು ತಿಳಿಸಿದ್ದಾರೆ.
ಹಿಂಗಾರು ಮಳೆಯು ನವೆಂಬರ್ ನಲ್ಲಿಯೂ ಮುಂದುವರೆಯಲಿದ್ದು, ಡಿಸೆಂಬರ್ ನಲ್ಲಿ ದುರ್ಬಲಗೊಂಡು, ಕಡಿಮೆಯಾಗಲಿದೆ. ವಾಯುಭಾರ ಕುಸಿತದಿಂದ ಹಿಂಗಾರು ಚುರುಕಾಗಿರುವುದರಿಂದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಮಳೆಯಾಗುವ ಮುನ್ಸೂಚನೆಗಳಿವೆ ಎಂಬುದಾಗಿ ಹೇಳಿದರು.
ಈ ವಾರಾಂತ್ಯದವರೆಗೂ ಬೆಂಗಳೂರಲ್ಲಿ ಸಾಧಾರಣ ಮಳೆಯಾಗಲಿದೆ. ಬೆಂಗಳೂರು ನಗರ, ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಚಾಮರಾಜನಗರ, ಕೊಡಗು, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಲ್ಲಿ ಸಾಧಾರಣ ಪ್ರಮಾಣದ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂಬುದಾಗಿ ಮುನ್ಸೂಚನೆ ನೀಡಿದ್ದಾರೆ.
‘BJP ಪುಡಾರಿ’ಗಳು ಚೆಡ್ಡಿ ಹಾಕಲು ಶುರುವಾದ ಮೇಲೆ ಸಮಸ್ಯೆಗಳು ಹೆಚ್ಚಾಗಿವೆ: ಕಾಂಗ್ರೆಸ್ ಶಾಸಕ
GOOD NEWS : ಕರ್ನಾಟಕದಲ್ಲಿ `18 ಸಾವಿರ ಶಿಕ್ಷಕರ ನೇಮಕಾತಿ’ : ‘TET ಪರೀಕ್ಷೆ’ಗೆ ಅರ್ಜಿ ಆಹ್ವಾನ | TET Exam 2025








